ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿಯ ಹಲವು ನಾಯಕರು ಬಸವರಾಜ ಬೊಮ್ಮಾಯಿ (New Chief Minister of Karnataka) ಅವರಿಗೆ ಶುಭಕೋರಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಇಳಿಸಲು ಕಾರಣೀಭೂತರಾದ ಬಸನಗೌಡ ಪಾಟೀಲ್ ಯತ್ನಾಳ್, ‘ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದೇ ವೇಳೆ ಪ್ರತಿಕ್ರಿಯಿಸಿದ ಶಾಸಕ ಅರವಿಂದ ಬೆಲ್ಲದ, ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತಗಾರ. ಅವರ ಆಯ್ಕೆಯಿಂದ ಬೇಸರವಾಗಿಲ್ಲ. ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ನೂತನ ಸಿಎಂ ಜೊತೆ ಉತ್ತಮ ಕೆಲಸ ಮಾಡುತ್ತೇನೆ. ಕೇಂದ್ರ ನಾಯಕರು ಯಾವುದೇ ಅಧಿಕಾರ ನೀಡಿದರೂ ನಿಭಾಯಿಸುತ್ತೇನೆ. ಪಕ್ಷದ ಉತ್ತಮ ಕಾರ್ಯಕರ್ತನಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕಾಂಗ ಪಕ್ಷದ ಸಭೆ ಬಳಿಕ ಪ್ರತಿಕ್ರಿಯಿಸಿದ ಶಾಸಕ ಶ್ರೀರಾಮುಲು, ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಶುಭಹಾರೈಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ pic.twitter.com/MrlF5ae6Uz
— H D Kumaraswamy (@hd_kumaraswamy) July 27, 2021
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಟ್ವೀಟ್ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅಭಿನಂದನೆ ಸಲ್ಲಿಸಿದ್ದಾರೆ. ಬಸವರಾಜ ಬೊಮ್ಮಾಯಿಗೆ ಆಡಳಿತದಲ್ಲಿ ಒಳ್ಳೆಯ ಅನುಭವವಿದೆ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಿದ್ದಾರೆ ಎಂದು ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ತಿಳಿವಳಿಕೆಯಿದೆ. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಈ ಅನ್ಯಾಯವನ್ನು ಸರಿಪಡಿಸುವಿರೆಂದು ಭಾವಿಸುವೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಆಶಿಸಿದ್ದಾರೆ.
ಇದನ್ನೂ ಓದಿ:
Basavaraj Bommai: ಯಡಿಯೂರಪ್ಪ ಉತ್ತರಾಧಿಕಾರಿ ಬಸವರಾಜ ಬೊಮ್ಮಾಯಿ, ಹೋರಾಟದ ಹಾದಿಯಲ್ಲಿ ಅರಳಿದ ನಾಯಕ
ಮಾಸ್ ಲೀಡರ್ಗಳು ಮತ್ತು ಬಿಜೆಪಿಯ ಹೊಸ ಹೈಕಮಾಂಡ್ ಸಂಸ್ಕೃತಿ: ಯಡಿಯೂರಪ್ಪ ಎಂಬ ಜೀವಂತ ಅಧ್ಯಾಯ
(Basavaraj Bommai Karnataka new Chief Minister MLA Arvind Bellad Yatnal excited for selection)