ಕನ್ನಡ ನಾಮಫಲಕ ಅಳವಡಿಸದ ಬೆಂಗಳೂರಿನ 18 ಅಂಗಡಿಗಳಿಗೆ ಬಿಬಿಎಂಪಿ ಬೀಗ

ಬೆಂಗಳೂರು ನಗರದಲ್ಲಿ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸದ ಅಂಗಡಿಗಳ ವಿರುದ್ಧ ಬಿಬಿಎಂಪಿ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಪಾಲಿಕೆ ನೋಟಿಸ್ ನೀಡಿದ ಬಳಿಕವೂ ಕನ್ನಡ ನಾಮಫಲಕ ಹಾಕದ ಹದಿನೆಂಟು ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಶುಕ್ರವಾರ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿ ಕನ್ನಡ ನಾಮಫಲಕ ಅಳವಡಿಸದ 18 ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂದು ತಿಳಿಸಿದೆ.

ಕನ್ನಡ ನಾಮಫಲಕ ಅಳವಡಿಸದ ಬೆಂಗಳೂರಿನ 18 ಅಂಗಡಿಗಳಿಗೆ ಬಿಬಿಎಂಪಿ ಬೀಗ
ಪ್ರಾತಿನಿಧಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Feb 17, 2024 | 8:18 PM

ಬೆಂಗಳೂರು, ಫೆಬ್ರವರಿ 17: ನಗರದಲ್ಲಿ ಮಳಿಗೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸದ ಅಂಗಡಿಗಳ ವಿರುದ್ಧ ಬಿಬಿಎಂಪಿ (BBMP) ಕ್ರಮ ಕೈಗೊಳ್ಳಲು ಮುಂದಾಗಿದೆ. ಪಾಲಿಕೆ ನೋಟಿಸ್ ನೀಡಿದ ಬಳಿಕವೂ ಕನ್ನಡ ನಾಮಫಲಕ ಹಾಕದ ಹದಿನೆಂಟು ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಬಿಎಂಪಿ ಪ್ರಕಾರ, ಶುಕ್ರವಾರ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಮತ್ತು ಚರ್ಚ್ ಸ್ಟ್ರೀಟ್‌ನಲ್ಲಿ ಕನ್ನಡ ನಾಮಫಲಕ ಅಳವಡಿಸದ 18 ಅಂಗಡಿಗಳನ್ನು ಮುಚ್ಚಿಸಲಾಗಿದೆ ಎಂದು ತಿಳಿಸಿದೆ. ಬಿಬಿಎಂಪಿಯ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಆರ್ ಅವರ ಆದೇಶದ ಮೇರೆಗೆ ಆರೋಗ್ಯಾಧಿಕಾರಿ ಡಾ.ಸವಿತಾ ನೇತೃತ್ವದ ಅಧಿಕಾರಿಗಳ ತಂಡವು ಸಿಬಿಡಿ ವ್ಯಾಪ್ತಿಯ 200 ಅಂಗಡಿಗಳನ್ನು ಪರಿಶೀಲಿಸಿದ್ದು, ಆ ಪೈಕಿ 170 ಅಂಗಡಿಗಳಲ್ಲಿ ಈಗಾಗಲೇ ಕನ್ನಡ ನಾಮಫಲಕವನ್ನು ಅಳವಡಿಸಲಾಗಿದೆ.

ಕೆಲವರು ತಮ್ಮ ಅಂಗಡಿಯ ಇಂಗ್ಲಿಷ್​ ನಾಮಫಲಕಗಳನ್ನು ಮುಚ್ಚಿಕೊಂಡು ಕನ್ನಡ ನಾಮಫಲಕ ಅಳವಡಿಸಲು ಕೆಲವು ದಿನಗಳ ಕಾಲಾವಕಾಶ ಕೋರಿದ್ದಾರೆ. ಆದಷ್ಟು ಬೇಗ ಕನ್ನಡದಲ್ಲಿ ಫಲಕಗಳನ್ನು ಹಾಕುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಫೆ. 28ರೊಳಗೆ ಎಲ್ಲಾ ನಾಮಫಲಕ ಕನ್ನಡದಲ್ಲಿರಬೇಕು, ಇಲ್ಲದಿದ್ರೆ ಕ್ರಮ: ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಕೆ

ಇತ್ತೀಚೆಗೆ ಬೆಂಗಳೂರಿನಲ್ಲಿ ಕನ್ನಡ ಮಾಯವಾಗುತ್ತಿರುವ ಹೊತ್ತಲ್ಲೇ ಕನ್ನಡದ ಕೂಗು ಕಾವೇರಿತ್ತು. ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ನಿಯಮ ಇದೆ. ನಿಯಮ ಪಾಲಿಸದಿದ್ದರೆ ಪರವಾನಗಿ ರದ್ದುಗೊಳಿಸಲು ಬಿಬಿಎಂಪಿ ಸೂಚಿಸಿದೆ. ಇದರ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದವು.

ಬೆಂಗಳೂರಿಗೆ ವಲಸೆ ಬಂದಿರುವ ಪರಭಾಷೆಯವರು ಅಂಗಡಿ, ಹೋಟೆಲ್ ಅಂತಾ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಕನ್ನಡ ಭಾಷೆಯನ್ನ ನಿರ್ಲಕ್ಷಿಸಿದ್ದಾರೆ. ಕನ್ನಡಪರ ಸಂಘಟನೆ ನಾಡು, ನುಡಿಗಾಗಿ ಎಚ್ಚೆತ್ತುಕೊಂಡಿದ್ದು, ಕನ್ನಡ ನಾಮಫಲಕಕ್ಕಾಗಿ ಹೋರಾಟ ಆರಂಭಿಸಿದ್ದರು.

ಕರವೇ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ

ಕನ್ನಡ ಆಂದೋಲನ ವಿಷಯದಲ್ಲಿ ರಾಜಿ ಇಲ್ಲ. ಕರ್ನಾಟಕ ಸರ್ಕಾರದ ಕಾಯ್ದೆ ಹೇಳುತ್ತೆ, ಅಂಗಡಿ, ಮಾಲ್​​ಗಳ ಮೇಲೆ ಶೇ.60ರಷ್ಟು ಕನ್ನಡ ಇರಬೇಕು. ಆದರೆ ಇಲ್ಲಿಗೆ ವಲಸೆ ಬಂದಿರುವ ಹೊರ ರಾಜ್ಯದವರು ಕನ್ನಡ ಮರೆತು ತಮ್ಮ ಉದ್ಯಮಕ್ಕಾಗಿ ಆಂಗ್ಲ, ಹಿಂದಿ ಭಾಷೆ ಬಳಕೆ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಆಂದೋಲನ ಆರಂಭಿಸಿದ್ದೇವೆ ಅಂತ ಕರವೇ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಾಮಫಲಕಗಳಲ್ಲಿ ಶೇ 60% ಕನ್ನಡ ಕಡ್ಡಾಯಕ್ಕೆ ಸುಗ್ರಿವಾಜ್ಞೆ ಹೊರಡಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಮಾತ್ರ ಕಾನೂನು ಕೈಗೆತ್ತಿಗೊಂಡಿದ್ದಾರೆ ಎಂದು ಟಿ.ಎ. ನಾರಾಯಣ ಗೌಡ ಸೇರಿ ಐವತ್ತಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನ ಬಂಧಿಸಲಾಗಿತ್ತು. ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

ನಾಮಫಲಕ ಬದಲಾವಣೆಗೆ ಫೆ.28ರ ಗಡುವು 

ಕರವೇ ಕನ್ನಡ ನಾಮಫಲಕ ಆಂದೋಲನದ ಸಮರ ಸಾರುತ್ತಿದ್ದಂತೆ ಎಚ್ಚೆತ್ತ ಬಿಬಿಎಂಪಿ, ಪಾಲಿಕೆ 8 ವಲಯಗಳ‌ ಅಧಿಕಾರಿಗಳ ಸಭೆ ನಡೆಸಿತ್ತು. ಫೆ.28 ರೊಳಗೆ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗಡುವು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ