ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಸೂಚನೆ; ಸಿಎಂಗೆ ಪತ್ರ ಬರೆದ ಬಸವರಾಜ ಹೊರಟ್ಟಿ

| Updated By: sandhya thejappa

Updated on: Jun 19, 2021 | 8:37 AM

ಅತಿ ಕಡಿಮೆ ವೇತನ ಮತ್ತು ಸೇವಾ ಭದ್ರತೆ ಇಲ್ಲದ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಸೂಚಿಸಿದ್ದಾರೆ. ಈಗಾಗಲೇ ಕಡಿಮೆ ವೇತನ ಮತ್ತು ಭದ್ರತೆ ಇಲ್ಲದ ಕಾರಣ ರಾಜ್ಯದಲ್ಲಿ ಹಲವಾರು ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಲು ಸೂಚನೆ; ಸಿಎಂಗೆ ಪತ್ರ ಬರೆದ ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ
Follow us on

ಬೆಂಗಳೂರು: ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಸಲಹೆ ನೀಡಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯದ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಸುಮಾರು 14,564 ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ನಿಯಮಾವಳಿ ಪ್ರಕಾರ, ಅತಿಥಿ ಉಪನ್ಯಾಸಕರು ವಿದ್ಯಾರ್ಹತೆಯನ್ನು ಹೊಂದಿರುತ್ತಾರೆ. ಕಳೆದ 2 ವರ್ಷಗಳಿಂದ ಕೊರೊನಾ ಹಿನ್ನೆಲೆ ಅತಿಥಿ ಉಪನ್ಯಾಸಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅತಿ ಕಡಿಮೆ ವೇತನ ಮತ್ತು ಸೇವಾ ಭದ್ರತೆ ಇಲ್ಲದ ಕಾರಣ ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸಬೇಕೆಂದು ಸೂಚಿಸಿದ್ದಾರೆ. ಈಗಾಗಲೇ ಕಡಿಮೆ ವೇತನ ಮತ್ತು ಭದ್ರತೆ ಇಲ್ಲದ ಕಾರಣ ರಾಜ್ಯದಲ್ಲಿ ಹಲವಾರು ಉಪನ್ಯಾಸಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಲ್ಲಾ ವಿದ್ಯಾರ್ಹತೆ ಹೊಂದಿ, ಹಲವು ವರ್ಷಗಳ ಅನುಭವ ಅತಿಥಿ ಉಪನ್ಯಾಸಕರಿಗಿದೆ. ಹಲವಾರು ಜನ ವಯೋವಿತಿ ಮೀರುತ್ತಿರುವುದರಿಂದ ಅಭದ್ರತೆಯಲ್ಲಿ ಸಿಲುಕಿದ್ದಾರೆ.

ಇವರಂತೆಯೇ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಂಗಾಮಿಯಾಗಿ ಕರ್ತವ್ಯ ನಿರ್ವಹಿಸಿದ ಪದನಾಮ ಬದಲಾದ ಸ್ಥಳೀಯ ಅಭ್ಯರ್ಥಿ, ಸ್ಟಾಪ್ ಗ್ಯಾಪ್, ಗುತ್ತಿಗೆ ಆಧಾರಿತ, ಅರೆಕಾಲಿಕ ಉಪನ್ಯಾಸಕರುಗಳನ್ನು ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸೂಕ್ತ ಕಾಯ್ದೆ ತಿದ್ದುಪಡಿ ಮಾಡಿ ಅಂಥವರನ್ನ 1982, 1992, 1996 ಮತ್ತು 2003ರಲ್ಲಿ ಖಾಯಂ ಮಾಡಿರುವ ಉದಾಹರಣೆಗಳಿವೆ. ಅದೇ ಮಾದರಿಯಲ್ಲಿ ಈಗ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನ ಖಾಯಂಗೊಳಿಸಿ. ಈ ಬಗ್ಗೆ ಸರ್ಕಾರ ಅಗತ್ಯ ಕ್ರಮ ವಹಿಸುವಂತೆ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಗೆ ಪತ್ರದ ಬರೆದಿದ್ದಾರೆ.

ಇದನ್ನೂ ಓದಿ

ಶಿಕ್ಷಣ ಇಲಾಖೆಗೆ ಶಾಕ್ ನೀಡಲಿರುವ ಪಿಯು ಅತಿಥಿ ಉಪನ್ಯಾಸಕರು; ಬಹಿಷ್ಕಾರಕ್ಕೆ ನಿರ್ಧಾರ

ಕೋಕಾ ಕೋಲಾ ದೂರವಿಟ್ಟ ರೊನಾಲ್ಡೊಗೆ ಇನ್‌ಸ್ಟಾಗ್ರಾಮ್‌ನಲ್ಲಿ 300 ಮಿಲಿಯನ್ ಫಾಲೋವರ್ಸ್! ಕೊಹ್ಲಿ ಕೂಡ ರೇಸ್​ನಲ್ಲಿ

(Basavaraj Horatti write a letter to chief minister bs yediyurappa for guest lecture Permanent)