ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ರಸ್ತೆ ದುರಸ್ತಿಗೆ ಆದ್ಯತೆ ನೀಡಲು ಬಸವರಾಜ ಬೊಮ್ಮಾಯಿ ಸೂಚನೆ

| Updated By: ganapathi bhat

Updated on: Aug 17, 2021 | 9:36 PM

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪಠ್ಯ ಪರಿಷ್ಕರಣೆ, ಬಿಎಡ್, ಡಿಎಡ್ ಪಠ್ಯ ಪರಿಣಾಮಕಾರಿಯಾಗಿ ಪರಿಷ್ಕರಿಸಿ ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, ರಸ್ತೆ ದುರಸ್ತಿಗೆ ಆದ್ಯತೆ ನೀಡಲು ಬಸವರಾಜ ಬೊಮ್ಮಾಯಿ ಸೂಚನೆ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಆಗಸ್ಟ್ 17) ಕೆಲವು ಸಲಹೆಗಳನ್ನು ನೀಡಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ಸಿಎಂ ಸಲಹೆ ಕೊಟ್ಟಿದ್ದಾರೆ. ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸಲಹೆ, ಸೂಚನೆ ಕೊಟ್ಟಿದ್ದಾರೆ.

ಖಾಸಗಿಯವರ ಸಹಯೋಗ ಪಡೆದುಕೊಳ್ಳಲೂ ಸಹ ಮುಖ್ಯಮಂತ್ರಿ ಬೊಮ್ಮಾಯಿ ಸಲಹೆ ನೀಡಿದ್ದಾರೆ. ರಾಜ್ಯದ GER ಶೇಕಡಾ 32 ರಷ್ಟು ಇದ್ದು, ಶೇಕಡಾ 50 ಕ್ಕೆ ಹೆಚ್ಚಿಸುವ ಗುರಿ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಪಠ್ಯ ಪರಿಷ್ಕರಣೆ, ಬಿಎಡ್, ಡಿಎಡ್ ಪಠ್ಯ ಪರಿಣಾಮಕಾರಿಯಾಗಿ ಪರಿಷ್ಕರಿಸಿ ಎಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಬಸವರಾಜ ಬೊಮ್ಮಾಯಿ ಸಲಹೆ ನೀಡಿದ್ದಾರೆ.

ಬಳಿಕ, ಲೋಕೋಪಯೋಗಿ ಇಲಾಖೆ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ಕೊಡುವಂತೆ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ರಸ್ತೆಗಳು ಹಾಳಾಗಿವೆ. ಆದ್ಯತೆ ಮೇರೆಗೆ ಹಾಳಾದ ರಸ್ತೆಗಳ ದುರಸ್ತಿ ಕಾರ್ಯ ಮಾಡಿ. ರಸ್ತೆಗಳ ದುರಸ್ತಿಗೆ 300 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳು ಆರಂಭಿಸಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಬೇಕು. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕು ಮಾಡಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನ ಮಾಡಿರುವುದಾಗಿ ತಿಳಿಸಿದ್ದಾರೆ.

ಆಗಸ್ಟ್ 21ರಂದು ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ
ಆಗಸ್ಟ್ 21 ರಂದು ಸಿಎಂ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿಜಯಪುರ, ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕೊರೊನಾ ನಿರ್ವಹಣೆ, ನೆರೆ ಹಾವಳಿ ಸಂಬಂಧ ಸಿಎಂ ಸಭೆ ನಡೆಸಲಿದ್ದಾರೆ. 2 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ. ಇದೇ ವೇಳೆ ಆಲಮಟ್ಟಿ ಡ್ಯಾಂಗೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಂತೆ ನಮ್ಮ ರಾಜ್ಯದಲ್ಲೇನೂ ಪೆಟ್ರೋಲ್ ಬೆಲೆ ಕಡಿತ ಇಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಹೆಬ್ಬಾಳ ಕ್ಷೇತ್ರದ ಒಂದು ರಸ್ತೆಯಲ್ಲಿ 5 ಜನ ಮುಖ್ಯಮಂತ್ರಿಗಳಾಗಿದ್ದಾರೆ, ನಾನೂ ನಿಮ್ಮಲ್ಲಿ ಒಬ್ಬ: ಸಿಎಂ ಬಸವರಾಜ ಬೊಮ್ಮಾಯಿ

Published On - 7:03 pm, Tue, 17 August 21