AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನ: ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ, ಪೊಲೀಸರು ಹೈ ಅಲರ್ಟ್

Belagavi Assembly Session Security: ದೆಹಲಿ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಹೈ ಅಲರ್ಟ್ ಘೋಷಿಸಿದೆ. ಇಂಟೆಲಿಜೆನ್ಸ್ ಅಲರ್ಟ್ ಕಾರಣ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುತ್ತಿದೆ. ಸುವರ್ಣ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದ್ದು, ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ.

ಬೆಳಗಾವಿ ಅಧಿವೇಶನ: ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ, ಪೊಲೀಸರು ಹೈ ಅಲರ್ಟ್
ಬೆಳಗಾವಿಯ ಸುವರ್ಣ ವಿಧಾನಸೌಧ
Sahadev Mane
| Updated By: Ganapathi Sharma|

Updated on: Dec 03, 2025 | 9:10 AM

Share

ಬೆಳಗಾವಿ, ಡಿಸೆಂಬರ್ 3: ಡಿಸೆಂಬರ್ 8ರಿಂದ ಬೆಳಗಾವಿಯ (Belagavi) ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆ ಬೆಳಗಾವಿಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆಯಿಂದ (Intelligence Department) ಎಚ್ಚರಿಕೆಯ ಸಂದೇಶ ಬಂದ ಎಚ್ಚರಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳು ಹೈಅಲರ್ಟ್‌ ಆಗಿವೆ. ಅಧಿವೇಶನ ವೇಳೆಗೆ 6ರಿಂದ 8 ಸಾವಿರ ಪೊಲೀಸರನ್ನು ನಿಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನದಲ್ಲಿ ಸಚಿವಾಲಯ ಸಿಬ್ಬಂದಿ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಸುವರ್ಣ ಸೌಧ ಆವರಣದಲ್ಲಿ ನಿಷೇಧಾಜ್ಞೆ

ಅಧಿವೇಶನ ಅವಧಿಯಲ್ಲಿ ಸುವರ್ಣ ಸೌಧ ಆವರಣದಲ್ಲಿ ಸಾಲು ಸಾಲು ಪ್ರತಿಭಟನೆಗಳು ಕೂಡ ನಡೆಯುತ್ತವೆ. ಹೀಗಾಗಿ ಪ್ರತಿದಿನ 50 ಸಾವಿರ ಜನ ಸೇರುವ ಸಾಧ್ಯತೆ ಇದೆ. ಆ ಸಂದರ್ಭದಲ್ಲಿ ಯಾವುದೇ ಅವಘಡವಾಗದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಸುವರ್ಣ ವಿಧಾನಸೌಧದ ಸುತ್ತಮುತ್ತ 3 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

Belagavi Suvarna Soudha Security

ಅಧಿವೇಶನಕ್ಕೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಿದ್ಧತೆಗಳ ಬಗ್ಗೆ ಖುದ್ದು ಡಿಸಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಭೂಷಣ್ ಬೋರಸೆ, ಎಸ್ಪಿ ಡಾ. ಭೀಮಾಶಂಕರ ಗುಳೇದ್ ಹಾಗೂ ಸಿಇಒ ರಾಹುಲ್ ಶಿಂಧೆ ಮಂಗಳವಾರ ಪರಿಶೀಲಿಸಿದರು. ಸುವರ್ಣ ಸೌಧ ಆವರಣದಲ್ಲಿ ಉದ್ಯಾನವನ, ಧ್ವಜಸ್ತಂಭ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕೂಡ ನಡೆಯಲಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಭರ್ಜರಿ ಸಿದ್ಧತೆ; ವಿಡಿಯೋ ನೋಡಿ

ಸಿಎಂ, ಡಿಸಿಎಂ, ಸಚಿವರು, ಶಾಸಕರು ಹಾಗೂ ಸಿಬ್ಬಂದಿಗಳ ವಾಸ್ತವ್ಯಕ್ಕೆ ಈಗಾಗಲೇ 3 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಮತ್ತೊಂದೆಡೆ ನಾಡದ್ರೋಹಿ ಎಂಇಎಸ್ ಸಂಸ್ಥೆ ನಡೆಸಲು ಯೋಜಿಸಿದ್ದ ‘ಮಹಾಮೇಳಾವ್’ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ