ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್​ ನಿವೃತ್ತಿ: ಶಾಲಿನಿ ರಜನೀಶ್​ಗೆ ಹೆಚ್ಚುವರಿ ಹೊಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: May 31, 2024 | 4:18 PM

ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜತೆಗೆ ಹೆಚ್ಚುವರಿಯಾಗಿ ಬಿಬಿಎಂಪಿ ಆಡಳಿತಾಧಿಕಾರಿ ಹುದ್ದೆ ಹೊಂದಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಇಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಅವರ ಹುದ್ದೆಯನ್ನು ಸರ್ಕಾರದ ಎಸಿಎಸ್, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್​ಗೆ ಇದೀಗ ನಗರಾಭಿವೃದ್ಧಿ ಇಲಾಖೆ ಎಸಿಎಸ್ ಹುದ್ದೆ ಹೆಚ್ಚುವರಿ ಆಗಿ ನೀಡಲಾಗಿದೆ. 

ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್​ ನಿವೃತ್ತಿ: ಶಾಲಿನಿ ರಜನೀಶ್​ಗೆ ಹೆಚ್ಚುವರಿ ಹೊಣೆ
ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್​ ನಿವೃತ್ತಿ: ಶಾಲಿನಿ ರಜನೀಶ್​ಗೆ ಹೆಚ್ಚುವರಿ ಹೊಣೆ
Follow us on

ಬೆಂಗಳೂರು, ಮೇ 31: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ರಾಕೇಶ್ ಸಿಂಗ್​ ಅವರು ಇಂದು ಸೇವಾ ನಿವೃತ್ತಿ ಹೊಂದಿದ್ದಾರೆ. ರಾಕೇಶ್​ ಸಿಂಗ್ ಅವರು 1989ರ ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿದ್ದಾರೆ. ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜತೆಗೆ ಹೆಚ್ಚುವರಿಯಾಗಿ ಬಿಬಿಎಂಪಿ ಆಡಳಿತಾಧಿಕಾರಿ ಹುದ್ದೆ ನೀಡಲಾಗಿತ್ತು. ಏಪ್ರಿಲ್ 2021 ರಲ್ಲಿ,​ ಸಿಂಗ್ ಅವರು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದರು.

ರಾಕೇಶ್ ಸಿಂಗ್​ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಂತೆ ಐಎಎಸ್​​ ಅಧಿಕಾರಿ ಶಾಲಿನಿ ರಜನೀಶ್​ಗೆ ಹೆಚ್ಚುವರಿ ಹೊಣೆ ಹೊರಿಸಲಾಗಿದೆ. ಸರ್ಕಾರದ ಎಸಿಎಸ್, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್​ಗೆ ಇದೀಗ ನಗರಾಭಿವೃದ್ಧಿ ಇಲಾಖೆ ಎಸಿಎಸ್ ಹುದ್ದೆ ಹೆಚ್ಚುವರಿ ಆಗಿ ನೀಡಲಾಗಿದೆ.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿದಾರರಿಗೆ ಮತ್ತೆ ಬಿಸಿ ಮುಟ್ಟಿಸಲು ಪ್ಲಾನ್; ಜೂನ್ 7ರ ಬಳಿಕ ಬಾಕಿ ವಸೂಲಿಗೆ BBMP ಸಜ್ಜು

ಇಂಧನ ಇಲಾಖೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿ ಗೌರವ್ ಗುಪ್ತಾರನ್ನು ರಾಕೇಶ್ ಸಿಂಗ್​​ ಅವರ ನಿವೃತ್ತಿಯಿಂದಾಗಿ ತೆರವಾಗಿದ್ದ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಹುದ್ದೆ ನೀಡಲಾಗಿದೆ.

ಗೃಹ ಇಲಾಖೆಯ  ಐಎಎಸ್ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್​ಗೂ ಹೆಚ್ಚುವರಿ ಹುದ್ದೆ ನೀಡಲಾಗಿದೆ. ರಾಕೇಶ್ ಅವರ ನಿವೃತ್ತಿಯಿಂದಾಗಿ ತೆರವಾದ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಹೊಣೆಯನ್ನು ಉಮಾಶಂಕರ್ ಎಸ್.ಆರ್ ಅವರಿಗೆ ಹೊರಿಸಲಾಗಿದೆ.

ಇದನ್ನೂ ಓದಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಕೇರಳದ ಮಲಯಾಳಿ ಹುಡುಗರೀಗ ಚಾಲಕರು! ಕನ್ನಡ ಬಾರದವರ ಜತೆ ಕಂಡಕ್ಟರ್​ಗಳು ಕಂಗಾಲು

ರಾಕೇಶ್ ಸಿಂಗ್​ ಅವರೊಂದಿಗೆ ಐಎಎಸ್​​ ಅಧಿಕಾರಿ ಮಂಜುಳಾ ವಿ ಅವರು ಕೂಡ ಇಂದು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಹೀಗಾಗಿ ಇವರ ನಿವೃತ್ತಿಯಿಂದ ತೆರವಾದ ಹುದ್ದೆಯನ್ನು ರಶ್ಮಿ ಮಹೇಶ್ ವಿ ಅವರಿಗೆ ನೀಡಲಾಗಿದೆ. ಸದ್ಯ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ ಮತ್ತು ಯುಪಿಒಆರ್) ಅಧಿಕಾರಿಯಾಗಿರುವ ರಶ್ಮಿ ಮಹೇಶ್ ವಿ ಅವರಿಗೆ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷತೆ ಹೆಚ್ಚುವರಿ ಹುದ್ದೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.