ನೀರಾವರಿ ಯೋಜನೆಗಳು, ಲಸಿಕೆ ಕೊರತೆ, ಕೊರೊನಾ ನಿಯಂತ್ರಣ: ದೆಹಲಿ ಭೇಟಿ ಬಗ್ಗೆ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ
ಉತ್ತಮ ಸರ್ಕಾರ ನೀಡಬೇಕೆಂದು ಬಿಜೆಪಿ ನಾಯಕರು ಸಲಹೆ ನೀಡಿದ್ದಾರೆ. ಕೇಂದ್ರದಲ್ಲಿರುವ ರಾಜ್ಯದ ಐವರು ಸಚಿವರ ಜತೆ ಪಿಎಂ ಭೇಟಿ ಮಾಡಿದ್ದೇನೆ. ರಾಜ್ಯದಲ್ಲಿ ಆಗಬೇಕಿರುವ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದು ದೆಹಲಿ ಭೇಟಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ಧಾರೆ.
ದೆಹಲಿ: ಸಂಪೂರ್ಣ ದಿನ ಕೇಂದ್ರದ ಬಿಜೆಪಿ ನಾಯಕರನ್ನು ಭೇಟಿಯಾದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಭೇಟಿಯಾಗಿದ್ದೇನೆ ಎಂದು ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಉತ್ತಮ ಸರ್ಕಾರ ನೀಡಬೇಕೆಂದು ಬಿಜೆಪಿ ನಾಯಕರು ಸಲಹೆ ನೀಡಿದ್ದಾರೆ. ಕೇಂದ್ರದಲ್ಲಿರುವ ರಾಜ್ಯದ ಐವರು ಸಚಿವರ ಜತೆ ಪಿಎಂ ಭೇಟಿ ಮಾಡಿದ್ದೇನೆ. ರಾಜ್ಯದಲ್ಲಿ ಆಗಬೇಕಿರುವ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ ಎಂದು ದೆಹಲಿ ಭೇಟಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಜುಲೈ 30) ಮಾತನಾಡಿದ್ಧಾರೆ.
ನಮ್ಮ ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಗಡಿ ಜಿಲ್ಲೆಗಳ ಡಿಸಿಗಳ ಜತೆ ಸಮಾಲೋಚನೆ ನಡೆಸಿ ಸೂಚನೆ ನೀಡಲಿದ್ದೇನೆ. ಕೊವಿಡ್ ನಿಯಮ ಪಾಲನೆ ಬಗ್ಗೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ತೋರಿದ ಸಂಯಮ, ಪ್ರೀತಿಗೆ ಆಭಾರಿ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಸ್ವಚ್ಚ ಸರಕಾರ ಕೊಡಬೇಕು ಎಂದು ಮೋದಿ ಹೇಳಿದ್ದಾರೆ. ಕರ್ನಾಟಕ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಟೆಸ್ಟಿಂಗ್ ಟೈಂ ಎಂದು ಅಮಿತ್ ಶಾ ಹೇಳಿದ್ದಾರೆ. ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ನಡ್ಡಾ ಹೇಳಿದ್ದಾರೆ. ಮುಂಬರುವ ಚುನಾವಣೆಗೆ ಸಿದ್ದರಾಗುವಂತೆ ನಡ್ಡಾ ಸೂಚನೆ ನೀಡಿದ್ದಾರೆ ಎಂದು ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ, ಕೃಷ್ಣಾ ಮೇಲ್ದಂಡೆ ಯೋಜನೆ 2ನೇ ಹಂತದ ಯೋಜನೆಗೆ ಒತ್ತಾಯಿಸಿ ಸಚಿವರಿಗೆ ಮನವಿ ಮಾಡಲಾಗಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ಗೆ ಮನವಿ ಮಾಡಿದ್ದೇನೆ. ಎತ್ತಿನಹೊಳೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಆಗ್ರಹಿಸಿ ಮನವಿ ಮಾಡಲಾಗಿದೆ. ಕಳಸಾ-ಬಂಡೂರಿ ಯೋಜನೆ ಜಾರಿಗೆ ಒತ್ತಾಯ ಮಾಡಿದ್ದೇನೆ. ಬೆಂಗಳೂರಿನಲ್ಲಿ ಕೇಂದ್ರದ ಯೋಜನೆಗಳ ಜಾರಿಗೆ ಸಮಿತಿ, ಸ್ಮಾಲ್ ವರ್ಕಿಂಗ್ ಗ್ರೂಪ್ ಮಾಡಲು ತೀರ್ಮಾನಿಸಿದ್ದೇನೆ. ನಾಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗುವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
24X7 ಕೆಲಸ ಮಾಡುವುದಾಗಿ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಸ್ವಚ್ಛ, ಸುಭದ್ರ ಆಡಳಿತಕ್ಕೆ ಪ್ರಧಾನಿ ಮೋದಿ ಸೂಚಿಸಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಭೇಟಿ ವೇಳೆ ಪಕ್ಷದ ಜೊತೆ ಸಹಕರಿಸಬೇಕು ಎಂದು ಸಿಂಗ್, ನಡ್ಡಾ ಸಲಹೆ ನೀಡಿದ್ಧಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆ ಹೆಚ್ಚು ಒತ್ತು ನೀಡುವಂತೆ ಸೂಚನೆ ಕೊಟ್ಟಿದ್ದಾರೆ. ಕೇಂದ್ರ, ರಾಜ್ಯದ ಸಹಕಾರದಲ್ಲಿ ಯೋಜನೆ ಜಾರಿಗೆ ಸಲಹೆ ಮಾಡಿದ್ದಾರೆ. ಕೇಂದ್ರದ ಯೋಜನೆಗಳು ಜನರಿಗೆ ಮುಟ್ಟಿಸುವಂತೆ ಸೂಚನೆ ನೀಡಲಾಗಿದೆ. ಮುಂದಿನ ಚುನಾವಣೆಗಳಿಗೆ ಸಿದ್ಧರಾಗುವಂತೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.
ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆ ಮಾಡುತ್ತೇನೆ. ಕೇಂದ್ರದ ನಾಯಕರ ಜತೆ ಯಾವುದೇ ಚರ್ಚೆ ಮಾಡಿಲ್ಲ. ಸಚಿವ ಸಂಪುಟ ರಚನೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ನವದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. 24X7 ಕೆಲಸ ಮಾಡುವುದಾಗಿ ಅಮಿತ್ ಶಾ ಅವರಿಗೆ ತಿಳಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯಕ್ಕೆ ಲಸಿಕೆ ಪೂರೈಕೆಯಲ್ಲಿ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದೇನೆ ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಕಳವಳಕಾರಿಯಾಗಿದೆ. ಕೇರಳದ ಗಡಿ ಜಿಲ್ಲಾಡಳಿತಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸುವೆ. ನಾಳೆ ಬೆಂಗಳೂರಿಗೆ ತೆರಳಿದ ನಂತರ ವಿಡಿಯೋ ಕಾನ್ಫರೆನ್ಸ್ ಭಾಗವಹಿಸಲಿದ್ದೇನೆ. ನೆರೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತಗಳ ಜತೆ ಸಂವಾದ ನಡೆಸುವೆ. ಮುಂದಿನ ತಿಂಗಳು ಮತ್ತೊಮ್ಮೆ ನಾನು ದೆಹಲಿ ಬರುತ್ತೇನೆ. ರಾಜ್ಯಕ್ಕೆ ಲಸಿಕೆ ಪೂರೈಕೆಯಲ್ಲಿ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದೇನೆ. ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಕೊವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚು ಒತ್ತು ನೀಡಲಾಗುವುದು. ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಮೈಸೂರು, ದಕ್ಷಿಣ ಕನ್ನಡ ಜಿಲ್ಲಾಡಳಿತಗಳ ಜತೆ ವಿಡಿಯೋ ಕಾನ್ಫರೆನ್ಸ್ ಮಾಡಲಾಗುವುದು. ಪ್ರವಾಹ ಪರಿಸ್ಥಿತಿ ಕುರಿತು ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಈ ವೇಳೆ ಅವರು ತಿಳಿಸಿದ್ದಾರೆ.
ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗುತ್ತೇನೆ. ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಭೇಟಿ ಮಾಡುತ್ತೇನೆ. ಕರ್ನಾಟಕದ ಯೋಜನೆಗಳ ಕುರಿತು ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಸ್ವಚ್ಛ, ಸುಭದ್ರ ಆಡಳಿತಕ್ಕೆ ಪ್ರಧಾನಿ ಮೋದಿ ಸೂಚನೆ; ಒಂದು ವಾರದೊಳಗೆ ರಾಜ್ಯ ಸಚಿವ ಸಂಪುಟ ರಚನೆ: ಬಸವರಾಜ ಬೊಮ್ಮಾಯಿ
(Basavaraj Bommai Pressmeet at Delhi after meeting PM Narendra Modi JP Nadda Amit Shah)