
ಬೆಂಗಳೂರು, ಏಪ್ರಿಲ್ 30: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇತ್ತೀಚೆಗೆ 2025-26ನೇ ಸಾಲಿನ ಸಂಪೂರ್ಣ ಆಸ್ತಿ ತೆರಿಗೆ (Property tax) ಏಪ್ರಿಲ್ 30ರೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಇದೀಗ ಶೇ.5ರಷ್ಟು ವಿನಾಯಿತಿ ಜೊತೆ ತೆರಿಗೆ ಪಾವತಿ ಅವಧಿವನ್ನು ಮೇ 30ರವರೆಗೆ ವಿಸ್ತರಣೆ ಮಾಡಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿ ಆಸ್ತಿ ತೆರಿಗೆ ಪಾವತಿದಾರರಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಆದಾಯ ಹೆಚ್ಚಿಸಿಕೊಳ್ಳಲು ಬಿಬಿಎಂಪಿ ಈ ಪ್ಲ್ಯಾನ್ ರೂಪಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏಪ್ರಿಲ್ 30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿತ್ತು.
5% rebate deadline on property tax for the year 2025-26 in BBMP limits extended to 31st May, 2025
A copy of the circular is attached for further information.#BBMP #BBMPCares #DKShivakumar #bbmpchiefcommissioner pic.twitter.com/MrT56oqWGs
— Bruhat Bengaluru Mahanagara Palike (@BBMPofficial) April 29, 2025
ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿದೆ. ಹಾಗಾಗಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ಮೇ 31 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಏ 30 ರೊಳಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಬಿಬಿಎಂಪಿ ಶುಭಸುದ್ದಿ: 5% ರಿಯಾಯಿತಿ ನೀಡಿದ ಬಿಬಿಎಂಪಿ
2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿ ತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿದೆ. ಆ ಮೂಲಕ ಆದೇಶ ನೀಡಿ ಅಧಿಸೂಚನ ಹೊರಡಿಸಲಾಗಿದೆ.
ಇದನ್ನೂ ಓದಿ: BBMP Property tax: ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹ ಬರೋಬ್ಬರಿ ಸಾವಿರ ಕೋಟಿ ರೂ. ಹೆಚ್ಚಳ
ಸರ್ಕಾರದ ಆದೇಶ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.