ಚಿತಾಗಾರಕ್ಕೆ ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಭೇಟಿ; ಶವಸಂಸ್ಕಾರಕ್ಕೆ ಹೆಚ್ಚಿನ ಹಣ ಕೇಳಿದರೆ ಕ್ರಮ ನಿಶ್ಚಿತ

ಖಾಸಗಿ ಆಸ್ಪತ್ರೆಗಳಿಂದ ಬರುವ ಶವಗಳಿಗೆ ಸ್ಲಾಟ್ ವ್ಯವಸ್ಥೆ ಇರಲಿಲ್ಲ. ಇನ್ನು ಅದನ್ನೂ ಮಾಡುತ್ತೇವೆ. ಅದೇನೇ ಇರಲಿ ಕೊವಿಡ್​ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಹೆಚ್ಚಿನ ಜನರು ಸೇರಬಾರದು ಎಂದು ಆಯುಕ್ತರು ತಿಳಿಸಿದ್ದಾರೆ.

ಚಿತಾಗಾರಕ್ಕೆ ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಭೇಟಿ; ಶವಸಂಸ್ಕಾರಕ್ಕೆ ಹೆಚ್ಚಿನ ಹಣ ಕೇಳಿದರೆ ಕ್ರಮ ನಿಶ್ಚಿತ
ಗೌರವ್ ಗುಪ್ತಾ
Follow us
Lakshmi Hegde
|

Updated on: Apr 18, 2021 | 5:31 PM

ಬೆಂಗಳೂರು: ನಗರದಲ್ಲಿ ಕೊವಿಡ್​-19 ಸೋಂಕಿನಿಂದ ಮೃತಪಟ್ಟವರನ್ನು ಅಂತ್ಯಕ್ರಿಯೆಗೆ ಚಿತಾಗಾರಕ್ಕೆ ಕರೆದೊಯ್ಯುವ ಆಂಬುಲೆನ್ಸ್​ಗಳು ಕ್ಯೂ ನಿಲ್ಲುವಂತಾಗಿದೆ ಎಂಬ ವರದಿಯ ಬೆನ್ನಲ್ಲೇ ಇಂದು ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಚಿತಾಗಾರವೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಹೆಣ ಸುಡಲು ಚಿತಾಗಾರ ಸಿಬ್ಬಂದಿ ಹೆಚ್ಚಿನ ಹಣ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

13 ಚಿತಾಗಾರಗಳ ಪೈಕಿ ಒಂದು ಚಿತಾಗಾರಕ್ಕೆ ನಾನು ಭೇಟಿ ಕೊಟ್ಟಿದ್ದೇನೆ. ಇಲ್ಲಿ ನಿನ್ನೆ 26 ಮೃತದೇಹಗಳನ್ನು ಸುಡಲಾಗಿದೆ. ಪ್ರತಿದಿನವೂ ಇಲ್ಲಿ 20-25 ಶವಸಂಸ್ಕಾರ ಆಗುತ್ತದೆ. ಅದರಲ್ಲಿ ಬಿಬಿಎಂಪಿಯಿಂದ ಬರುತ್ತಿರುವುದು 2-3 ಶವಗಳಷ್ಟೇ. ಅದರ ಹೊರತಾಗಿ ಬೆಂಗಳೂರು ಗ್ರಾಮೀಣ, ಅಕ್ಕಪಕ್ಕದ ಜಿಲ್ಲೆಗಳು ಹಾಗೂ ಖಾಸಗಿ ಆಸ್ಪತ್ರೆಗಳಿಂದಲೂ ಇಲ್ಲಿ ಶವಗಳನ್ನು ತರಲಾಗುತ್ತಿದೆ. ಹಾಗಾಗಿ ಸ್ವಲ್ಪ ಅಡಚಣೆ ಆಗುತ್ತಿದೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಿಂದ ಬರುವ ಶವಗಳಿಗೆ ಸ್ಲಾಟ್ ವ್ಯವಸ್ಥೆ ಇರಲಿಲ್ಲ. ಇನ್ನು ಅದನ್ನೂ ಮಾಡುತ್ತೇವೆ. ಅದೇನೇ ಇರಲಿ ಕೊವಿಡ್​ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಹೆಚ್ಚಿನ ಜನರು ಸೇರಬಾರದು. ಚಿತಾಗಾರಗಳ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಗೌರವ್​ ಗುಪ್ತಾ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ಮಾಹಿತಿ ಹಬ್ಬಿಸಬೇಡಿ.. ಏನೂ ತೊಂದರೆ ಇಲ್ಲ: ಡಾ. ಕೆ.ಸುಧಾಕರ್​

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್