ಬೆಂಗಳೂರು, ಜ.04: ಕಾಂಗ್ರೆಸ್ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಕಿಡಿಕಾರಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ರಾಮಮಂದಿರ ರಾಜಕೀಯ ಕಾರ್ಯಕ್ರಮವಲ್ಲ, ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದೆ. ಆದರೆ, ಇದರಲ್ಲಿ ಇಂಡಿಯಾ ಒಕ್ಕೂಟ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.
ಇದೇ ವೇಳೆ ಮಂತ್ರಾಕ್ಷತೆ ಕೊಡಲು ಅನ್ನಭಾಗ್ಯ ಅಕ್ಕಿ ಬಳಕೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ವಿಚಾರ ‘ಅನ್ನಭಾಗ್ಯ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಇಲ್ಲ, ಕಾಂಗ್ರೆಸ್ನವರು ಏನೇ ಹೇಳಿದರೂ ಪ್ರಧಾನಿ ಮೋದಿ ಪರವಾಗಿ ಆಗುತ್ತದೆ ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ.
ಇದನ್ನೂ ಓದಿ:ವೀರಶೈವ ಲಿಂಗಾಯತರನ್ನ ಹೊರತುಪಡಿಸಿ ರಾಜ್ಯ ಆಳೋದು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬೊಮ್ಮಾಯಿ
‘ಮತ್ತೊಂದು ಗೋಧ್ರಾ ಹತ್ಯಾಕಾಂಡ ಆಗದಂತೆ ನೋಡಿಕೊಳ್ಳಿ ಎಂದು ಹರಿಪ್ರಸಾದ್ ಹೇಳಿಕೆಗೆ ಮಾಜಿ ಸಿಎಂ ಬೊಮ್ಮಾಯಿ ತಿರುಗೇಟು ಕೊಟ್ಟಿದ್ದಾರೆ. ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ಪ್ರಚೋದನಕಾರಿಯಾಗಿದೆ. ಗೃಹ ಸಚಿವರಿಗೆ ಮಾಹಿತಿ ಇಲ್ಲವಂತೆ, ಹಾಗಾದರೆ ಇದು ಗುಪ್ತಚರ ಇಲಾಖೆ ವೈಫಲ್ಯ.
ಇದನ್ನು ಬೇರೆ ಯಾರಾದರೂ ಹೇಳಿದ್ದರೆ, ಸುಮ್ಮನೆ ಇರುತ್ತಿದ್ದರಾ?, ಕೂಡಲೇ ಎಂಎಲ್ಸಿ ಹರಿಪ್ರಸಾದ್ ಕರೆದು ಮಾಹಿತಿ ಪಡೆಯಬೇಕು. ಎಲ್ಲಾ ಗೂಂಡಾಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಇತ್ತ ಹುಬ್ಬಳ್ಳಿಯಲ್ಲಿ 32 ವರ್ಷದ ಹಿಂದಿನ ಕೇಸ್ ರೀ ಓಪನ್ ಮಾಡೋದು ಎಷ್ಟು ಸರಿ? ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ