AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ
ಶಾಸಕ ಅಖಂಡ ಶ್ರೀನಿವಾಸಮೂರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 6:50 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಯಾವುದೇ ಕಾರಣಕ್ಕೂ BBMP ಚುನಾವಣೆಯಲ್ಲಿ ಟಿಕೆಟ್ ಸಿಗಬಾರದು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಎಐಸಿಸಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ರಣದೀಪ್​ ಸಿಂಗ್​ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸಂಪತ್​ರಾಜ್​ರನ್ನು ಕಾಂಗ್ರೆಸ್​ನಿಂದ​​ ವಜಾ​ ಮಾಡಬೇಕು. BBMP ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಬಾರದು ಎಂದು ಕೋರಿದ್ದೇನೆ. ವರಿಷ್ಠರ ಜೊತೆ ಚರ್ಚಿಸಿ ನಿರ್ಧರಿಸುವ ಭರವಸೆ ನೀಡಿದ್ದಾರೆ. ಪಕ್ಷದಲ್ಲಿ ಎಲ್ಲರೂ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎನ್ನುವ ಭರವಸೆ ನೀಡಿದ್ದಾರೆ.

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ. ಅಲ್ಲದೆ,  ಹೈಕಮಾಂಡ್ ಜತೆ ಚರ್ಚೆ ಬಳಿಕ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

ಏನಿದು ಪ್ರಕರಣ?

ಬೆಂಗಳೂರಿನ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಪತ್​ ರಾಜ್ ಸಿಸಿಬಿ ಬಲೆಗೆ ಬಿದ್ದಿದ್ದರು. ಪ್ರಕರಣದಲ್ಲಿ ಚಾರ್ಜ್​ಶೀಟ್ ದಾಖಲಾದ ದಿನದಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ನ ಬಹಳ ಪ್ರಯಾಸದ ನಂತರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ನಂತರ ಹೈಕೋರ್ಟ್​ ಅವರಿಗೆ ಜಾಮೀನು ನೀಡಿತ್ತು.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​