ಕೊರೊನಾ ಸೋಂಕಿತರಿಗಾಗಿ ಟ್ರಯಾಸ್ ಸೆಂಟರ್ ನಿರ್ಮಾಣ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಟ್ರಯಾಸ್ ಸೆಂಟರ್​ಗೆ ಹೋದರೆ ಸೋಂಕಿತರಿಗೆ ಯಾವ ಬೆಡ್​ಗಳ ಅವಶ್ಯಕತೆ ಇದೆ. ಯಾವ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಸೆಂಟರ್​ನಲ್ಲಿ ತಿಳಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಕೊರೊನಾ ಸೋಂಕಿತರಿಗಾಗಿ ಟ್ರಯಾಸ್ ಸೆಂಟರ್ ನಿರ್ಮಾಣ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ
Follow us
preethi shettigar
|

Updated on:May 14, 2021 | 11:42 AM

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಟ್ರಯಾಸ್ ಸೆಂಟರ್ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದ್ದಾರೆ. ಟ್ರಯಾಸ್ ಸೆಂಟರ್​ಗೆ ಹೋದರೆ ಸೋಂಕಿತರಿಗೆ ಯಾವ ಬೆಡ್​ಗಳ ಅವಶ್ಯಕತೆ ಇದೆ. ಯಾವ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ಸೆಂಟರ್​ನಲ್ಲಿ ತಿಳಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಪ್ರತಿ ವಾರ್ಡ್​ನಲ್ಲೂ ಟ್ರಯಾಸ್ ಸೆಂಟರ್ ನಿರ್ಮಾಣ ಮಾಡುತ್ತೇವೆ. ಇದಕ್ಕಾಗಿ 1 ಸಾವಿರ ವೈದ್ಯರು,1 ಸಾವಿರ ನರ್ಸ್​ಗಳ ಅವಶ್ಯಕತೆ ಇದೆ. ಸರ್ಕಾರಕ್ಕೆ ಈಗಾಗಲೇ ಈ ಬಗ್ಗೆ ತಿಳಿಸಲಾಗಿದೆ. ಸರ್ಕಾರ ವೈದ್ಯರನ್ನ ಆದಷ್ಟು ಬೇಗ ನೇಮಕ ಮಾಡಲಿದೆ ಎಂದು ಗೌರವ್ ಗುಪ್ತಾ ತಿಳಿಸಿದ್ದಾರೆ.

ಬಿಬಿಎಂಪಿಯಿಂದ ಕೊವಿಡ್ ಕೇರ್ ಸೆಂಟರ್ ನಿರ್ಮಾಣ ಬಿಬಿಎಂಪಿಯಿಂದ ಆಕ್ಸಿಜನ್ ಇರುವಂತಹ ಸೆಂಟರ್ ನಿರ್ಮಾಣ ಮಾಡಲಾಗಿದೆ.ಸೋಂಕಿತರು ಯಾವುದೇ ಕರೆ ಮಾಡುವ ಅವಶ್ಯಕತೆ ಇಲ್ಲ. ನೇರವಾಗಿ ಕೊವಿಡ್ ಕೇರ್ ಸೆಂಟರ್​ಗೆ ಹೋಗಿ ದಾಖಲಾಗಬಹುದು. ಬೆಂಗಳೂರಿನಲ್ಲಿ 30 ಸಾವಿರ ಬೆಡ್ ಇದೆ. ರಾಜ್ಯ ಸರ್ಕಾರ ಪಡೆದಿರುವುದು 12 ಸಾವಿರ ಬೆಡ್. 12 ಸಾವಿರ ಬೆಡ್ ಹೊರತುಪಡಿಸಿ ಉಳಿದ ಬೆಡ್​ಗಳನ್ನ ಖಾಸಗಿ ಆಸ್ಪತ್ರೆಯವರು ಉಪಯೋಗ ಮಾಡುತ್ತಿದ್ದಾರೆ.ಒಂದೇ ಪೋರ್ಟಲ್ ಮೂಲಕ ಬೆಡ್ ಬ್ಲಾಕ್ ಮಾಡುವ ಪ್ಲಾನ್ ಇದೆ ಎಂದು ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ನಂತರ ಲಾಕ್​ಡೌನ್​ಗೆ​ ಐಸಿಎಂಆರ್ ಸೂಚನೆ ವಿಚಾರವಾಗಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಈ ಬಗ್ಗೆ ರಾಜ್ಯಮಟ್ಟದ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ಬಳಿಕ ಟ್ರಯಾಸ್ ಸೆಂಟರ್ ನಿರ್ಮಾಣದ ವಿಷಯವಾಗಿ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಈಗ ಸೋಂಕಿತರು ಬಿಬಿಎಂಪಿಯ ಸಹಾಯವಾಣಿಗೆ ಕರೆ ಮಾಡಿ ಬೆಡ್ ಬ್ಲಾಕ್ ಮಾಡುತ್ತಿದ್ದರು. ಈಗ 28 ಕಡೆ ಟ್ರಯಾಸ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಸೋಂಕಿತರು ಸಹಾಯವಾಣಿಗೆ ಕರೆ ಮಾಡಿ ಆಸ್ಪತ್ರೆಗೆ ಹೋಗುವ ಹಾಗಿಲ್ಲ. ಮೊದಲು ಟ್ರಯಾಸ್ ಸೆಂಟರ್​ಗೆ ಬರಬೇಕು. ಅಲ್ಲಿ ಆರೋಗ್ಯ ತಪಾಸಣೆ ಮಾಡುತ್ತೇವೆ. ನಂತರ ಅವರಿಗೆ ಯಾವ ಬೆಡ್, ಯಾವ ಚಿಕಿತ್ಸೆ ಅವಶ್ಯಕತೆ ಇದೆ ಎಂದು ನಿರ್ಧಾರ ಮಾಡಲಾಗುತ್ತದೆ. ಒಟ್ಟು 26 ಟ್ರಯಾಸ್ ಸೆಂಟರ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟ್ರಯಾಸ್ ಸೆಂಟರ್​ನಲ್ಲಿ ಮೂವರು ವೈದ್ಯರು, ಮೂವರು ನರ್ಸ್​ಗಳು 24 ಗಂಟೆಗಳ ಕಾಲ ಕರ್ತವ್ಯದಲ್ಲಿ ನಿರತರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ;

ಏರ್ ಫೋರ್ಸ್​ನಿಂದ 100 ಕೋವಿಡ್ ಬೆಡ್ ಒದಗಿಸಲಾಗಿದೆ, ಆದರೆ ಅದನ್ನೇಕೆ ಬಳಸಿಲ್ಲ; ಬಿಬಿಎಂಪಿಗೆ ಹೈಕೋರ್ಟ್ ತರಾಟೆ

ಕೇವಲ 100 ಘಂಟೆಗಳಲ್ಲಿ ಬಿಬಿಎಂಪಿ ಬೆಡ್ ಬುಕಿಂಗ್ ವಿಧಾನದಲ್ಲಿ ಮಹತ್ವದ 4 ಸುಧಾರಣೆ: ಸಂಸದ ತೇಜಸ್ವಿ ಸೂರ್ಯ

Published On - 11:26 am, Fri, 14 May 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?