ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು

ತರಬೇತಿ ವೇಳೆ ಬೋಟ್ ಮಗುಚಿ ಇಬ್ಬರು ಜೂನಿಯರ್ ಕಮಾಂಡೋಗಳು ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲೂಕಿನ ಹಾಜಗೋಳಿ ಬಳಿ ದುರ್ಘಟನೆ ನಡೆದಿದೆ. ಒಟ್ಟು 6 ಜನರ ಪೈಕಿ ಈಜಿ ಪ್ರಾಣಾಪಾಯದಿಂದ ನಾಲ್ವರು ಕಮಾಂಡೋಗಳು ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆಎಲ್‌ ವಿಂಗ್ ಕಮಾಂಡೋ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು
ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on: Sep 08, 2024 | 2:51 PM

ಬೆಳಗಾವಿ, ಸೆಪ್ಟೆಂಬರ್​ 08: ತರಬೇತಿ ವೇಳೆ ಬೋಟ್ ಮಗುಚಿ ಇಬ್ಬರು ಜೂನಿಯರ್ ಕಮಾಂಡೋಗಳು (commandos) ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲೂಕಿನ ಹಾಜಗೋಳಿ ಬಳಿ ನಡೆದಿದೆ. ರಾಜಸ್ಥಾನದ ವಿಜಯಕುಮಾರ್(28) ಮತ್ತು ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತ ಜೂನಿಯರ್ ಕಮಾಂಡೋಗಳು. ತಿಲಾರಿ ಡ್ಯಾಂ ಹಿನ್ನೀರಿನಲ್ಲಿ ನದಿ ದಾಟುವ ತರಬೇತಿ ನೀಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಒಟ್ಟು ಆರು ಜನರಿದ್ದ ಬೋಟ್​ನಿಂದ ನಾಲ್ವರು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆಎಲ್​ವಿಂಗ್ ಕಮಾಂಡೋ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ: ಸಾವು

ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ  ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ. ಸುನೀಲ್ ಬಂಡರಗರ್ (10) ಮೃತ ಬಾಲಕ. ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆ ಗೆಳೆಯರ ಜೊತೆಗೆ ಹೊರ ಬಂದಿದ್ದಾಗ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಕಲಬುರಗಿ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ

ಮಕ್ಕಳು ನಿಂತಿದ್ದನ್ನ ಗಮನಿಸಿದರೂ ಚಾಲಕ ಮಕ್ಕಳ ಮೇಲೆ ಬಸ್ ಹರಿಸಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಿಂದ ಕಾರವಾರದ ಕಡೆ ಸರ್ಕಾರಿ ಬಸ್ ಹೋಗುತಿತ್ತು. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ ಮತ್ತು ಆಟೋ ಮಧ್ಯೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ತುಮಕೂರು: ಬೈಕ್ ಮತ್ತು​ ಆಟೋ ಮಧ್ಯೆ ಡಿಕ್ಕಿಯಾಗಿ ಮೂವರು ವ್ಯಕ್ತಿಗಳು ಗಂಭೀರ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ನಡೆದಿದೆ. ಬೈಕ್​ ಡಿಕ್ಕಿಯಾದ ಬಳಿಕ ಆಟೋ ಪಲ್ಟಿಯಾಗಿ ಮೂವರಿಗೆ ಗಾಯಗಳಿವೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

ಬಳ್ಳಾರಿ: ಜಿಲ್ಲೆ ಸಂಡೂರು ತಾಲೂಕಿನ‌ ದೋಣಿಮಲೈ ಕ್ರಾಸ್ ಬಳಿಯ ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸಂಡೂರು ನಿವಾಸಿ ಫಾರುಕ್ (45) ಮೃತ ದುರ್ದೈವಿ. ಬಾಬಯ್ ದೇವಸ್ಥಾನಕ್ಕೆ ಹೋಗಿ ಮರಳಿ ಬರುವಾಗ ದುರ್ಘಟನೆ ನಡೆದಿದೆ. ಸೇತುವೆ ಮೇಲಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಖದೀಮನನ್ನು ನಗ್ನಗೊಳಿಸಿ ಥಳಿಸಿದ ಯುವಕರು

ಸದ್ಯ ಅಧಿಕಾರಿಗಳು ಹಳ್ಳದ ನೀರಿನಿಂದ ಮೃತದೇಹವನ್ನು ಹೊರ ತೆಗೆದಿದ್ದಾರೆ. ಮೃತ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಯುಡಿಆರ್​ ಅಡಿಯಲ್ಲಿ ಸಂಡೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ