ಬೆಳಗಾವಿ ಕೋರ್ಟ್ ಮಹತ್ವದ ಆದೇಶ: ಸಿಟಿ ರವಿ ಬೆಂಗಳೂರಿಗೆ ಶಿಫ್ಟ್!

ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಬೆಳಗಾವಿ ಕೋರ್ಟ್, ಸಿಟಿ ರವಿ ಅವರನ್ಜು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ಪೊಲೀಸರು, ಸಿಟಿ ರವಿಯವರನ್ನು ಬೆಳಗಾವಿಯಿಂದ ಬೆಂಗಳೂರಿತ್ತನ ಕರೆದುಕೊಂಡು ಹೋಗಲು ಸಿದ್ಧತೆ ನಡೆಸಿದ್ದಾರೆ.

ಬೆಳಗಾವಿ ಕೋರ್ಟ್ ಮಹತ್ವದ ಆದೇಶ: ಸಿಟಿ ರವಿ ಬೆಂಗಳೂರಿಗೆ ಶಿಫ್ಟ್!
ಸಿಟಿ ರವಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 20, 2024 | 2:53 PM

ಬೆಳಗಾವಿ, (ಡಿಸೆಂಬರ್ 20): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ.

Transit warrant ನೀಡುವ ಮೂಲಕ ಆದೇಶ ನೀಡಲಾಗಿದೆ. ಘನತೆ, ಗೌರವದಿಂದ ಆರೋಪಿಯನ್ನು ಕರೆದುಕೊಂಡು ಹೋಗಬೇಕು. 24 ಗಂಟೆಯೊಳಗೆ ಬೆಂಗಳೂರಿನ ಕೋರ್ಟ್ ಹಾಜರು ಪಡಿಸಲು ಸೂಚನೆ ನೀಡಿದೆ. ಅಂತೆಯೇ ಪೊಲೀಸರು ಬೆಳಗಾವಿಯಿಂದ ಬೆಂಗಳೂರಿನತ್ತ ಸಿಟಿ ರವಿಯನ್ನು ಕರೆದುಕೊಂಡು ಬರುತ್ತಿದ್ದಾರೆ.

ಇದನ್ನೂ ಓದಿ: CT Ravi: ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ ಎಂದು ಧಮಕಿ ಹಾಕಿದ್ದರು: ಕೋರ್ಟ್​ನಲ್ಲಿ ಸಿಟಿ ರವಿ ಆರೋಪ

ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗ್ಗೆ ಬೆಳಗಾವಿ ಕೋರ್ಟ್‌ಗೆ ಸಿ.ಟಿ ರವಿ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ವಕೀಲರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್‌ ಆದೇಶ ಕಾಯ್ದಿರಿಸಿತ್ತು. ಆದ್ರೆ, ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಬೆಳಗಾವಿ ಕೋರ್ಟ್​, ಅನುಮತಿ ನೀಡಿದ್ದು, ಎಷ್ಟು ಸಮಯಬೇಕು ಎಂದು ಕೇಳಿದೆ. ಇದಕ್ಕೆ ಪೊಲೀಸರು, ವಿಮಾನದಲ್ಲಿ ಮೂಲಕ ಹೋಗುವುದಾರೆ 2 ಗಂಟೆ, ಬೈ ರಸ್ತೆ ಮೂಲಕ ಹೋಗುವುದಾರೆ 12 ಗಂಟೆ ಬೇಕು ಎಂದು ಕೋರ್ಟ್​ಗೆ ಸ್ಪಷ್ಟಪಡಿಸಿದ್ದಾರೆ.

ಸಿಟಿ ರವಿ ಪರ ವಕೀಲ ಹೇಳಿದ್ದೇನು?

ವಿ9ಗೆ ಸಿಟಿ ರವಿ ಪರ ವಕೀಲ ಬಿ.ಎಂ ಜಿರಳಿ, ಐದನೇ ಜೆಎಂಎಫ್‌ಸಿ ಹಾಗೂ ಮುನ್ಸಿಪಲ್ ನ್ಯಾಯಾಧೀಶರು ಈ ಪ್ರಕರಣದ ಜಾಮೀನು ನೀಡಲು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬಂತೆ ಆದೇಶ ಮಾಡಿದ್ದಾರೆ. ತುರ್ತಾಗಿ ಸಿಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಮಾಡಬೇಕೆಂದು ತಿಳಿಸಿದ್ದಾರೆ. ನ್ಯಾಯಾಧೀಶರ ಆದೇಶ ಪ್ರತಿ ನನ್ನ ಕೈಗೆ ಇನ್ನೂ ಬಂದಿಲ್ಲ. ಆದೇಶ ಪ್ರತಿ ಸಿಕ್ಕ ನಂತರ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

ಕೋರ್ಟ್ ಆವರಣದಲ್ಲಿ ಸಿಟಿ ರವಿ ಹೇಳಿದ್ದಿಷ್ಟು

ಇನ್ನು ಪೊಲೀಸ್ ವಶದಲ್ಲಿರುವ ಸಿಟಿ ರವಿ, ಯಾವುದೇ ನೋಟಿಸ್​ ನೀಡದೇ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದಾರೆ. ರಾತ್ರಿಯಿಡೀ ನನ್ನನ್ನು ಬಂಧನದಲ್ಲಿಟ್ಟು ಸರ್ವಾಧಿಕಾರ ಮೆರೆದಿದ್ದಾರೆ. ಕಾಂಗ್ರೆಸ್​ ಸರ್ಕಾರ ಪೊಲೀಸರನ್ನು ದರ್ಬಳಕೆ ಮಾಡಿಕೊಂಡಿದೆ. ಸರ್ವಾಧಿಕಾರ ಬಹಳ ದಿನ ನಡೆಯಲ್ಲ, ಎಲ್ಲದಕ್ಕೂ ಕೊನೆಯಿರುತ್ತೆ. ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ, ನಮಗೂ ಕಾಲ ಬರುತ್ತೆ ಎಂದರು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್, ಪ್ರಕರಣ ವರ್ಗಾವಣೆ ಆಗಿದೆ ಅಷ್ಟೇ. ಬೇಲ್ ಸಿಕ್ಕಿಲ್ಲ. ಸಿಟಿ ರವಿ ಅವರು ಪೊಲಿಸ್ ವಶದಲ್ಲೇ ಇದ್ದಾರೆ ಅವರನ್ನ ನಾವು ಬೆಂಗಳೂರಿನ ನ್ಯಾಯಲಯದ ಮುಂದೆ ಹಾಜರು ಪಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Fri, 20 December 24

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​