ಹಿರೇಕೆರೂರು, ರಟ್ಟಿಹಳ್ಳಿ ವ್ಯಾಪ್ತಿಯ ಬಡ ಕುಟುಂಬಗಳಿಗೆ ಕೃಷಿ ಸಚಿವರ ಸಹಾಯ ಹಸ್ತ; ಕೊರೊನಾ ಸೋಂಕಿತರ ವೆಚ್ಚ ಭರಿಸಲು ಮುಂದಾದ ಬಿ.ಸಿ.ಪಾಟೀಲ್
ಜಿಲ್ಲೆಯಲ್ಲಿನ ಕೆಲವೊಂದು ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಸಹಾಯಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಧಾವಿಸಿದ್ದಾರೆ.
ಹಾವೇರಿ: ಈಗ ಎಲ್ಲೆಲ್ಲೂ ಕೊರೊನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ಸಿಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಹಣಕ್ಕಾಗಿ ಸೋಂಕಿತರ ಜೀವದ ಜೊತೆ ಆಟವಾಡುತ್ತಿದ್ದಾರೆ. ಹಣ ನೀಡದಿದ್ದರೆ ಖಾಸಗಿ ಆಸ್ಪತ್ರೆ ಸೂಕ್ತ ಚಿಕಿತ್ಸೆ ನೀಡಲ್ಲ ಅಂತಾ ಹಲವರು ಆರೋಪಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ವಿರುದ್ಧ ಅದೆಷ್ಟೋ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಬಡವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.
ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಜಿಲ್ಲೆಯಲ್ಲಿನ ಕೆಲವೊಂದು ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಸಹಾಯಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಧಾವಿಸಿದ್ದಾರೆ.
ಈ ಸಂಬಂಧ ತಮ್ಮ ಹಿರೇಕೆರೂರಿನ ನಿವಾಸದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಹಿರೇಕೆರೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿ ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಘೋಷಿಸಿದ್ದಾರೆ.
ಬಡತನ ರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಕೊವಿಡ್ ಚಿಕಿತ್ಸೆಗೆ ಹಾವೇರಿ ಜಿಲ್ಲೆಗೆ ಒಳಪಟ್ಟ ಆಸ್ಪತ್ರೆಗಳಿಗೆ ಮಾತ್ರ ದಾಖಲಾಗಿರಬೇಕು. ಬಿಪಿಎಲ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. ಚಿಕಿತ್ಸೆ ಪಡೆದ ವಿವರ, ಮಾಹಿತಿ ಮತ್ತು ಅಗತ್ಯ ದಾಖಲೆಗಳು ಹಾಗೂ ಆಸ್ಪತ್ರೆಯ ಬಿಲ್ಗಳನ್ನು ಸಲ್ಲಿಸಲು ಸಚಿವರ ಆಪ್ತ ಸಹಾಯಕರಾದ ಮನೋಜ್ ಹಾರನಹಳ್ಳಿ ಹಾಗೂ ನಾಗರಾಜ್ ಬಣಕಾರ್ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.
ಇದನ್ನೂ ಓದಿ
ಕೊರೊನಾ ಸೋಂಕಿತನ ತಪ್ಪು ಗ್ರಹಿಕೆಯಿಂದ ಚಿಕ್ಕಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ರಂಪಾಟ!
Coronavirus India Update: ದೇಶದಲ್ಲಿ ಒಂದೇ ದಿನ 3.79 ಲಕ್ಷ ಹೊಸ ಕೊವಿಡ್ ಪ್ರಕರಣ, 3,645 ಸಾವು
(BC Patil decided to donate money to poorest families of corona infected in haveri)