ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ. 121 ಜನ ಪತ್ತೆಯಾಗಿಲ್ಲವೆಂದು ಬಿಬಿಎಂಪಿಯಿಂದ ಮಾಹಿತಿ ನೀಡಿದೆ. ಜೊತೆಗೆ, ಬ್ರಿಟನ್‌ನಿಂದ ನಗರಕ್ಕೆ ಬಂದಿದ್ದ 24 ಜನರಿಗೆ ಸೋಂಕು ಪತ್ತೆಯಾಗಿದೆ.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ
ಬಿಬಿಎಂಪಿ ಮುಖ್ಯ ಕಚೇರಿ
Follow us
KUSHAL V
|

Updated on:Jan 05, 2021 | 10:11 PM

ಬೆಂಗಳೂರು: ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ. 121 ಜನ ಪತ್ತೆಯಾಗಿಲ್ಲವೆಂದು ಬಿಬಿಎಂಪಿಯಿಂದ ಮಾಹಿತಿ ನೀಡಿದೆ. ಜೊತೆಗೆ, ಬ್ರಿಟನ್‌ನಿಂದ ನಗರಕ್ಕೆ ಬಂದಿದ್ದ 24 ಜನರಿಗೆ ಸೋಂಕು ಪತ್ತೆಯಾಗಿದೆ. ಈವರೆಗೆ ನಗರಕ್ಕೆ ಬಂದ 24 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

700ಕ್ಕೂ ಹೆಚ್ಚು ಪ್ರಯಾಣಿಕರಿಗೆ RTPCR ತಪಾಸಣೆ ಮಾಡಿಲ್ಲವೇಕೆ? ಇತ್ತ, ರಾಜ್ಯದಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ PIL ಒಂದರ ವಿಚಾರಣೆ ನಡೆಯಿತು. ಈ ವೇಳೆ, ಇಂಗ್ಲೆಂಡ್‌ನಿಂದ ರಾಜ್ಯಕ್ಕೆ ಬಂದವರ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಸಲ್ಲಿಕೆಯಾಯಿತು.

ರಾಜ್ಯಕ್ಕೆ ಒಟ್ಟು 3,137 ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ 3,061 ಪ್ರಯಾಣಿಕರನ್ನು ಪತ್ತೆಹಚ್ಚಲಾಗಿದೆ. ಬೇರೆ ರಾಜ್ಯಗಳಿಂದ 594 ಪ್ರಯಾಣಿಕರು ಆಗಮಿಸಿದ್ದಾರೆ. ಆದರೆ, ಉಳಿದ 75 ಪ್ರಯಾಣಿಕರು ಈವರೆಗೆ ಪತ್ತೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಜೊತೆಗೆ, 2,292 ಪ್ರಯಾಣಿಕರ RTPCR ಪರೀಕ್ಷೆ ನಡೆಸಲಾಗಿದೆ. 176 ಪ್ರಯಾಣಿಕರ ತಪಾಸಣಾ ಫಲಿತಾಂಶ ಬರಬೇಕಿದೆ. 34 ಪ್ರಯಾಣಿಕರಿಗೆ ಕೊರೊನಾ-19 ಸೋಂಕು ಪತ್ತೆಯಾಗಿದೆ. 14 ಪ್ರಾಥಮಿಕ ಸೋಂಕಿತರಿಗೂ ಕೊವಿಡ್ ಸೋಂಕು ದೃಢಪಟ್ಟಿದೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ. ಅದರಲ್ಲಿ, 9 ಪ್ರಯಾಣಿಕರಲ್ಲಿ ಬ್ರಿಟನ್​ ರೂಪಾಂತರಿ ಸೋಂಕು ಪತ್ತೆಯಾಗಿದೆ. ಓರ್ವ ಪ್ರಾಥಮಿಕ ಸೋಂಕಿತರಲ್ಲಿ ರೂಪಾಂತರಿ ಸೋಂಕು ಪತ್ತೆಯಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಸಲ್ಲಿಕೆಯಾಗಿದೆ.

ಈ ನಡುವೆ, 700ಕ್ಕೂ ಹೆಚ್ಚು ಪ್ರಯಾಣಿಕರಿಗೆ RTPCR ತಪಾಸಣೆ ಮಾಡಿಲ್ಲವೇಕೆ? ಎಂದು ರಾಜ್ಯ ಸರ್ಕಾರದಿಂದ ಹೈಕೋರ್ಟ್ ಸ್ಪಷ್ಟನೆ ಕೇಳಿದೆ. ಜೊತೆಗೆ, ಜ.12ರಂದು ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾ ಲಸಿಕೆ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಸೂಕ್ಷ್ಮವಾಗಿ ವರ್ತಿಸಿರುವುದು ಖುಷಿಯ ವಿಚಾರ: ತೇಜಸ್ವಿ ಸೂರ್ಯ

Published On - 10:05 pm, Tue, 5 January 21

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್