ಜನಪರ ಆಡಳಿತದ ಭರವಸೆ ನೀಡಿದ ಬಸವರಾಜ ಬೊಮ್ಮಾಯಿ; ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತ ಏರಿಕೆ

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದಾರೆ.

ಜನಪರ ಆಡಳಿತದ ಭರವಸೆ ನೀಡಿದ ಬಸವರಾಜ ಬೊಮ್ಮಾಯಿ; ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತ ಏರಿಕೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
Follow us
TV9 Web
| Updated By: ganapathi bhat

Updated on:Jul 28, 2021 | 2:39 PM

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಇಂದು (ಜುಲೈ 28) ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಜನಪರ ಆಡಳಿತದ ಭರವಸೆ ನೀಡಿದ್ದಾರೆ. ರೈತ ಮಕ್ಕಳಿಗೆ ಶಿಕ್ಷಣ ವೇತನ ಸಹಿತ ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ವಿಧವಾ ವೇತನದ ಮೊತ್ತವನ್ನು ಏರಿಕೆ ಮಾಡಿದ್ದಾರೆ. ಸಂಧ್ಯಾ ಸುರಕ್ಷಾ ಯೋಜನೆ ಮೊತ್ತ ಸದ್ಯ 1000 ರೂಪಾಯಿ ಇದೆ. ಅದನ್ನು 1200 ರೂಪಾಯಿಗೆ ಏರಿಕೆ ಮಾಡಲಾಗುವುದು. ಹಾಗೂ ವಿಧವಾ ವೇತನ ಮಾಸಿಕ 600 ರೂಪಾಯಿ ಇತ್ತು. ಅದನ್ನು 800 ರೂಪಾಯಿಗೆ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಸಂಧ್ಯಾ ಸುರಕ್ಷಾ ಯೋಜನೆಯ ಹಣ ಮತ್ತಷ್ಟು ಹೆಚ್ಚಳ ಮಾಡಲಾಗಿದ್ದು, 1,000 ರೂಪಾಯಿಯಿಂದ 1,200 ರೂಪಾಯಿಗೆ ಹೆಚ್ಚಳ ಆಗಿದೆ. ವಿಧವಾ ವೇತನ, ವಿಶೇಷ ಚೇತನರ ಮಾಸಾಶನ ಹೆಚ್ಚಳವಾಗಿದೆ. ಸಂಧ್ಯಾ ಸುರಕ್ಷಾ ಯೋಜನೆ ವೆಚ್ಚ 863.52 ಲಕ್ಷ ಹೆಚ್ಚುವರಿ ಆಗಲಿದೆ. ವಿಧವಾ ವೇತನ 600ರಿಂದ 800ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಅದರಂತೆ, 414 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ. ಮತ್ತು 13.25 ಲಕ್ಷ ವಿಧವೆಯರಿಗೆ ಈ ಯೋಜನೆ ಅನುಕೂಲವಾಗಲಿದೆ.

ದಿವ್ಯಾಂಗರ ವೇತನ ಕೂಡ 600ರಿಂದ 800 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಅದರಿಂದ 3 ಲಕ್ಷ 66 ಸಾವಿರ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ನನ್ನ ಆಡಳಿತ ಜನಪರ ಇರುವ ಸ್ಟ್ಯಾಂಪ್ ಆಗುತ್ತೆ ಎಂದು ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ (Basavaraj Bommai) ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡಲು ನಿರ್ಧರಿಸಲಾಗಿದೆ. ರೈತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಪ್ರತಿವರ್ಷ 1,000 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಎಲ್ಲ ಇಲಾಖೆಗಳಲ್ಲೂ ಅನಗತ್ಯ ಖರ್ಚು ಕಡಿಮೆ ಮಾಡಬೇಕೆಂದು ಸೂಚಿಸಿದ್ದೇನೆ. ಕನಿಷ್ಠ ಶೇ. 5ರಷ್ಟು ಅನಗತ್ಯ ಖರ್ಚು ಕಡಿಮೆ ಮಾಡಬೇಕು ಎಂದು ಇಂದಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸರ್ಕಾರಿ ಉದ್ಯೋಗಿಗಳು ಏನು ಮಾಡಿದರೂ ನಡೆಯುತ್ತದೆ ಎಂಬ ಮನೋಭಾವಕ್ಕೆ ಇನ್ನು ಅವಕಾಶವಿಲ್ಲ. ಎಲ್ಲರೂ ಕಟ್ಟುನಿಟ್ಟಾಗಿ ಕೆಲಸ ಮಾಡಲೇಬೇಕು. ಎಲ್ಲ ಇಲಾಖೆಯ ಅಧಿಕಾರಿಗಳೂ ಆಯಾ ಇಲಾಖೆಗಳಿಗೆ ಸಂಬಂಧಿಸಿದ ಫೈಲ್​ಗಳನ್ನು ಕಳುಹಿಸುತ್ತಾರೆ. ಮುಂದಿನ 15 ದಿನಗಳೊಳಗೆ ಆ ಎಲ್ಲ ಫೈಲ್​ಗಳೂ ಕ್ಲಿಯರ್ ಆಗಬೇಕೆಂದು ಆದೇಶಿಸಿದ್ದೇನೆ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ಇಲಾಖೆಗಳ ಸಿಬ್ಬಂದಿಗೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: Karnataka New Government LIVE: ಮಣ್ಣಿನ ಮಕ್ಕಳ ಉನ್ನತ ಶಿಕ್ಷಣಕ್ಕೆ 1000 ಕೋಟಿ ರೂ. ವಿದ್ಯಾರ್ಥಿ ವೇತನ ಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ

Basavaraj Bommai Photos: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ; ಫೋಟೋಗಳು ಇಲ್ಲಿವೆ

(Basavaraj Bommai on Sandhya Suraksha Vidhava Vethana Schemes Karnataka New CM Basavaraj Bommai after Oath Taking)

Published On - 2:23 pm, Wed, 28 July 21

ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ