ಏಳು ಬಾರಿ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಈಗ ಮೇಲ್ಮೆನೆಗೆ ಸಭಾಪತಿ

1983, 1986 ಹಾಗೂ 1989 ರಲ್ಲಿ ಧಾರವಾಡದ ಕರ್ನಾಟಕ ವಿವಿಯ ಸೆನೆಟ್ ಮತ್ತು ನಾಲ್ಕು ಬಾರಿ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿ 1998ರಲ್ಲಿ ರಾಜ್ಯ ಕ್ರೀಡಾ ಮಂಡಳಿಯ ಸದಸ್ಯರಾಗಿದ್ದರು.

ಏಳು ಬಾರಿ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಈಗ ಮೇಲ್ಮೆನೆಗೆ ಸಭಾಪತಿ
ಬಸವರಾಜ ಹೊರಟ್ಟಿ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 13, 2021 | 4:03 PM

ಹುಬ್ಬಳ್ಳಿ: ರಾಜ್ಯ ವಿಧಾನಪರಿಷತ್​ಗೆ ಸತತವಾಗಿ ಏಳು ಬಾರಿ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಇತ್ತೀಚೆಗಷ್ಟೇ ಮೇಲ್ಮೆನೆಗೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಬಹಳಷ್ಟು ಗದ್ದಲ ಗೊಂದಲಗಳ‌ ನಡುವೆಯೇ ಹೊರಟ್ಟಿ ಅವಿರೋಧವಾಗಿ 49ನೇ ಸಭಾಪತಿಯಾಗಿ ಆಯ್ಕೆಯಾಗಿದ್ದು, ಹೊರಟ್ಟಿ ನಡೆದು ಬಂದ ಹಾದಿಯನ್ನು ಒಂದೊಮ್ಮೆ ಗಮನಿಸುವುದು ಮುಖ್ಯ ಎನಿಸಿಕೊಳ್ಳುತ್ತದೆ.

ಬಾಲ್ಯದ ಜೀವನ: ಮೂಲತಃ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಯಡಹಳ್ಳಿಯಲ್ಲಿ ಜನಿಸಿರುವ ಹೊರಟ್ಟಿ, ರೈತಾಪಿ ಕುಟುಂಬದಲ್ಲಿ ಜನಿಸಿದ್ದವರು. ಪ್ರಾಥಮಿಕ, ಫ್ರೌಡ ಶಿಕ್ಷಣವನ್ನ ಮುಗಿಸಿದ್ದ ಹೊರಟ್ಟಿ ಹುಬ್ಬಳ್ಳಿಯಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು. ಅಲ್ಲದೆ 1975 ರಿಂದ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಹೀಗಾಗಿ ಶಿಕ್ಷಕರ ಸಮಸ್ಯೆಯನ್ನ ಬಹಳ ಹತ್ತಿರದಿಂದ ಬಲ್ಲವರಾಗಿದ್ದರು‌. ಈ ಕಾರಣಕ್ಕೆ 1976 ರಲ್ಲಿ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘ ಸ್ಥಾಪಿಸಿ ಅದರ ಅಧ್ಯಕ್ಷರಾಗಿದ್ದು, ಅಲ್ಲಿಂದಲೇ ಅವರ ರಾಜಕೀಯ ಜೀವನ ಆರಂಭವಾಯಿತು.

ನೂತನ ಸಭಾಪತಿ ಬಸವರಾಜ್ ಹೊರಟ್ಟಿ: ವಿಧಾನಪರಿಷತ್‍ನ ನೂತನ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಸತತ 7 ಬಾರಿ ಒಂದೇ ಕ್ಷೇತ್ರದಿಂದ ಗೆಲ್ಲುವ ಮೂಲಕ ದೇಶದ ಇತಿಹಾಸದಲ್ಲೇ ದಾಖಲೆ ಸೃಷ್ಟಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು 1980 ರಿಂದ 1986, 1992, 1998, 2004, 2010 ಹಾಗೂ 2016ರಲ್ಲಿ ಹೀಗೆ ಒಂದೇ ಕ್ಷೇತ್ರದಿಂದ ಸತತ ಏಳು ಬಾರಿಗೆ ಗೆದ್ದು ದಾಖಲೆ ಬರೆದಿದ್ದಾರೆ.

ಹುಟ್ಟೂರಾದ ಯಡಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ, ಮುಧೋಳದಲ್ಲಿ ಪ್ರೌಢ ಶಿಕ್ಷಣ, ಹುಬ್ಬಳ್ಳಿಯಲ್ಲಿ ಪದವಿ, ಬೆಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿಯನ್ನ ಪಡೆದಿದ್ದಾರೆ. ಬಳಿಕ 1975ರಿಂದ 1980 ರವರೆಗೆ ಹುಬ್ಬಳ್ಳಿ ಲ್ಯಾಮಿಂಗ್ಟನ್ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರು ಶಿಕ್ಷಕರ ಸಮಸ್ಯೆಗಳನ್ನು ಗುರುತಿಸಿ ಅವರಿಗಾಗುತ್ತಿರುವ ಅನ್ಯಾಯಗಳನ್ನು ಸರಿಪಡಿಸುವುದಕ್ಕಾಗಿಯೇ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘವನ್ನು ಸ್ಥಾಪನೆ ಮಾಡಿದ್ದರು.

BASAVARAJ HORATTI

ಮೇಲ್ಮೆನೆಗೆ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

1983, 1986 ಹಾಗೂ 1989 ರಲ್ಲಿ ಧಾರವಾಡದ ಕರ್ನಾಟಕ ವಿವಿ ಸೆನೆಟ್ ಮತ್ತು ನಾಲ್ಕು ಬಾರಿ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿ 1998ರಲ್ಲಿ ರಾಜ್ಯ ಕ್ರೀಡಾ ಮಂಡಳಿಯ ಸದಸ್ಯರಾಗಿದ್ದರು. ರಾಜ್ಯದಲ್ಲಿ 2004ರ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾದಾಗ ಹೊರಟ್ಟಿಯವರು ವಿಜ್ಞಾನ, ತಂತ್ರಜ್ಞಾನ, ಸಣ್ಣ ಉಳಿತಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾಗಿದ್ದರು.

2006ರಲ್ಲಿ ಎಚ್.ಡಿ.ಕುಮಾರಸ್ವಾಮಿ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ ಅನುಭವವಿದೆ. 1995-1996, 1996-1999 ಮತ್ತು 2015 ರಿಂದ ಭರವಸೆ ಸಮಿತಿ ಅಧ್ಯಕ್ಷರಾಗಿ ಹಾಗೂ ವಿಧಾನಪರಿಷತ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿಯೇ ಸದ್ಯ ರಾಜ್ಯ ಮೇಲ್ಮೆನೆ ಹಿರಿಯ ಸದಸ್ಯರು ಹಾಗೂ ಎಲ್ಲ ಪಕ್ಷದ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಹೀಗಾಗಿ ಬಿಜೆಪಿ ಬೆಂಬಲದಿಂದ ವಿಧಾನಪರಿಷತ್​ಗೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.

ಪಕ್ಷ ನಿಷ್ಠ ಹೊರಟ್ಟಿ : ಕಳೆದ ನಾಲ್ಕು ದಶಕಗಳಿಂದಲೂ ಹುಬ್ಬಳ್ಳಿಯಲ್ಲೆ ವಾಸವಾಗಿರುವ ಹೊರಟ್ಟಿ, ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಮಾತನಾಡಿರಲಿಲ್ಲ. ಜೆಡಿಎಸ್ ಪಕ್ಷಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ಅಷ್ಟೊಂದು ಪ್ರಭಾವವಿಲ್ಲದಿದ್ದರೂ ಯಾವತ್ತಿಗೂ ಜೆಡಿಎಸ್ ಬಿಡುವ ಮಾತನಾಡಿರಲಿಲ್ಲ. ಕಳೆದ ವರ್ಷ ಕಾಂಗ್ರೆಸ್-ಜೆಡಿಎಸ್ ಸರ್ಕಾರದಲ್ಲಿ ಮಂತ್ರಿಗಿರಿ ಸಿಗದಿದ್ದಕ್ಕೆ ತುಸು ಬೇಸರಗೊಂಡಿದ್ದರು ಪಕ್ಷ ನಿಷ್ಠೆ ಮಾತ್ರ ಬಿಟ್ಟಿರಲಿಲ್ಲ.

ಅಲ್ಲದೆ ಹುಬ್ಬಳ್ಳಿಯ ಬಿಜೆಪಿಯ ಘಟಾನುಘಟಿ ನಾಯಕರಿಗೂ ಹೊರಟ್ಟಿಯನ್ನ ಸೋಲಿಸುವುದಕ್ಕೆ ಆಗಿರಲಿಲ್ಲ. ಅಷ್ಟರ ಮಟ್ಟಿಗೆ ಹೊರಟ್ಟಿ ಶಿಕ್ಷಕರ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದರು. ಉತ್ತರ ಕರ್ನಾಟಕ ಭಾಗದ ಎಲ್ಲಾ ಚುನಾವಣೆಗಳಲ್ಲಿ ನಾವು ಗೆದ್ದರೂ ಹೊರಟ್ಟಿಯವರ ಪಶ್ಚಿಮ ಪದವೀದರ ಕ್ಷೇತ್ರ ಗೆಲ್ಲುವುದಕ್ಕೆ ಆಗಲಿಲ್ಲ ಎನ್ನುವ ಜಗದೀಶ್ ಶೆಟ್ಟರ್ ಅವರ ಮಾತೇ ಇದಕ್ಕೆ ಸಾಕ್ಷಿ. ನಿನ್ನೆ ಸದನದಲ್ಲಿ ಇದೇ ಮಾತನ್ನ ಸ್ವತಃ ಕೈಗಾರಿಕೆ ಸಚಿವರಾದ ಜಗದೀಶ್ ಶೆಟ್ಟರ್ ಹೇಳಿದ್ದರು.‌ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರಿಂದಲೇ ಇಂದು ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಮಾತು ಎಲ್ಲಾ ಪಕ್ಷದ ಪಡಸಾಲೆಯಲ್ಲಿ‌ ಕೇಳಿಬರುತ್ತಿದೆ.

ಇದನ್ನೂ ಓದಿ: Legislative Council chairman election ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ: JDS ಬಸವರಾಜ್ ಹೊರಟ್ಟಿ, Congress ನಸೀರ್ ಅಹ್ಮದ್ ನಾಮಪತ್ರ ಸಲ್ಲಿಕೆ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?