AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳ ನೀಡುತ್ತಿಲ್ಲ ಎಂದು ಕರ್ತವ್ಯ ನಿರ್ವಹಿಸದೇ ಬಿಬಿಎಂಪಿ ಪಶ್ಚಿಮ ವಲಯದ ವಾರ್​ರೂಂ ಸಿಬ್ಬಂದಿ ಪ್ರತಿಭಟನೆ

ಸಂಬಳ ನೀಡದ ಹಿನ್ನೆಲೆಯಲ್ಲಿ ಬಿಬಿಎಂಪಿ ಪಶ್ಚಿಮ ವಲಯದ ವಾರ್​ರೂಂ ಸಿಬ್ಬಂದಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರಿಂದಾಗಿ ಕೊರೊನಾ ಸೋಂಕಿತರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಸಂಬಳ ನೀಡುತ್ತಿಲ್ಲ ಎಂದು ಕರ್ತವ್ಯ ನಿರ್ವಹಿಸದೇ ಬಿಬಿಎಂಪಿ ಪಶ್ಚಿಮ ವಲಯದ ವಾರ್​ರೂಂ ಸಿಬ್ಬಂದಿ ಪ್ರತಿಭಟನೆ
ಬಿಬಿಎಂಪಿ ಪಶ್ಚಿಮ ವಲಯದ ವಾರ್​ರೂಂ ಸಿಬ್ಬಂದಿ ಪ್ರತಿಭಟನೆ
shruti hegde
|

Updated on: May 06, 2021 | 3:35 PM

Share

ಬೆಂಗಳೂರು: ಸಂಬಳ ನೀಡದ ಹಿನ್ನೆಲೆಯಲ್ಲಿ ಬಿಬಿಎಂಪಿ ಪಶ್ಚಿಮ ವಲಯದ ವಾರ್​ರೂಂ ಸಿಬ್ಬಂದಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದರಿಂದಾಗಿ ಕೊರೊನಾ ಸೋಂಕಿತರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಸಿಬ್ಬಂದಿ ಪ್ರತಿಭಟನೆ ಕೈಗೊಂಡಿರುವುದರಿಂದ ವಾರ್​ರೂಂಗೆ ಬರುತ್ತಿರುವ ದೂರವಾಣಿ ಕರೆಗಳನ್ನೂ ಕೂಡಾ ಯಾರೂ ಸ್ವೀಕರಿಸುವವರಿಲ್ಲ ಎನ್ನುವಂತಾಗಿದೆ.

ನಗರದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ತುರ್ತಾಗಿ ಬೆಡ್​ ವ್ಯವಸ್ಥೆ ಆಗಬೇಕು ಎಂದು ಕರೆ ಮಾಡಿದರೆ ಯಾರೂ ದೂರವಾಣಿ ಕರೆಯನ್ನು ಸ್ವೀಕರಿಸುತ್ತಿಲ್ಲ. ಕರ್ತವ್ಯ ನಿರ್ವಹಿಸದೇ ವಾರ್​ರೂಂ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಬೆಡ್​ ಬೇಕು ಎಂದು ನೂರಾರು ಕರೆಗಳು ಬರುತ್ತಿದ್ದರೂ ಕೂಡಾ ಯಾರೂ ಕೂಡಾ ಈ ಕುರಿತಂತೆ ಗಮನ ಹರಿಸುತ್ತಿಲ್ಲ. ಬಿಯು ನಂಬರ್ ಜನರೇಟ್ ಆಗೋದು ಕೂಡ ವಾರ್​ರೂಂನಿಂದಲೇ ಆಗಿರುವುದರಿಂದ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆ ತುರ್ತಾಗಿ ಚಿಕಿತ್ಸೆ ಬೇಕಾದ ರೋಗಿಗಳ ಪ್ರಾಣದ ಮೇಲೆ ಪರಿಣಾಮ ಬೀರುತ್ತದೆ.

ಇನ್ನೊಂದೆಡೆ ಬಿಬಿಎಂಪಿ, ಹೋಂ ಐಸೋಲೇಷನ್​ನಲ್ಲಿದ್ದ ಸೋಂಕಿತರ ಆರೈಕೆ ಮಾಡುತ್ತಿಲ್ಲ, ಉಸಿರಾಟ ಸಮಸ್ಯೆ ಆಗುತ್ತಿದೆ. ಮಾತ್ರೆ ತಂದು ಕೊಡಿ ಅಂದರೂ ಬಿಬಿಎಂಪಿ ಸಿಬ್ಬಂದಿ ಕಾಳಜಿ ವಹಿಸುತ್ತಿಲ್ಲ. ಕನಿಷ್ಟ ಮಾತ್ರೆಗಳನ್ನೂ ಕೊಡದೇ ನಿರ್ಲ್ಯಕ್ಷ ತೋರುತ್ತಿದ್ದಾರೆ. ನಾವೇ ಔಷಧದ ಅಂಗಡಿಗೆ ಹೋಗಿ ಔಷಧ ತಂದುಕೊಳ್ತೇವೆ ಎಂದು ಸೋಂಕಿತರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

Coronavirus India Update: ಭಾರತದಲ್ಲಿ 4.12 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ, 3980 ಮಂದಿ ಸಾವು

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ