AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Schools: ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಹೊಸ ಕೊರೊನಾ ಮಾರ್ಗಸೂಚಿ ಪ್ರಕಟ

ಬೆಂಗಳೂರಿನ 2 ಶಾಲೆಯ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ  ಬಿಬಿಎಂಪಿ  ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟ ಮಾಡಿದೆ.

BBMP Schools: ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಿಗೆ ಹೊಸ ಕೊರೊನಾ ಮಾರ್ಗಸೂಚಿ ಪ್ರಕಟ
ಬಿಬಿಎಂಪಿ ಕಚೇರಿ
TV9 Web
| Updated By: ವಿವೇಕ ಬಿರಾದಾರ|

Updated on: Jun 15, 2022 | 4:09 PM

Share

ಬೆಂಗಳೂರು: ಬೆಂಗಳೂರಿನ (Bengaluru) 2 ಶಾಲೆಯ ಮಕ್ಕಳಲ್ಲಿ ಕೊರೊನಾ (Covid-19) ಸೋಂಕು ಪತ್ತೆಯಾದ ಹಿನ್ನೆಲೆ  ಬಿಬಿಎಂಪಿ (BBMP)  ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ (Schools) ಕೊರೊನಾ ಮಾರ್ಗಸೂಚಿ ಪ್ರಕಟ ಮಾಡಿದೆ. ಮಾರ್ಗಸೂಚಿಯಲ್ಲಿ  ಮಕ್ಕಳು, ಪೋಷಕರಿಗೆ ಮುಂಜಾಗ್ರತಾ ಕ್ರಮವಹಿಸಬೇಕು. ಕೊವಿಡ್​ ಲಕ್ಷಣ ಕಂಡುಬಂದ ಕೂಡಲೇ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು. ಫಲಿತಾಂಶ ಬರುವವರೆಗೂ ಮಕ್ಕಳ್ಳನ್ನು ಪ್ರತ್ಯೇಕವಾಗಿ ಇರಿಸಬೇಕು. ಶಾಲೆಗಳಲ್ಲಿ ಮಾಸ್ಕ್​, ಸಾಮಾಜಿಕ ಅಂತರ ಕಡ್ಡಾಯ ಪಾಲನೆ ಮಾಡಬೇಕು. ಶಾಲೆಗಳ ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್​ ಕಡ್ಡಾಯವಾಗಿ ಮಾಡಬೇಕು.

ಇದನ್ನು ಓದಿ: ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ: ಸಿಎಂ ಬೊಮ್ಮಾಯಿ ಬೆಂಗಳೂರು ಸಿಟಿ ರೌಂಡ್ಸ್

ಕೊರೋನಾಗೆ ಭಯಪಡದೇ ಮಕ್ಕಳು ಮತ್ತು ಪೋಷಕರು ಲಸಿಕೆ ಹಾಕಿಸಿಕೊಳ್ಳಬೇಕು. ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸಿರುವುದು, ಸಾಮಾಜಿಕ ಅಂತರ ಕಾಪಾಡುವುದು ಖಚಿತಪಡಿಸಿಕೊಳ್ಳಬೇಕು.ಸಂಸ್ಥೆಯ ಆವರಣದ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುಬೇಕು. ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಂಸ್ಥೆಯ ಸಿಬ್ಬಂದಿ ಕೋವಿಡ್-19 ಲಸಿಕೆ ಪಡೆದಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಲಸಿಕೆ ಪಡೆಯದವರು ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುಬೇಕು. ಕೋವಿಡ್-19 ಲಸಿಕೆ ಪಡೆಯುವಂತೆ ಪ್ರೇರೇಪಿಸಿ ಮತ್ತು ಅಗತ್ಯ ಕ್ರಮ ಕೈಗೊಳ್ಳಬೇಕು.

ವಿದ್ಯಾರ್ಥಿಗಳು, ಪೋಷಕರು ಅನುಸರಿಸಬೇಕಾದ ಕ್ರಮಗಳು

ಮನೆಯಲ್ಲಿರುವ ಎಲ್ಲರೂ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಬೇಕು. ಪೋಷಕರು, ಮಕ್ಕಳಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಿದಲ್ಲಿ ಫಲಿತಾಂಶ ಬರುವವರೆಗೂ ಶಾಲೆಗೆ ಕಳುಹಿಸಬೇಡಿ. ಮನೆಯಲ್ಲಿರುವ ಎಲ್ಲಾ ಅರ್ಹ ಮಕ್ಕಳು ಕೋವಿಡ್-19 ಲಸಿಕೆ ಪಡೆಯಲು ಪ್ರೇರೇಪಿಸುವುದು. ಮನೆಯಲ್ಲಿರುವ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.