SSLC ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಸಚಿವ ಸುರೇಶ್ ಕುಮಾರ್ ಸೂಚನೆ
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ SSLC ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರು ಸೂಚನೆ ನೀಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಜ್ವರ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಬೇಕು. ವಿದ್ಯಾರ್ಥಿಗಳು ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು. ಅಗತ್ಯವಾದ ಡೆಸ್ಕ್, ಬೆಂಚ್ಗಳನ್ನು ಆಸುಪಾಸಿನ […]
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ SSLC ಪರೀಕ್ಷೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಶೈಕ್ಷಣಿಕ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿ ಸಚಿವರು ಸೂಚನೆ ನೀಡಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಬಂದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಜ್ವರ ತಪಾಸಣೆ ಕಡ್ಡಾಯವಾಗಿ ಮಾಡಬೇಕು. ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿ ಪರೀಕ್ಷೆಗೆ ಹಾಜರುಪಡಿಸಬೇಕು. ವಿದ್ಯಾರ್ಥಿಗಳು ನೆಲದ ಮೇಲೆ, ಬಯಲಿನಲ್ಲಿ ಪರೀಕ್ಷೆ ಬರೆಯದಂತೆ ಎಚ್ಚರ ವಹಿಸಬೇಕು. ಅಗತ್ಯವಾದ ಡೆಸ್ಕ್, ಬೆಂಚ್ಗಳನ್ನು ಆಸುಪಾಸಿನ ಶಾಲೆಗಳಿಂದ ಸಂಗ್ರಹಿಸಬೇಕು.
ಕಂಟೈನ್ಮೆಂಟ್ ವಲಯಗಳಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ವಲಯಗಳಿಗೆ ಸ್ಥಳಾಂತರಿಸಬೇಕು. ಉಪಕೇಂದ್ರಗಳನ್ನು ಸ್ಥಾಪಿಸಿ, ಕೊಠಡಿಯಲ್ಲಿ 24 ಮಕ್ಕಳ ಬದಲಿಗೆ ಕಡಿಮೆ ಸಂಖ್ಯೆಯ ಮಕ್ಕಳನ್ನು ಕೂರಿಸಬೇಕು. ಪ್ರತಿ ಕೇಂದ್ರದಲ್ಲೂ ಕಡ್ಡಾಯವಾಗಿ ಸಿಸಿಟಿವಿ, ವೈದ್ಯಕೀಯ ಸೌಲಭ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
Published On - 5:00 pm, Mon, 4 May 20