Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

ಬೆಂಗಳೂರು ನಗರದ ಪ್ರವೇಶ ದ್ವಾರಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕೊವಿಡ್ ಟೆಸ್ಟ್ ನಡೆಸುವಂತೆ ಸೂಚನೆ ನೀಡಲಾಗಿದೆ. ಅನ್​ಲಾಕ್​ ನಿಮಿತ್ತ ಸಾಗರೋಪಾದಿಯಲ್ಲಿ ಜನ ಹರಿದು ಬರುತ್ತಿದ್ದು ಒಂದು ವೇಳೆ ಮೈಮರೆತರೆ ಬೆಂಗಳೂರು ಮತ್ತೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ.

Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ
ಸಂಗ್ರಹ ಚಿತ್ರ
Follow us
TV9 Web
| Updated By: Skanda

Updated on: Jun 15, 2021 | 7:13 AM

ಬೆಂಗಳೂರು: ಕೊರೊನಾ ಎರಡನೇ ಅಲೆಯ ಅಬ್ಬರ ಕೊಂಚ ತಗ್ಗುತ್ತಿದ್ದಂತೆಯೇ ಕರ್ನಾಟಕದಲ್ಲಿ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಿದೆ. ನಿನ್ನೆಯಿಂದ (ಜೂನ್​ 14) ರಾಜ್ಯದ 11 ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕೆಲ್ಲಾ ಕಡೆಗಳಲ್ಲೂ ಕಠಿಣ ನಿಯಮಾವಳಿಗಳನ್ನು ಸಡಿಲಿಸಲಾಗಿದೆ. ಲಾಕ್​ಡೌನ್ ಪರಿಣಾಮ ಕೆಲಸ ಮಾಡುತ್ತಿದ್ದ ಊರನ್ನು ತೊರೆದು ಸ್ವಂತ ಊರಿಗೆ ತೆರಳಿದ್ದವರಲ್ಲಿ ಸಾಕಷ್ಟು ಮಂದಿ ಈಗ ತಮ್ಮ ಕಾರ್ಯಸ್ಥಾನಕ್ಕೆ ಮರಳುತ್ತಿದ್ದಾರೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನತ್ತ ಜನಸಾಗರವೇ ಹರಿದುಬರುತ್ತಿದ್ದು, ಹೀಗೆ ಗುಂಪುಗುಂಪಾಗಿ ಜನ ಬರುತ್ತಿರುವುದು ಆತಂಕಕ್ಕೂ ಕಾರಣವಾಗಿದೆ. ಇದರಿಂದಾಗಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗ ಕೊರೊನಾ ಪರೀಕ್ಷೆಯ ಮೊರೆಹೋಗಿದ್ದು, ಬೆಂಗಳೂರು ನಗರ ಪ್ರವೇಶಿಸುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ ಎಂದು ತಿಳಿಸಿದೆ.

ಬೆಂಗಳೂರಿಗೆ ಹೊರಗಿನಿಂದ ಬರುವವರಿಗೆ ಕೊವಿಡ್ ಟೆಸ್ಟ್ ಕಡ್ಡಾಯ ಎಂದು ಆದೇಶ ಮಾಡಿರುವ ಬಿಬಿಎಂಪಿ ಅದಕ್ಕಾಗಿ ಸೂಕ್ತ ವ್ಯವಸ್ಥೆಯನ್ನೂ ಮಾಡಿದೆ. ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳು, ಗಾರ್ಮೆಂಟ್ಸ್, ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಗಳು, ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಕೊವಿಡ್ ಟೆಸ್ಟ್ ನಡೆಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆದೇಶ ನೀಡಿದ್ದಾರೆ.

ಬೆಂಗಳೂರು ನಗರದ ಪ್ರವೇಶ ದ್ವಾರಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕೊವಿಡ್ ಟೆಸ್ಟ್ ನಡೆಸುವಂತೆ ಸೂಚನೆ ನೀಡಲಾಗಿದೆ. ಅನ್​ಲಾಕ್​ ನಿಮಿತ್ತ ಸಾಗರೋಪಾದಿಯಲ್ಲಿ ಜನ ಹರಿದು ಬರುತ್ತಿದ್ದು ಒಂದು ವೇಳೆ ಮೈಮರೆತರೆ ಬೆಂಗಳೂರು ಮತ್ತೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರಕ್ಕೆ ಬರಲಾಗಿದೆ. ಕೇವಲ ಬೇರೆ ಜಿಲ್ಲೆಗಳ ಜನರಷ್ಟೇ ಅಲ್ಲದೇ, ಹೊರ ರಾಜ್ಯಗಳ ಜನರೂ ಕೆಲಸವನ್ನರಸಿ ಬೆಂಗಳೂರಿಗೆ ಆಗಮಿಸಲಿರುವುದರಿಂದ ಅಗತ್ಯ ಎಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕಾಗಿದೆ.

ಅನ್​ಲಾಕ್​ ಆಗಿದ್ದರೂ ಜನರು ಕೊರೊನಾ ನಿಯಮಾವಳಿಗಳನ್ನು ಪಾಲಿಸಬೇಕು. ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಕಾಳಜಿ ವಹಿಸಲೇಬೇಕು. ಎರಡು ಡೋಸ್​ ಕೊರೊನಾ ಲಸಿಕೆ ತೆಗೆದುಕೊಂಡವರು ಕೂಡಾ ಈ ವಿಚಾರದಲ್ಲಿ ಮೈಮರೆಯಬಾರದು. ಸಂಭವನೀಯ ಮೂರನೇ ಅಲೆ ಬಗ್ಗೆ ಈಗಾಗಲೇ ಸಾಕಷ್ಟು ಆತಂಕ ಇರುವುದರಿಂದ ಅದನ್ನು ತಡೆಗಟ್ಟಲು ಜನರು ಸರ್ವಾನುಶಕ್ತ ಪ್ರಯತ್ನಿಸಬೇಕು ಎಂದು ತಜ್ಞರು ಪದೇ ಪದೇ ಎಚ್ಚರಿಸುತ್ತಿದ್ದಾರೆ.

ಇನ್ನೊಂದೆಡೆ, ಬೀದರ್ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. 5 ದಿನಗಳಲ್ಲಿ ಕೇವಲ 80 ಕೊರೊನಾ ‌ಸೋಂಕಿತರು ಪತ್ತೆಯಾಗಿದ್ದು, ಓರ್ವ ಸೋಂಕಿತರು ಮೃತರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 105 ಸಕ್ರಿಯ ಪ್ರಕರಣಗಳಿದ್ದು, 70 ರೋಗಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರೆ ಇನ್ನುಳಿದ 35 ಮಂದಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡನೇ ಅಲೆ ವೇಳೆ ರಾಜ್ಯದಲ್ಲೇ ಹಾಟ್ ಸ್ಪಾಟ್ ಆಗಿದ್ದ ಬೀದರ್ ಜಿಲ್ಲೆಯಲ್ಲಿ ಸದ್ಯ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇಕಡಾ 0.54 ಕ್ಕೆ ಇಳಿದಿದೆ. ಬ್ರಿಮ್ಸ್ ನಲ್ಲಿ ಶೇ.95 ರಷ್ಟು ಬೆಡ್ ಗಳು ಖಾಲಿಯಾಗಿದ್ದು, ಜಿಲ್ಲಾಡಳಿತದ ಕಟ್ಟುನಿಟ್ಟಿನ ನಿರ್ಧಾರದಿಂದ ಸೋಂಕು ತಗ್ಗಿದೆ ಎಂದು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 6835 ಮಂದಿಗೆ ಕೊರೊನಾ ಸೋಂಕು, 120 ಮಂದಿ ಸಾವು 

ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಲಸಿಕೆ ಪಡೆದವರಿಗೆ ಶುಭಸುದ್ದಿ; ಮೊದಲ ಡೋಸ್​ನಲ್ಲೇ ಹೆಚ್ಚು ಪ್ರತಿಕಾಯ ಸೃಷ್ಟಿ ಎಂದ ಅಧ್ಯಯನ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?