ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ; ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ರೆಮ್​ಡಿಸಿವಿರ್ ಸಮಸ್ಯೆ ಬಗೆಹರಿಸಿದ್ದೇವೆ. ಕೊವಿಡ್ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಸದ್ಯದಲ್ಲಿಯೇ ಲಸಿಕೆ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದಿದ್ದಾರೆ.

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ; ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
sandhya thejappa
|

Updated on: Apr 25, 2021 | 11:46 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ಈ ಬಗ್ಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ವೀಕೆಂಡ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ನಿನ್ನೆ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿಲ್ಲ. ಸದ್ಯದ ಮಾರ್ಗಸೂಚಿಗಳೇ ಮುಂದುವರಿಯಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ರೆಮ್​ಡಿಸಿವಿರ್ ಸಮಸ್ಯೆ ಬಗೆಹರಿಸಿದ್ದೇವೆ. ಕೊವಿಡ್ ಲಸಿಕೆ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ಸದ್ಯದಲ್ಲಿಯೇ ಲಸಿಕೆ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ 300ರಿಂದ 800 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರದಿಂದ ರಾಜ್ಯಕ್ಕೆ ರೆಮ್​ಡಿಸಿವಿರ್ ಲಸಿಕೆ ನೀಡಲಿದೆ. 50,000 ರಿಂದ 1,22,000 ರೆಮ್​ಡಿಸಿವಿರ್ ಲಸಿಕೆ ನೀಡಲಿದೆ ಎಂದು ತಿಳಿಸಿದ್ದಾರೆ.

ಮೇ 1 ರಿಂದ 18 ವರ್ಷದ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ವಿತರಣೆಯಾಗಲಿದೆ. 45 ನೇ ವರ್ಷ ವಯಸ್ಕರರಿಗೆ ಎರಡನೇ ಹಂತದ ಲಸಿಕೆ ನೀಡುತ್ತೇವೆ. ರೆಮ್​ಡಿಸಿವಿರ್ ಇಂಜೆಕ್ಷನ್ ಕೂಡ ಎಲ್ಲ ಜಿಲ್ಲೆಗಳಿಗೆ ಪೂರೈಕೆ ಮಾಡುತ್ತೇವೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚುವರಿಯಾಗಿ ಉಳಿದಿರುವ ರೆಮ್​ಡಿಸಿವಿರ್ ಕಡಿಮೆ ಇದ್ದ ಜಿಲ್ಲೆಗಳಿಗೆ ವಿತರಣೆ ಮಾಡುತ್ತೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಕೊರೊನಾಗೆ ಬಜೆಟ್‌ನಲ್ಲಿ ಹಂಚಿಕೆ ಮಾಡಿದ್ದ ಹಣ ಏನಾಯ್ತು? ಸಾಮಾಜಿಕ ಜಾಲತಾಣದಲ್ಲಿ ಕೇಂದ್ರಕ್ಕೆ ಜನರಿಂದ ಪ್ರಶ್ನೆಗಳ ಸುರಿಮಳೆ

ಕೊವಿಡ್​ ವಿರುದ್ಧ ಹೋರಾಟಕ್ಕಿಳಿದ ಬೆಂಗಳೂರು ಬಾಲಕಿಯರು; ಸ್ಲಮ್​ ನಿವಾಸಿಗಳಿಗೆ ಉಚಿತ ಆಕ್ಸಿಮೀಟರ್​ ನೀಡುತ್ತಿದ್ದಾರೆ ಸ್ನೇಹಾ, ಶ್ಲೋಕಾ

(Basavaraj Bommai says weekend Curfew successful in Karnataka)