
ಬೆಂಗಳೂರು: ದೆಹಲಿ ಮಾದರಿಯಲ್ಲಿ ವಿಧಾನಸೌಧದ ಎದುರು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಬಿಬಿಎಂಪಿ ಮತ್ತು ರಾಜ್ಯ ಪೊಲೀಸ್ ಇಲಾಖೆ ಸಲಹೆ ನೀಡಿದೆ. ಪ್ರತೀ ಬಾರಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆಯನ್ನು ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಚರಿಸಲಾಗುತ್ತಿತ್ತು. ಈ ಬಾರಿಯೂ ಅಲ್ಲಿಯೇ ಆಚರಿಸಿ ಮುಂದಿನ ಬಾರಿ ವಿಧಾನಸೌಧದ ಎದುರು ಆಚರಿಸಲು ಪ್ಲ್ಯಾನ್ ಮಾಡಲಾಗಿದೆ ಎಂದು ಟಿವಿ9ಗೆ ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್ ತಿಳಿಸಿದ್ದಾರೆ.
ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯುವ ರೀತಿ ವಿಧಾನಸೌಧದ ಎದುರು ಆಚರಣೆಗೆ ರಾಜ್ಯ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸಲಹೆ ನೀಡಿದೆ. ಪೊಲೀಸರು ಮೊದಲು ಭದ್ರತೆಯ ಬಗ್ಗೆ ಪರಿಶೀಲಿಸುತ್ತಾರೆ, ಬಳಿಕ ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಅಲ್ಲದೆ ಸಮಯಾವಕಾಶ ಇಲ್ಲದ ಕಾರಣ ಪ್ಲಾನ್ ಮುಂದೂಡಲು ಚಿಂತನೆ ನಡೆದಿದೆ.