AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ರಿಸರ್ವ್; ಆರೋಗ್ಯ ಇಲಾಖೆ ಆದೇಶಕ್ಕೆ ಕೆಲ ಸಚಿವರ ಆಕ್ರೋಶ

ಬೆಂಗಳೂರು ಖಾಸಗಿ ಆಸ್ಪತ್ರೆಗಳ ವಿಚಾರ ಬಿಬಿಎಂಪಿಯ ಹೊಣೆ. ಆದರೆ ಆರೋಗ್ಯ ಇಲಾಖೆ ಆದೇಶ ನೀಡಲು ಅವಕಾಶ ಕೊಟ್ಟಿದ್ದೇಕೆ? ಆರೋಗ್ಯ ಸಚಿವ ಸುಧಾಕರ್‌ ಜಿಲ್ಲೆಗೆ ಬೇರೆ ಕಾನೂನು, ಇತರರಿಗೆ ಒಂದು ಕಾನೂನೇ?; ಕೆಲ ಸಚಿವರ ಪ್ರಶ್ನೆ.

ಚಿಕ್ಕಬಳ್ಳಾಪುರದ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ರಿಸರ್ವ್; ಆರೋಗ್ಯ ಇಲಾಖೆ ಆದೇಶಕ್ಕೆ ಕೆಲ ಸಚಿವರ ಆಕ್ರೋಶ
ಕೆ. ಸುಧಾಕರ್​
guruganesh bhat
|

Updated on:Apr 30, 2021 | 11:03 PM

Share

ಬೆಂಗಳೂರು: ಚಿಕ್ಕಬಳ್ಳಾಪುರದ ಸೋಂಕಿತರಿಗೆ ಬೆಂಗಳೂರಿನ 3 ಆಸ್ಪತ್ರೆಗಳಲ್ಲಿ ಶೇ 15ರಷ್ಟು ಬೆಡ್​ಗಳನ್ನು ಮೀಸಲಿರಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆ ಆದೇಶಕ್ಕೆ ಬೆಂಗಳೂರಿನ ಇತರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ವಿಚಾರ ಬಿಬಿಎಂಪಿಯ ಹೊಣೆ. ಆದರೆ ಆರೋಗ್ಯ ಇಲಾಖೆ ಆದೇಶ ನೀಡಲು ಅವಕಾಶ ಕೊಟ್ಟಿದ್ದೇಕೆ? ಆರೋಗ್ಯ ಸಚಿವ ಸುಧಾಕರ್‌ ಜಿಲ್ಲೆಗೆ ಬೇರೆ ಕಾನೂನು, ಇತರರಿಗೆ ಒಂದು ಕಾನೂನೇ? ಎಂದು ಕೆಲವು ಸಚಿವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಬಳ್ಳಾರಿ ರಸ್ತೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆ, ಸಹಕಾರನಗರದ ಆಸ್ಟರ್, ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗಳಲ್ಲಿ ಚಿಕ್ಕಬಳ್ಳಾಪುರದ ಸರ್ಕಾರಿ ಕೋಟಾದಡಿಯಲ್ಲಿ ಶಿಫಾರಸಾಗುವ ಸೋಂಕಿತರಿಗೆ ಹಾಸಿಗೆ ಕಾಯ್ದಿರಿಸಲು ಆರೋಗ್ಯ ಇಲಾಖೆ ಆದೇಶಿಸಿದೆ. ಈ ಕುರಿತು ಬೇಸರ ವ್ಯಕ್ತಪಡಿಸಿರುವ ಬೆಂಗಳೂರಿನ ಇತರ ಸಚಿವರು ಬಿಬಿಎಂಪಿ ಮುಖ್ಯ ಆಯುಕ್ತರನ್ನು ಈ ಕುರಿತು ಪ್ರಶ್ನಿಸಿದ್ದಾರೆ. ಸಚಿವ ಡಾ.ಸುಧಾಕರ್ ಸೂಚನೆ ಮೇರೆಗೆ ಬೆಡ್​ಗಳು ಮೀಸಲು ಇರಿಸಲಾಗಿದ್ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಇಂದು ಒಂದೇ ದಿನ 579 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.

ರಾಜ್ಯದ ಸೋಂಕಿತರ ವಿವರ ಕರ್ನಾಟಕದಲ್ಲಿ ಇಂದು ಒಂದೇ ದಿನ 48,296 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಇಂದೊಂದೇ ಒಂದೇ ದಿನ ಕೊರೊನಾಗೆ 217 ಜನರು ಸಾವಿಗೀಡಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 26,756 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 93 ಜನರ ಬಲಿಯಾಗಿದ್ದಾರೆ.

ಇಂದಿನ ಸೋಂಕಿತರ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟಾರೆ ಸಂಖ್ಯೆ 15,23,142ಕ್ಕೇರಿಕೆಯಾಗಿದೆ.  ಸೋಂಕಿತರ ಪೈಕಿ 11,24,909 ಜನ ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟ 217 ಜನರನ್ನೂ ಸೇರಿ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 15,523 ಜನರ ಸಾವನ್ನಪ್ಪಿದ್ದಾರೆ. ಸದ್ಯ 38,2690 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಲಸಿಕೆಗಾಗಿ 18-45 ವರ್ಷದವರು ನಾಳೆ ಆಸ್ಪತ್ರೆಗೆ ಹೋಗಬೇಡಿ, ಅಧಿಕೃತವಾಗಿ ಹೇಳೋ ತನಕ ಕಾಯಬೇಕು: ಡಾ.ಸುಧಾಕರ್

Covid Helpline Numbers: ಆಕ್ಸಿಜನ್​, ರೆಮ್​ಡೆಸಿವರ್​ ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಿ

(Bed Reserve in Bangalore Hospitals for Chikkaballapur Infection Some ministers outrage over health department and Minister Dr K Sudhakar)

Published On - 11:00 pm, Fri, 30 April 21

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ