ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಯಾವುದೇ ಕಾರಣಕ್ಕೂ BBMP ಚುನಾವಣೆಯಲ್ಲಿ ಟಿಕೆಟ್ ಸಿಗಬಾರದು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಎಐಸಿಸಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ರಣದೀಪ್ ಸಿಂಗ್ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸಂಪತ್ರಾಜ್ರನ್ನು ಕಾಂಗ್ರೆಸ್ನಿಂದ ವಜಾ ಮಾಡಬೇಕು. BBMP ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಬಾರದು ಎಂದು ಕೋರಿದ್ದೇನೆ. ವರಿಷ್ಠರ ಜೊತೆ ಚರ್ಚಿಸಿ ನಿರ್ಧರಿಸುವ ಭರವಸೆ ನೀಡಿದ್ದಾರೆ. ಪಕ್ಷದಲ್ಲಿ ಎಲ್ಲರೂ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎನ್ನುವ ಭರವಸೆ ನೀಡಿದ್ದಾರೆ.
ಅಖಂಡ ಶ್ರೀನಿವಾಸ್ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ. ಅಲ್ಲದೆ, ಹೈಕಮಾಂಡ್ ಜತೆ ಚರ್ಚೆ ಬಳಿಕ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ
ಏನಿದು ಪ್ರಕರಣ?
ಬೆಂಗಳೂರಿನ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಪತ್ ರಾಜ್ ಸಿಸಿಬಿ ಬಲೆಗೆ ಬಿದ್ದಿದ್ದರು. ಪ್ರಕರಣದಲ್ಲಿ ಚಾರ್ಜ್ಶೀಟ್ ದಾಖಲಾದ ದಿನದಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್ನ ಬಹಳ ಪ್ರಯಾಸದ ನಂತರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ನಂತರ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು.