ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ; ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್

ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ ಹೋರಾಟಗಾರರು ಹಾಗೂ ಬ್ರಿಟಿಷರ ವಿರುದ್ಧ ಅವರು ಹೋರಾಟ ಮಾಡಿದವರು. ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು.

ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ; ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on:Dec 19, 2021 | 9:26 AM

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರುನಾಡಿನ ಜನರು ಕೆಂಡಾಮಂಡಲರಾಗಿದ್ದಾರೆ. ಎಂಇಎಸ್ ಪುಂಡರಿಗೆ ತಕ್ಕ ಶಿಕ್ಷೆ ಆಗಲೇಬೇಕು ಅಂತ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಅವರ ಹೋರಾಟಕ್ಕೆ ಮತ್ತು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ. ಯಾರೇ ಆಗಲಿ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದು ಸರಿಯಲ್ಲ ಅಂತ ಅಭಿಪ್ರಾಯಪಟ್ಟಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ ಹೋರಾಟಗಾರರು ಹಾಗೂ ಬ್ರಿಟಿಷರ ವಿರುದ್ಧ ಅವರು ಹೋರಾಟ ಮಾಡಿದವರು. ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು. ಅಲ್ಲದೆ ದೇಶವನ್ನು ಒಗ್ಗೂಡಿಸಿದವರು. ಅಂತಹ ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಅವರ ಹೋರಾಟಕ್ಕೆ ಮತ್ತು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ. ಯಾರೇ ಆಗಲಿ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದು ಸರಿಯಲ್ಲ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ ಅಂತ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣ ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಮ್ಮ ಆರಾಧ್ಯ ದೈವಗಳು. ನಾನು ಅವರನ್ನು ಗೌರವಿಸುತ್ತೇನೆ ಮತ್ತು ಅನುಸರಿಸುತ್ತೇನೆ. ಕೆಲವು ಸಮಾಜವಿರೋಧಿಗಳು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಭಾಷೆ ಮತ್ತು ಇತರ ವಿಷಯಗಳಲ್ಲಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಎಎನ್ಐಗೆ ಹೇಳಿಕೆ ನೀಡಿದ್ದಾರೆ.

ಗೃಹ ಸಚಿವರಿಗೆ ಸಿಎಂ ಸೂಚನೆ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವರಿಗೆ ಸಿಎಂ ಬೊಮ್ಮಾಯಿ ಸಭೆ ನಡೆಸುವಂತೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಬೆಳಗಾವಿ ಐಜಿಪಿ, ಬೆಳಗಾವಿ ಪೊಲೀಸ್ ಆಯುಕ್ತರ ಜೊತೆ ಸಚಿವ ಆರಗ ಜ್ಞಾನೇಂದ್ರ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ

Poetry : ಅವಿತಕವಿತೆ : ನಾವೂ ದೇವರ ಹೂರೂಪ ಎಂಬುದ ಮರೆತು, ಮುಳ್ಳನ್ನೂ ಮುಚ್ಚಿಟ್ಟುಕೊಳ್ಳುತ್ತೇವೆ

ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

Published On - 9:21 am, Sun, 19 December 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್