ಸರ್ಕಾರದ ಆದೇಶಕ್ಕೆ ಕವಡೆಕಾಸಿನ ಕಿಮ್ಮತ್ತು ನೀಡದ ಬಿಬಿಎಂಪಿ
ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಕೇಸ್ಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಬಳಿ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಈ ಬಗ್ಗೆ ಖುದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ನೀಡಿದ್ದರು.
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೆ ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಆತಂಕ ಸೃಷ್ಟಿಸಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಕೇಸ್ಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಬಳಿ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ. ಈ ಬಗ್ಗೆ ಖುದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ನೀಡಿದ್ದರು. ಆದರೆ ಬಿಬಿಎಂಪಿ ತಪಾಸಣೆ ಮಾಡದೆ ನಿರ್ಲಕ್ಷ್ಯ ತೋರಿದೆ.
ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಬಳಿ ಕೊವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಇರಬೇಕು. ರೈಲು ನಿಲ್ದಾಣಕ್ಕೆ ಬರುವ ಮಹಾರಾಷ್ಟ್ರದ ಪ್ರಯಾಣಿಕರ ಬಳಿ ನೆಗೆಟಿವ್ ರಿಪೋರ್ಟ್ ಇದೆಯೋ ಇಲ್ವೋ ಎಂದು ಕಡ್ಡಾಯವಾಗಿ ಪರಿಶೀಲನೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ನೀಡಿದ್ದರು. ಆದೇಶವಿದ್ದರೂ ಬಿಬಿಎಂಪಿ ಒಬ್ಬ ಪ್ರಯಾಣಿಕರನ್ನು ತಪಾಸಣೆ ಮಾಡಲು ಮುಂದಾಗಿಲ್ಲ.
ತಪಾಸಣೆ ಮಾಡದ ಕಾರಣ ಮಹಾರಾಷ್ಟ್ರ ಪ್ರಯಾಣಿಕರು ನೆಗೆಟಿವ್ ರಿಪೋರ್ಟ್ ಇಲ್ಲದೆ ರಾಜಾರೋಷವಾಗಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ನಮ್ಮ ಬಳಿ ನೆಗೆಟಿವ್ ರಿಪೋರ್ಟ್ನ ಯಾರು ಕೇಳಿಲ್ಲವೆಂದು ಪ್ರಯಾಣಿಕರು ಉತ್ತರ ನೀಡಿದ್ದಾರೆ. ಕೊವಿಡ್ ಟೆಸ್ಟ್ ಮಾಡಿಸಿಲ್ಲ. ನೆಗೆಟಿವ್ ರಿಪೋರ್ಟ್ ಇದೆಯಾ ಎಂದು ಕೇಳುವವರು ಇಲ್ಲಿಲ್ಲ ಎಂದು ಮಹಾರಾಷ್ಟ್ರ ಪ್ರಯಾಣಿಕರು ಹೇಳುತ್ತಿದ್ದಾರೆ. ಇದನ್ನು ಗಮನಿಸಿದಾಗ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಆದೇಶಕ್ಕೆ ಬೆಲೆ ಇಲ್ವಾ? ಎಂಬ ಪ್ರಶ್ನೆ ಮೂಡಿದೆ.
ಇದನ್ನೂ ಓದಿ
ಗೋವಾ ಪೊಲೀಸರ ಕಿರುಕುಳಕ್ಕೆ ಬೇಸತ್ತು ವಿಜಯಪುರದ ಮೂವರು ಆತ್ಮಹತ್ಯೆ?
(BBMP does not check passengers coming from Maharashtra)