ಕರ್ನಾಟಕದಲ್ಲಿ ಪವರ್ ಕಟ್ ಇಲ್ಲ; ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ನೀಡುತ್ತೇವೆ: ಬಸವರಾಜ ಬೊಮ್ಮಾಯಿ
Basavaraj Bommai: ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಮಳೆಯಿಂದಾದ ಅನಾಹುತ, ಕ್ರಮಗಳ ಕುರಿತು ಚರ್ಚೆ ಮಾಡಲಾಗಿದೆ. ಇದೇ ವೇಳೆ, ಕಲ್ಲಿದ್ದಲು ಬಿಕ್ಕಟ್ಟು ಕುರಿತು ಕೂಡ ಮಾತುಕತೆ ನಡೆಸಲಾಗಿದೆ.
ಬೆಂಗಳೂರು: ಇಂದು ಎರಡು ಪ್ರಮುಖ ಸಭೆಗಳನ್ನ ನಡೆಸಿದ್ದೇನೆ. ವಿದ್ಯುತ್ ಉತ್ಪಾದನೆ ಹಾಗೂ ಮಳೆಯಿಂದಾದ ಪರಿಣಾಮಗಳ ಕುರಿತು ಸಭೆ ನಡೆಸಿದ್ದೇನೆ. ಕೇಂದ್ರ ಸಚಿವರ ಭೇಟಿ ಬಳಿಕ 2 ರೇಕ್ ಕಲ್ಲಿದ್ದಲು ಬರುತ್ತಿದೆ. ಇನ್ನೂ ಎರಡು ರೇಕ್ ಕಲ್ಲಿದ್ದಲು ಕೊಡುವುದಾಗಿ ಹೇಳಿದ್ದಾರೆ. ನಾವು ಪೇಮೆಂಟ್ ಮಾಡಿದ ತಕ್ಷಣ ಪೂರೈಕೆ ಪ್ರಕ್ರಿಯೆ ನಡೆಯುತ್ತದೆ. ರಾಜ್ಯದಲ್ಲಿ ವಿದ್ಯುತ್ ಸ್ಥಗಿತ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಯಾವುದೇ ರೀತಿಯ ಪವರ್ ಕಟ್ ಇಲ್ಲ. ರಾಜ್ಯದಲ್ಲಿ ಪವರ್ ಕಟ್ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಜೊತೆಗೂ ಮಾತಾಡುತ್ತಿದ್ದೇನೆ. 10-12 ರೇಕ್ ಕಲ್ಲಿದ್ದಲು ನೀಡುವ ಕುರಿತು ಚರ್ಚಿಸಲಾಗುತ್ತಿದೆ. ಹೆಸ್ಕಾಂ ಆರ್ಥಿಕ ಸಫಲತೆ ಕಾಣಬೇಕು ಎಂದು ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ಖಾಸಗೀಕರಣದ ಭ್ರಮೆಯಲ್ಲೇ ಇರ್ತಾರೆ. ಸರ್ಕಾರ ಫೇಲ್ ಆಗಿಲ್ಲ, ಕಲ್ಲಿದ್ದಲು ಕೊರತೆ ಆಗುವುದಕ್ಕೆ ಬಿಡಲ್ಲ. ಈ ಬಾರಿ ಮಳೆ ಹೆಚ್ಚು ಆಗಿದ್ದರಿಂದ ಕಲ್ಲಿದ್ದಲು ಸಮಸ್ಯೆ ಉಂಟಾಗಿದೆ. ಒಡಿಶಾದಲ್ಲಿ ಮಳೆ ಹೆಚ್ಚಾಗಿದ್ದರಿಂದ ಕಲ್ಲಿದ್ದಲು ಸಮಸ್ಯೆ ಉಂಟಾಗಿದೆ. ಒಡಿಶಾದಿಂದ ಕಲ್ಲಿದ್ದಲು ಬರಲು ನಿಧಾನವಾಗುತ್ತಿದೆ. ಸಿದ್ದರಾಮಯ್ಯರ ಆರೋಪ ಆಧಾರ ರಹಿತವಾದದ್ದು ಎಂದು ಕೃತಕ ಅಭಾವ ಸೃಷ್ಟಿಸಿ ಖಾಸಗೀಕರಣ ಮಾಡಬಾರದು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ಉತ್ತರ ನೀಡಿದ್ದಾರೆ.
ಅಕ್ಟೋಬರ್ 1 ರಿಂದ ಈವರೆಗೂ ಮಳೆಯ ಕಾರಣದಿಂದ 21 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಗಳಿಗೆ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ. ಮಳೆಯಿಂದ ಮನೆಗಳಿಗೆ ಹಾನಿಯಾದವರಿಗೂ ಪರಿಹಾರ ಕೊಡುತ್ತೇವೆ. ಬೆಳೆ ಹಾನಿಯಾದ ರೈತರಿಗೂ ಪರಿಹಾರ ನೀಡಲು ಸೂಚನೆ ಕೊಡಲಾಗಿದೆ. ಈವರೆಗೂ ಕಲ್ಲಿದ್ದಲು ಕೊರತೆ ಆಗದಂತೆ ನೋಡಿಕೊಂಡಿದ್ದೇವೆ. ನಮ್ಮ ಪೂರೈಕೆಗೆ ವ್ಯತ್ಯಯ ಆಗದಂತೆ ನೋಡಿಕೊಳ್ತಿದ್ದೇವೆ ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಮಳೆಯಿಂದಾದ ಅನಾಹುತ, ಕ್ರಮಗಳ ಕುರಿತು ಚರ್ಚೆ ಮಾಡಲಾಗಿದೆ. ಇದೇ ವೇಳೆ, ಕಲ್ಲಿದ್ದಲು ಬಿಕ್ಕಟ್ಟು ಕುರಿತು ಕೂಡ ಮಾತುಕತೆ ನಡೆಸಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಎಸ್ಡಿಆರ್ಎಫ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಮಳೆಯಿಂದಾದ ಹಾನಿ, ಬೆಳೆ ಹಾನಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ, ಕೆ.ಗೋಪಾಲಯ್ಯ, ಭೈರತಿ ಬಸವರಾಜ್, ಮುನಿರತ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಪ್ರಸಾದ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಭಾಗಿಯಾಗಿದ್ದಾರೆ.
ಸಿಎಂ ನೇತೃತ್ವದ ಸಭೆಗೆ ಕಂದಾಯ ಸಚಿವ ಅಶೋಕ್ ಗೈರಾಗಿದ್ದಾರೆ. ಬೆಂಗಳೂರು ಉಸ್ತುವಾರಿ ಸ್ಥಾನಕ್ಕಾಗಿ ಸಚಿವರ ಮಧ್ಯೆ ಜಟಾಪಟಿ ಏರ್ಪಟ್ಟಿತ್ತು. ಸಚಿವರಾದ ಆರ್. ಅಶೋಕ್, ವಿ. ಸೋಮಣ್ಣ ಮಧ್ಯೆ ಜಟಾಪಟಿ ಉಂಟಾಗಿತ್ತು. ಇಂದು ಸಭೆಯಲ್ಲಿ ಸಭೆಯಲ್ಲಿ ವಿ. ಸೋಮಣ್ಣ ಭಾಗಿಯಾಗಿದ್ದಾರೆ. ವಿ. ಸೋಮಣ್ಣ ಜೊತೆ ಸಚಿವ ಮುನಿರತ್ನ ಸಹ ಸಭೆಯಲ್ಲಿ ಭಾಗಿಯಾಗಿದ್ದಾರೆ. ಆದರೆ, ಸಿಎಂ ಸಭೆಗೆ ಕಂದಾಯ ಸಚಿವ ಆರ್.ಅಶೋಕ್ ಗೈರಾಗಿದ್ದಾರೆ.
ಇದನ್ನೂ ಓದಿ: ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ನಾಲ್ಕು ಕಾಲೇಜುಗಳಿಗೆ ಅನುಮತಿ: ಬಸವರಾಜ ಬೊಮ್ಮಾಯಿ
ಇದನ್ನೂ ಓದಿ: ವ್ಯಾಪಕ ಮಳೆಯಿಂದ ಬೆಳೆ ಹಾನಿ; ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಹಣ ನೀಡುವ ಬಗ್ಗೆ ಬಿಸಿ ಪಾಟೀಲ್ ಹೇಳಿಕೆ
Published On - 9:54 pm, Tue, 12 October 21