AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಧರಿಸದವರಿಗೆ 250 ರೂ. ದಂಡ; ಹಬ್ಬಗಳ ಹಿನ್ನೆಲೆ ಬೆಂಗಳೂರಿಗರಿಗೆ ಹೊಸ ನಿಯಮ ಜಾರಿ

Bengaluru Covid Guidelines | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡಿದರೆ 250 ರೂ. ದಂಡ ವಿಧಿಸಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಂಗಡಿಗಳವರು ಕೂಡ ಮಾಸ್ಕ್ ಧರಿಸುವುದು ಕಡ್ಡಾಯ.

ಮಾಸ್ಕ್ ಧರಿಸದವರಿಗೆ 250 ರೂ. ದಂಡ; ಹಬ್ಬಗಳ ಹಿನ್ನೆಲೆ ಬೆಂಗಳೂರಿಗರಿಗೆ ಹೊಸ ನಿಯಮ ಜಾರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 19, 2021 | 6:24 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಕೇಸುಗಳು ಏರಿಕೆಯಾಗುತ್ತಿರುವುದರಿಂದ ಕೊವಿಡ್ 3ನೇ ಅಲೆಯ (Covid 3rd Wave) ಭೀತಿ ಶುರುವಾಗಿದೆ. ಇದರ ಜೊತೆಗೆ ವರಮಹಾಲಕ್ಷ್ಮೀ ವ್ರತ, ಓಣಂ, ಮೊಹರಂ ಸೇರಿದಂತೆ ಸಾಲು ಸಾಲು ಹಬ್ಬಗಳು ಬರುತ್ತಿರುವುದರಿಂದ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ (BBMP) ಹೊಸ ಮಾರ್ಗಸೂಚಿ (Covid Guidelines) ಬಿಡುಗಡೆ ಮಾಡಲಾಗಿದೆ. ಇದರ ಅನ್ವಯ ಮಾರ್ಕೆಟ್​ಗಳಲ್ಲಿ ಹೆಚ್ಚು ಜನರು ಒಟ್ಟಿಗೇ ಸೇರುವಂತಿಲ್ಲ. ಮಾಸ್ಕ್ ಧರಿಸದವರಿಗೆ 250 ರೂ. ದಂಡ ವಿಧಿಸಲಾಗುತ್ತದೆ. ಹಾಗೇ, ಜನಸಂದಣಿ ಹೆಚ್ಚಿರುವ ಪ್ರದೇಶಗಳಿಗೆ ಸರ್​ಪ್ರೈಸ್ ಭೇಟಿ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಈ ಬಗ್ಗೆ ಆರೋಗ್ಯ ಅಧಿಕಾರಿಗಳು ನಿಗಾ ಇಡಬೇಕು ಹಾಗೂ ಜನರಲ್ಲಿ ಜಾಗೃತಿ ಮೂಡಿಸಬೇಕು. ಯಾರಾದರೂ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡಿದರೆ 250 ರೂ. ದಂಡ ವಿಧಿಸಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಂಗಡಿಗಳವರು ಕೂಡ ಮಾಸ್ಕ್ ಧರಿಸುವುದು ಕಡ್ಡಾಯ. ಆರೋಗ್ಯ ಅಧಿಕಾರಿಗಳು ಬೆಂಗಳೂರಿನ ಮಾರ್ಕೆಟ್, ರೆಸ್ಟೋರೆಂಟ್, ಅಂಗಡಿಗಳಿಗೆ ದಿಢೀರನೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಈಗಾಗಲೇ ಬೆಂಗಳೂರಿನಲ್ಲಿ ಆಗಸ್ಟ್ 30ರವರೆಗೆ ನೈಟ್‌ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹೇರಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿತ್ತು. ಆ ರಾತ್ರಿ ಕರ್ಫ್ಯೂ ಆದೇಶವನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನಲ್ಲಿ ಹೆಚ್ಚು ಮಕ್ಕಳಿಗೆ ಕೊವಿಡ್ ಟೆಸ್ಟ್ ಮಾಡುತ್ತೇವೆ. ಯಾರಿಗಾದರೂ ಸೋಂಕು ದೃಢಪಟ್ಟರೆ ಅವರ ಮಕ್ಕಳಿಗೆ ಟೆಸ್ಟ್​ ಮಾಡಿಸುತ್ತೇವೆ. ಕೊವಿಡ್ ಟೆಸ್ಟ್ ಪ್ರಮಾಣ​ ಶೇಕಡಾ 50ರಷ್ಟು ಹೆಚ್ಚಿಸುತ್ತೇವೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಆ. 30ರವರೆಗೆ ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಬೇಕು, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಸಾಲಾಗಿ ಹಬ್ಬಗಳು ಬರುತ್ತಿರುವುದರಿಂದ ಕೊರೊನಾ ರ್ಯಾಂಡಮ್ ಟೆಸ್ಟ್​ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಗಿದೆ. ಮಹದೇವಪುರ, ಬೊಮ್ಮನಹಳ್ಳಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬೆಂಗಳೂರಿಲ್ಲಿ ಕಳೆದ 2 ವಾರಗಳಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಒಟ್ಟಿಗೆ ಕಂಡುಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುತ್ತಿದೆ. ಜೊತೆಗೆ 100 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗುತ್ತದೆ. ಬೆಂಗಳೂರಿನ ಅಪಾರ್ಟ್​ಮೆಂಟ್ ಅಥವಾ ಕಾಂಪ್ಲೆಕ್ಸ್​ಗಳ ಎಲ್ಲರೂ, ಅಲ್ಲಿಗೆ ಭೇಟಿ ನೀಡುವವರ ಉಷ್ಣಾಂಶ ಪರಿಶೀಲಿಸಬೇಕು. ಸ್ಯಾನಿಟೈಸೇಶನ್, ಮಾಸ್ಕ್ ಧರಿಸುವಿಕೆ ಕಡ್ಡಾಯ ಆಗಿರಬೇಕು. ಅಪಾರ್ಟ್​ಮೆಂಟ್​ನ ಹೊರತಾದವರು ಸ್ಥಳಕ್ಕೆ ಭೇಟಿ ಕೊಟ್ಟರೆ ಅವರ ಹೆಸರು ಮತ್ತು ಸಂಪರ್ಕ ಸಂಖ್ಯೆ ದಾಖಲಿಸಿರಬೇಕು.

3 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಮಾಸ್ಕ್ ಧರಿಸಿರುವಂತೆ ಪೋಷಕರು ನೋಡಿಕೊಳ್ಳಬೇಕು. ಜನ ಸೇರುವ, ಗುಂಪಾಗಿ ನಡೆಸುವ, ಸಾರ್ವಜನಿಕ ಅಥವಾ ಸಾಮೂಹಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ. ಮಕ್ಕಳ ಗುಂಪು ಚಟುವಟಿಕೆಗಳು, ತರಗತಿಗಳು ಕೂಡ ನಡೆಸುವುದು ಸೂಕ್ತವಲ್ಲ. ಹೋಮ್ ಡೆಲಿವರಿ, ಕೊರಿಯರ್ ಇನ್ನಿತರ ಸೇವೆಗಳಿಗೆ, ಸೇವೆ ನೀಡುವವರು ಅಪಾರ್ಟ್​ಮೆಂಟ್​ನ ಹೊರಗಿನ ಗೇಟ್ ಅಥವಾ ಮುಖ್ಯ ಗೇಟ್​ವರೆಗೆ ಮಾತ್ರ ಬರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: Covishield: ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೂ ಮತ್ತೆ ವ್ಯಾಕ್ಸಿನ್ ಬೇಕೆಂದು ಕೋರ್ಟ್ ಮೊರೆ ಹೋದ ಕೇರಳಿಗ!

ಬೇಗೂರು ಕೆರೆಯಲ್ಲಿ ಶಿವನ ಪತ್ರಿಮೆ ನಿರ್ಮಾಣ; ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

(BBMP issued New Covid Guidelines in Bengaluru ahead of Festivals 250 Rs Fine for Not Wearing Mask in Bangalore)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!