ಸ್ವಚ್ಛ, ಸುಭದ್ರ ಆಡಳಿತಕ್ಕೆ ಪ್ರಧಾನಿ ಮೋದಿ ಸೂಚನೆ; ಒಂದು ವಾರದೊಳಗೆ ಸಚಿವ ಸಂಪುಟ ರಚನೆ: ಬಸವರಾಜ ಬೊಮ್ಮಾಯಿ

| Updated By: ganapathi bhat

Updated on: Jul 30, 2021 | 8:26 PM

Basavaraj Bommai Press Meet: ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆ ಮಾಡುತ್ತೇನೆ. ಕೇಂದ್ರದ ನಾಯಕರ ಜತೆ ಯಾವುದೇ ಚರ್ಚೆ ಮಾಡಿಲ್ಲ. ಸಚಿವ ಸಂಪುಟ ರಚನೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಸ್ವಚ್ಛ, ಸುಭದ್ರ ಆಡಳಿತಕ್ಕೆ ಪ್ರಧಾನಿ ಮೋದಿ ಸೂಚನೆ; ಒಂದು ವಾರದೊಳಗೆ ಸಚಿವ ಸಂಪುಟ ರಚನೆ: ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
Follow us on

ದೆಹಲಿ: ಸ್ವಚ್ಛ, ಸುಭದ್ರ ಆಡಳಿತಕ್ಕೆ ಪ್ರಧಾನಿ ಮೋದಿ ಸೂಚಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಭೇಟಿ ವೇಳೆ ಪಕ್ಷದ ಜೊತೆ ಸಹಕರಿಸಬೇಕು ಎಂದು ಸಿಂಗ್, ನಡ್ಡಾ ಸಲಹೆ ನೀಡಿದ್ಧಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಹೆಚ್ಚು ಒತ್ತು ನೀಡುವಂತೆ ಸೂಚನೆ ಕೊಟ್ಟಿದ್ದಾರೆ. ಕೇಂದ್ರ, ರಾಜ್ಯದ ಸಹಕಾರದಲ್ಲಿ ಯೋಜನೆ ಜಾರಿಗೆ ಸಲಹೆ ಮಾಡಿದ್ದಾರೆ. ಕೇಂದ್ರದ ಯೋಜನೆಗಳು ಜನರಿಗೆ ಮುಟ್ಟಿಸುವಂತೆ ಸೂಚನೆ ನೀಡಲಾಗಿದೆ. ಮುಂದಿನ ಚುನಾವಣೆಗಳಿಗೆ ಸಿದ್ಧರಾಗುವಂತೆ ಸೂಚಿಸಿದ್ದಾರೆ ಎಂದು ದೆಹಲಿಯಲ್ಲಿ ಇಂದು (ಜುಲೈ 30) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆ ಮಾಡುತ್ತೇನೆ. ಕೇಂದ್ರದ ನಾಯಕರ ಜತೆ ಯಾವುದೇ ಚರ್ಚೆ ಮಾಡಿಲ್ಲ. ಸಚಿವ ಸಂಪುಟ ರಚನೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ರೈತರ, ಮಹಿಳೆಯರು, ಮಕ್ಕಳು, ದೀನ ದಲಿತರಿಗೆ ಭದ್ರತೆ ಒದಗಿಸಲಾಗುತ್ತದೆ. ಭದ್ರತೆಯ ಜತೆಗೆ ಇವರ ತಲಾದಾಯ ಹೆಚ್ಚಳಕ್ಕೆ ಯೋಜನೆ ಕೈಗೊಳ್ಳಲಾಗುವುದು. ಆರ್ಥಿಕ, ಸಾಮಾಜಿಕವಾಗಿ ಸ್ಥಾನಮಾನ ನೀಡಲು ಯೋಜನೆ ರೂಪಿಸಲಾಗುವುದು. ಇವರ ತಲಾದಾಯ ಹೆಚ್ಚಳವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಆಡಳಿತ ನೀಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯಕ್ಕೆ ಲಸಿಕೆ ಪೂರೈಕೆಯಲ್ಲಿ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದೇನೆ
ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಕಳವಳಕಾರಿಯಾಗಿದೆ. ಕೇರಳದ ಗಡಿ ಜಿಲ್ಲಾಡಳಿತಗಳ ಜತೆ ವಿಡಿಯೋ ಕಾನ್ಫರೆನ್ಸ್​ ನಡೆಸುವೆ. ನಾಳೆ ಬೆಂಗಳೂರಿಗೆ ತೆರಳಿದ ನಂತರ ವಿಡಿಯೋ ಕಾನ್ಫರೆನ್ಸ್​ ಭಾಗವಹಿಸಲಿದ್ದೇನೆ. ನೆರೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತಗಳ ಜತೆ ಸಂವಾದ ನಡೆಸುವೆ. ಮುಂದಿನ ತಿಂಗಳು ಮತ್ತೊಮ್ಮೆ ನಾನು ದೆಹಲಿ ಬರುತ್ತೇನೆ. ರಾಜ್ಯಕ್ಕೆ ಲಸಿಕೆ ಪೂರೈಕೆಯಲ್ಲಿ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದೇನೆ. ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗುತ್ತೇನೆ. ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಭೇಟಿ ಮಾಡುತ್ತೇನೆ. ಕರ್ನಾಟಕದ ಯೋಜನೆಗಳ ಕುರಿತು ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಮನವಿ
ಈ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಕಲಬುರಗಿಯ ಇಎಸ್ಐ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಪ್ರಾದೇಶಿಕ ಏಮ್ಸ್ ಮಾದರಿಯ ಸಂಸ್ಥೆಯನ್ನಾಗಿ ಉನ್ನತೀಕರಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸಂಪುಟ ರಚನೆಗೆ ಸಿದ್ಧವಾಗಿದೆ ಆರ್​ಎಸ್​​ಎಸ್​ ಸೂತ್ರ: ಕ್ಲೀನ್ ಮಂತ್ರಿಮಂಡಲಕ್ಕೆ ಒತ್ತು, ಒತ್ತಡ ತಂದಿದೆ

(Basavaraj Bommai on Karnaraka Cabinet formation at Delhi first visit after taking oath as Karnataka CM)

Published On - 7:35 pm, Fri, 30 July 21