ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು, ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಸಮಯವಿದು; ಬಸವರಾಜ ಬೊಮ್ಮಾಯಿ
ರಾಜ್ಯಪಾಲರ ಆಳ್ವಿಕೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ಈ ರೀತಿ ಮಾತನಾಡಬಾರದು. ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ಎಲ್ಲಾ ರಾಜ್ಯದ ರಾಜ್ಯಪಾಲರು ಸಭೆ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯಪಾಲರ ಆಳ್ವಿಕೆ ಎನ್ನುವುದು ಸರಿಯೇ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಎಲ್ಲಾ ವಿಚಾರದಲ್ಲಿಯೂ ರಾಜಕೀಯ ಮಾಡೋದು ಬೇಡ ಎಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಾವು ಕೊರೊನಾ ನಿಯಂತ್ರಿಸುವ ಕಡೆ ಗಮನಹರಿಸಬೇಕು. ಮೊಸರಲ್ಲಿ ಕಲ್ಲು ಹುಡುಕುವಂತಹ ಕೆಲಸ ಮಾಡಬಾರದು. ರಾಜ್ಯಪಾಲರ ಸಭೆಯಲ್ಲಿ 144 ಸೆಕ್ಷನ್ ಜಾರಿ ಬಗ್ಗೆ ಚರ್ಚಿಸುತ್ತೇವೆ. ಚರ್ಚೆಗಳ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ರಾಜ್ಯಪಾಲರ ಆಳ್ವಿಕೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ಈ ರೀತಿ ಮಾತನಾಡಬಾರದು. ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ಎಲ್ಲಾ ರಾಜ್ಯದ ರಾಜ್ಯಪಾಲರು ಸಭೆ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯಪಾಲರ ಆಳ್ವಿಕೆ ಎನ್ನುವುದು ಸರಿಯೇ? ರಾಜಸ್ಥಾನದಲ್ಲೂ ರಾಜ್ಯಪಾಲರು ಸಭೆ ಮಾಡುತ್ತಿದ್ದಾರೆ. ಅಲ್ಲಿ ರಾಜ್ಯಪಾಲರ ಆಳ್ವಿಕೆ ಎಂದು ಕರೆಯುವುದಕ್ಕಾಗುತ್ತಾ? ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ಇದೆ. ಅಲ್ಲೂ ರಾಜ್ಯಪಾಲರು ಸಭೆ ಮಾಡುತ್ತಿದ್ದಾರೆ. ಅಲ್ಲೂ ರಾಜ್ಯಪಾಲರ ಆಳ್ವಿಕೆ ಎನ್ನುವುದು ಸರಿ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ನಿಂದ 144 ಸೆಕ್ಷನ್ ಜಾರಿಗೆ ಒತ್ತಾಯ ವಿಚಾರಕ್ಕೆ ಸಂಬಂಧಿಸಿ ಇವತ್ತು ರಾಜ್ಯಪಾಲರ ಸಭೆ ಇದೆ. ಇವತ್ತಿನ ಸಭೆಯಲ್ಲಿ ವಿಪಕ್ಷಗಳ ನಾಯಕರು, ಮುಖ್ಯಮಂತ್ರಿ ಭಾಗವಹಿಸುತ್ತಾರೆ. ಈ ಸಭೆಯಲ್ಲಿ 144 ಸೆಕ್ಷನ್ ಸೇರಿದಂತೆ ಎಲ್ಲಾ ವಿಚಾರದ ಬಗ್ಗೆ ಚರ್ಚೆ ಆಗುತ್ತದೆ. ಚರ್ಚೆ ಆಧಾರದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವರು ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ಮಾತ್ರ ಪರಿಸ್ಥಿತಿ ಕಂಟ್ರೋಲ್ ತಪ್ಪಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿ ಕಂಟ್ರೋಲ್ನಲ್ಲಿದೆ. ಬೆಂಗಳೂರಿನಲ್ಲಿ ಸಮಸ್ಯೆ ಇರುವ ಬಗ್ಗೆ ಒಪ್ಪಿಕೊಳ್ಳುತ್ತೇನೆ. ಆಸ್ಪತ್ರೆಗಳಲ್ಲಿ ಬೆಡ್ ಇದ್ದರೂ ಆಕ್ಸಿಜನ್ ಸಮಸ್ಯೆ ಇದೆ. ಹೀಗಾಗಿ ಆಕ್ಸಿಜನ್ ತಯಾರಿಕಾ ಕಂಪನಿಗಳ ಜೊತೆ ಚರ್ಚೆ ಮಾಡುತ್ತೇವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಸಮಯವಿದು. ಒಟ್ಟಾಗಿ ಸೇರಿ ಕೆಲಸ ಮಾಡಿದರೆ ಯಶಸ್ಸು ಸಾಧ್ಯವಾಗುತ್ತದೆ. ಈಗ ಯಾರೂ ರಾಜಕಾರಣ ಮಾಡೋದು ಬೇಡ ಎಂದಿದ್ದಾರೆ.
ಇದನ್ನೂ ಓದಿ
ರಸ್ತೆಯಲ್ಲಿ ಹೋಗುವ ಕುಡುಕನ ಮಾತಿನಂತಿದೆ ಸಿದ್ದರಾಮಯ್ಯನವರ ಮಾತು; ಕೆ.ಎಸ್.ಈಶ್ವರಪ್ಪ ವಾಗ್ದಾಳಿ
(Basavaraj Bommai says It is time for everyone to work together)