ಬೆಂಗಳೂರು: ಕೆಎಸ್ಆರ್‌ಟಿಸಿ ಸಂಸ್ಥೆ ಕುರಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ಮುಕ್ತಾಯಗೊಂಡಿದೆ. ವಿಧಾನಸೌಧದಲ್ಲಿ ಗುರುವಾರ ನಡೆದಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ಅಂತ್ಯಗೊಂಡಿದೆ. ಸಭೆಯಲ್ಲಿ 4 ನಿಗಮಗಳಿಗೆ ಹೆಚ್ಚುವರಿಯಾಗಿ ಹಣ ನೀಡುವಂತೆ ಮನವಿ ಮಾಡಲಾಗಿದೆ. ಕೆಎಸ್ಆರ್‌ಟಿಸಿ ನಿಗಮದಿಂದ ಸಿಎಂ ಬೊಮ್ಮಾಯಿಗೆ ಹೀಗೆ ಮನವಿ ಮಾಡಲಾಗಿರುವ ಬಗ್ಗೆ ತಿಳಿದುಬಂದಿದೆ. ವಾರ್ಷಿಕ 2,500 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿತ್ತು. 3 ಸಾವಿರ ಕೋಟಿ ರೂಪಾಯಿ ಅನುದಾನಕ್ಕೆ ಕೆಎಸ್ಆರ್‌ಟಿಸಿ ನಿಗಮ ಬೇಡಿಕೆ ಇಟ್ಟಿದೆ.
ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹಣ ಬಿಡುಗಡೆ ಮಾಡುವ ಭರವಸೆಯನ್ನು ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. 4 ನಿಗಮಗಳನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ನಷ್ಟವಾಗುತ್ತಿದೆ. ಎಸ್ಸಿ ಎಸ್ಟಿ ಮಕ್ಕಳಿಗೆ ಸಮಾಜಕಲ್ಯಾಣ ಇಲಾಖೆ ಹಣ ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ. SEP-TSP ಹಣ ಬಳಕೆ ಮಾಡಿಕೊಳ್ಳಲು ಸಭೆಯಲ್ಲಿ ಸಲಹೆ ನೀಡಲಾಗಿದೆ. ಸೋಮವಾರ ಮತ್ತೊಂದು ಸಭೆ ಮಾಡುವುದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಸಾರಿಗೆ ಸಚಿವ ಶ್ರೀರಾಮುಲು, ಕೆಎಸ್ಆರ್‌ಟಿಸಿ ಅಧ್ಯಕ್ಷ ಚಂದ್ರಪ್ಪ ಹಾಗೂ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸಭೆಯಲ್ಲಿ ಉಪಸ್ಥಿತರಿದ್ದರು.
ಕೊರೊನಾ ಪರಿಹಾರದ ಕುರಿತು ಆರ್. ಅಶೋಕ್ ಹೇಳಿಕೆ
ಕೊರೊನಾಗೆ ಬಲಿಯಾದ ಕುಟುಂಬಗಳಿಗೆ 1 ಲಕ್ಷ ರೂಪಾಯಿ ನೆರವು ನೀಡಲಾಗಿದೆ. ಪರಿಹಾರಕ್ಕಾಗಿ ಈವರೆಗೆ ಒಟ್ಟು 7,729 ಅರ್ಜಿಗಳು ಬಂದಿವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಇಂದು ಸಾಂಕೇತಿಕವಾಗಿ 10 ಜನರಿಗೆ ಪರಿಹಾರ ನೀಡಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಈಗ 1 ಲಕ್ಷ ಪರಿಹಾರ ನೀಡುತ್ತೇವೆ. ಕೇಂದ್ರದಿಂದ ಹಣ ಬಂದ ಬಳಿಕ 50 ಸಾವಿರ ನೀಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: ಓಂ ಬಿರ್ಲಾರಿಂದ ಜಂಟಿ ಅಧಿವೇಶನ: ಬಿಜೆಪಿಯಿಂದ ಕೆಟ್ಟ ಸಂಪ್ರದಾಯ; ಕಾರ್ಯಕ್ರಮ ಬಹಿಷ್ಕಾರಕ್ಕೆ ಕಾಂಗ್ರೆಸ್ ನಿರ್ಧಾರ
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ವಿಚಾರವಾಗಿ ಪ್ರಿಯಾಂಕ್ ಖರ್ಗೆ, ಬಸನಗೌಡ ಪಾಟೀಲ್ ಯತ್ನಾಳ್ ಮಾತಿನ ಚಕಮಕಿ
Published On - 6:36 pm, Thu, 23 September 21