Belagavi border row: ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಕರ್ನಾಟಕದ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

| Updated By: Rakesh Nayak Manchi

Updated on: Dec 10, 2022 | 8:41 AM

ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದ ಬೆನ್ನಲ್ಲೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಸಂಸದರು ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಸಂಸದರಿಗೆ ಸೂಚಿಸಿದ್ದಾರೆ.

Belagavi border row: ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಕರ್ನಾಟಕದ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ಗಡಿ ವಿವಾದ (Border Row) ಸಂಬಂಧ ಮಹಾರಾಷ್ಟ್ರ (Maharashtra)ದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭೇಟಿ ಮಾಡಿದ ಬೆನ್ನಲ್ಲೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಎಲ್ಲಾ ಸಂಸದರು ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಸಂಸದರಿಗೆ ಸೂಚಿಸಿದ್ದಾರೆ. ಅಲ್ಲದೆ ಮಹಾರಾಷ್ಟ್ರದ ನಿಯೋಗವು ಕೇಂದ್ರ ಗೃಹಸಚಿವರನ್ನು ಭೇಟಿಯಾಗಿರುವುದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ, ನಾವು ಕೂಡ ಗೃಹಸಚಿವರನ್ನು ಭೇಟಿಯಾಗಿ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದ ನಿಯೋಗ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವುದು ಯಾವುದೇ ವ್ಯತ್ಯಾಸ ಆಗುವುದಿಲ್ಲ. ಈ ಹಿಂದೆ ಕೂಡ ಮಹಾರಾಷ್ಟ್ರ ಈ ರೀತಿಯ ಪ್ರಯತ್ನ ಮಾಡಿದೆ‌. ಈ ಪ್ರಕರಣ ಸುಪ್ರೀಂ ಕೊರ್ಟ್​​ನಲ್ಲಿದೆ. ಸುಪ್ರೀಂ ಕೋರ್ಟ್​ನಲ್ಲಿ ನಮ್ಮ ನ್ಯಾಯ ಸಮ್ಮತ ಪ್ರಕರಣ ಗಟ್ಟಿಯಾಗಿದೆ. ಗಡಿ ವಿಚಾರದಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗಡಿ ವಿವಾದ: ಅಮಿತ್​ ಶಾ ಭೇಟಿಯಾದ ಮಹಾರಾಷ್ಟ್ರ ನಾಯಕರು, ಕರ್ನಾಟಕದ ವಿರುದ್ಧ ದೂರು

ಎರಡನೇ ಟ್ವೀಟ್ ಮಾಡಿದ ಮುಖ್ಯಮಂತ್ರಿಯವರು, ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಸೋಮವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ತಿಳಿಸಿದ್ದೇನೆ. ನಾನೂ ಕೂಡ ರಾಜ್ಯದ ನ್ಯಾಯ ಸಮ್ಮತ ನಿಲುವನ್ನು ತಿಳಿಸಲು ಕೇಂದ್ರ ಗೃಹ ಸಚಿವರನ್ನು ಶೀಘ್ರವೇ ಭೇಟಿ ಮಾಡಲಿದ್ದೇನೆ ಎಂದರು.

ಮಹಾರಷ್ಟ್ರ ಮತ್ತೆ ಗಡಿ ವಿವಾದ ಮುನ್ನಲೆಗೆ ತಂದಿದ್ದು, ಕಳೆದ ಹತ್ತು ಹದಿನೈದು ದಿನಗಳಿಂದ ಬೆಳಗಾವಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಿವಾದದ ಕುರಿತು ಎನ್​​ಸಿಪಿ ಸಂಸದೆ ಸುಪ್ರಿಯಾ ಸುಳೆ (ಡಿ.7) ಲೋಕಸಭೆಯಲ್ಲಿ ಪ್ರಸ್ತಾಪಿಸಿ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪ ಮಾಡಿದ್ದರು. ಇದೇ ವಿಚಾರವಾಗಿ ಸುಪ್ರಿಯಾ ಸುಳೆ ಮತ್ತು ಮಹಾರಾಷ್ಟ್ರದ ಕೆಲ ನಾಯಕರು ಡಿ.9ರಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿಯಾಗಿ ಗಡಿ ವಿವಾದದ ಕುರಿತು ಪ್ರಸ್ತಾಪಿಸಿದ್ದರು.

ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿರುವ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ರಾಷ್ಟ್ರ ರಾಜಧಾನಿಯಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಎರಡು ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸುವ ಪ್ರಯತ್ನ ಮಾಡಬಹುದು ಎಂದು ಎನ್‌ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿದರು. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗವು ಗಡಿ ವಿವಾದದ ಕುರಿತು ತಮ್ಮ ಕುಂದುಕೊರತೆಗಳನ್ನು ತಿಳಿಸಲು ಶಾ ಅವರನ್ನು ಭೇಟಿ ಮಾಡಿದ ನಂತರ ಕೋಲ್ಹೆ ಸುದ್ದಿಗಾರರೊಂದಿಗೆ ಮಾತನಾಡಿದರು. ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಕರೆದು ಸಮಸ್ಯೆಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ತಾನು ಕೆಲಸ ಮಾಡುವುದಾಗಿ ಎಂವಿಎ ಸಂಸದರಿಗೆ ಅಮಿತ್ ಶಾ ಅವರು ಭರವಸೆ ನೀಡಿದರು ಎಂದು ಅವರು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Sat, 10 December 22