AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್​ಆರ್​ಟಿಸಿ 4 ನಿಗಮಗಳಿಗೆ ಹೆಚ್ಚುವರಿ ಹಣ ನೀಡುವಂತೆ ಬಸವರಾಜ ಬೊಮ್ಮಾಯಿಗೆ ಮನವಿ

KSRTC: ಸೋಮವಾರ ಮತ್ತೊಂದು ಸಭೆ ಮಾಡುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಸಾರಿಗೆ ಸಚಿವ ಶ್ರೀರಾಮುಲು, ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸಭೆಯಲ್ಲಿ ಉಪಸ್ಥಿತರಿದ್ದರು.

ಕೆಎಸ್​ಆರ್​ಟಿಸಿ 4 ನಿಗಮಗಳಿಗೆ ಹೆಚ್ಚುವರಿ ಹಣ ನೀಡುವಂತೆ ಬಸವರಾಜ ಬೊಮ್ಮಾಯಿಗೆ ಮನವಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Sep 23, 2021 | 6:37 PM

Share

ಬೆಂಗಳೂರು: ಕೆಎಸ್​ಆರ್​ಟಿಸಿ ಸಂಸ್ಥೆ ಕುರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ನಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ 4 ನಿಗಮಗಳಿಗೆ ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ನಿಗಮದಿಂದ ಸಿಎಂ ಬೊಮ್ಮಾಯಿಗೆ ಹೀಗೆ ಮನವಿ ಮಾಡಲಾಗಿರುವ ಬಗ್ಗೆ ತಿಳಿದುಬಂದಿದೆ. ವಾರ್ಷಿಕ 2,500 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿತ್ತು. 3 ಸಾವಿರ ಕೋಟಿ ರೂಪಾಯಿ ಅನುದಾನಕ್ಕೆ ಕೆಎಸ್​ಆರ್​ಟಿಸಿ ನಿಗಮ ಬೇಡಿಕೆ ಇಟ್ಟಿದೆ.

ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹಣ ಬಿಡುಗಡೆ ಮಾಡುವ ಭರವಸೆಯನ್ನು ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. 4 ನಿಗಮಗಳನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ನಷ್ಟವಾಗುತ್ತಿದೆ. ಎಸ್​ಸಿ ಎಸ್​ಟಿ ಮಕ್ಕಳಿಗೆ ಸಮಾಜಕಲ್ಯಾಣ ಇಲಾಖೆ ಹಣ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ. SEP-TSP ಹಣ ಬಳಕೆ ಮಾಡಿಕೊಳ್ಳಲು ಸಭೆಯಲ್ಲಿ ಸಲಹೆ ನೀಡಲಾಗಿದೆ. ಸೋಮವಾರ ಮತ್ತೊಂದು ಸಭೆ ಮಾಡುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಸಾರಿಗೆ ಸಚಿವ ಶ್ರೀರಾಮುಲು, ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸಭೆಯಲ್ಲಿ ಉಪಸ್ಥಿತರಿದ್ದರು.

ಕೊರೊನಾ ಪರಿಹಾರದ ಕುರಿತು ಆರ್. ಅಶೋಕ್ ಹೇಳಿಕೆ ಕೊರೊನಾಗೆ ಬಲಿಯಾದ ಕುಟುಂಬಗಳಿಗೆ 1 ಲಕ್ಷ ರೂಪಾಯಿ ನೆರವು ನೀಡಲಾಗಿದೆ. ಪರಿಹಾರಕ್ಕಾಗಿ ಈವರೆಗೆ ಒಟ್ಟು 7,729 ಅರ್ಜಿಗಳು ಬಂದಿವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಇಂದು ಸಾಂಕೇತಿಕವಾಗಿ 10 ಜನರಿಗೆ ಪರಿಹಾರ ನೀಡಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಈಗ 1 ಲಕ್ಷ ಪರಿಹಾರ ನೀಡುತ್ತೇವೆ. ಕೇಂದ್ರದಿಂದ ಹಣ ಬಂದ ಬಳಿಕ 50 ಸಾವಿರ ನೀಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ವಿಚಾರವಾಗಿ ಪ್ರಿಯಾಂಕ್ ಖರ್ಗೆ, ಬಸನಗೌಡ ಪಾಟೀಲ್ ಯತ್ನಾಳ್ ಮಾತಿನ ಚಕಮಕಿ

Published On - 6:36 pm, Thu, 23 September 21

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ