ಅತುಲ್ ಸುಭಾಷ್ ಆತ್ಮಹತ್ಯೆ ‌ಕೇಸ್: ರಾಷ್ಟ್ರಪತಿ, ಸುಪ್ರೀಂ ಜಡ್ಜ್​​ಗೆ ಮೇಲ್​​ ಮಾಡಿದ್ದ ಟೆಕ್ಕಿ

ಬೆಂಗಳೂರಿನ ಟೆಕ್ಕಿ ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ಅತುಲ್‌ರ ಪತ್ನಿ ಮತ್ತು ಮೂವರು ಸಂಬಂಧಿಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅತುಲ್ ರಾಷ್ಟ್ರಪತಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಇಮೇಲ್ ಕಳುಹಿಸಿದ್ದರು, ಅಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿನ ದೋಷಗಳ ಬಗ್ಗೆ ಮತ್ತು ತನ್ನ ಮೇಲೆ ಹೊರಿಸಲಾದ ಸುಳ್ಳು ಪ್ರಕರಣಗಳ ಬಗ್ಗೆ ಉಲ್ಲೇಖಿಸಿದ್ದಾರೆ.

ಅತುಲ್ ಸುಭಾಷ್ ಆತ್ಮಹತ್ಯೆ ‌ಕೇಸ್: ರಾಷ್ಟ್ರಪತಿ, ಸುಪ್ರೀಂ ಜಡ್ಜ್​​ಗೆ ಮೇಲ್​​ ಮಾಡಿದ್ದ ಟೆಕ್ಕಿ
ಅತುಲ್ ಸುಭಾಷ್ ಆತ್ಮಹತ್ಯೆ ‌ಕೇಸ್: ರಾಷ್ಟ್ರಪತಿ, ಸುಪ್ರೀಂ ಜಡ್ಜ್​​ಗೆ ಮೇಲ್​​ ಮಾಡಿದ್ದ ಟೆಕ್ಕಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 12, 2024 | 7:27 PM

ಬೆಂಗಳೂರು, ಡಿಸೆಂಬರ್​ 12: ನಗರದಲ್ಲಿ ನಡೆದಿದ್ದ ಟೆಕ್ಕಿ ಅತುಲ್ (Atul Subhash) ಆತ್ಮಹತ್ಯೆ  ಪ್ರಕರಣ ಸಂಬಂಧ ಈಗಾಗಲೇ ಎಫ್​ಐಆರ್​ ದಾಖಲಾಗಿದೆ. ಅತುಲ್ ಪತ್ನಿಯೇ A1 ಆಗಿದ್ದು, ಇನ್ನೂ ಮೂವರ ವಿರುದ್ದ ದೂರು ನೀಡಲಾಗಿದೆ. ಒಂದು ಕಡೆ ಆತ್ಮಹತ್ಯೆ ಸಂಬಂಧ ಸ್ಪೋಟಕ ವಿಚಾರಗಳು ಬಯಲಾಗಿದ್ದರೆ, ಮತ್ತೊಂದು ಕಡೆ ಅತುಲ್‌ ಸಾವಿಗೆ ನ್ಯಾಯ ಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಈ ಮಧ್ಯೆ ಸಾವಿಗೆ ಮುಂಚೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಸುಪ್ರೀಂ ಕೋರ್ಟ್‌ ಜಡ್ಜ್‌ಗೆ ಇ-ಮೇಲ್ ಕಳುಹಿಸಿರುವುದು ಬಹಿರಂಗವಾಗಿದೆ.

ನೀವು ಮನಸ್ಸು ಮಾಡಿದರೆ ದೇಶದಲ್ಲಿ‌ ಬದಲಾವಣೆ ತರಬಹುದು

ಹೌದು.. ಸಾವಿಗೂ ಮುಂಚೆ ಅಂದರೆ ಡಿಸೆಂಬರ್ 9ರಂದು ರಾತ್ರಿ 1 ಗಂಟೆ 31 ನಿಮಿಷಕ್ಕೆ ಟೆಕ್ಕಿ ಅತುಲ್​ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಸುಪ್ರೀಂ ಕೋರ್ಟ್‌ ಜಡ್ಜ್‌ಗೆ ಇ-ಮೇಲ್​ ಒಂದನ್ನು ಕಳುಹಿಸಿದ್ದು, ನಿಮ್ಮ ಕೈಯಲ್ಲಿ ದೊಡ್ಡ ಅಧಿಕಾರ ಇದೆ. ಮನಸ್ಸು ಮಾಡಿದರೆ ದೇಶದಲ್ಲಿ‌ ಬದಲಾವಣೆ ತರಬಹುದು.

ಇದನ್ನೂ ಓದಿ: Justice Is Due ಎಂದು ಕತ್ತಿಗೆಗೆ ಬೋರ್ಡ್ ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ, ಸಾಯಲು ಟೈಮ್​ ಟೇಬಲ್ ಹಾಕಿದ್ದ

ಅಸಮರ್ಥ ಮತ್ತು ಪಕ್ಷಪಾತಿ ನ್ಯಾಯಾಧೀಶರನ್ನು ವಜಾಗೊಳಿಸಬೇಕು. ನ್ಯಾಯಾಂಗ ವ್ಯವಸ್ಥೆಯಲ್ಲಿ ಅನೇಕ ಬದಲಾವಣೆ ತರಬೇಕು ಎಂಬ ಈ ರೀತಿಯಲ್ಲಿ ಹಲವು ವಿಚಾರಗಳನ್ನ ಉಲ್ಲೇಖಿಸಿದ್ದು, ತನ್ನ ಮೇಲೆ ಸುಳ್ಳು ಕೇಸ್, ಸೆಕ್ಷನ್​ಗಳು ಹಾಕಿದ್ದಾರೆಂದು ಕೂಡ ಮೇಲ್​ನಲ್ಲಿ ಉಲ್ಲೇಖಿಸಿದ್ದಾರೆ.

ಎರಡು ದಿನದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಟೆಕ್ಕಿ ಅತುಲ್ ಸುಭಾಷ್ 40 ಪುಟಗಳ ಡೆತ್ ನೋಟ್ ಬರೆದಿದ್ದು, ಆತನ ಸಾವಿಗೆ ಆಕೆಯ ಪತ್ನಿ ಮನೆಯವರ ಮಾನಸಿಕ ಹಿಂಸೆಯೇ ಕಾರಣ ಅನ್ನೋದು ಬಟಬಯಲಾಗಿತ್ತು. ಹೀಗಾಗಿಯೇ ಅತುಲ್ ಸಹೋದರ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಅತುಲ್ ಸಾವಿಗೆ ಕಾರಣರಾದವರ ವಿರುದ್ದ ದೂರು‌ ನೀಡಿದ್ದು, ಆತ್ಮಹತ್ಯೆ ಕಾರಣ ಏನು ಅನ್ನೋದನ್ನ ಬಿಚ್ಚಿಟ್ಟಿದ್ದರು.

ಇದನ್ನೂ ಓದಿ: ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಅತುಲ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಅತುಲ್​​ ಮಡದಿ ನಿಕಿತಾ ಸಿಂಘಾನಿಯ, ಅತ್ತೆ ನಿಶಾ ಸಿಂಘಾನಿಯ, ಬಾಮೈದ ಅನುರಾಗ್ ಸಿಂಘಾನಿಯ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯ ವಿರುದ್ಧ ಮಾರತ್ ಹಳ್ಳಿ ಪೋಲಿಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ವರದಿ: ಪ್ರದೀಪ್​ ಕ್ರೈಂ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ