ಗ್ಯಾರಂಟಿಗೆ ಎಸ್​ಸಿ ಎಸ್​ಟಿ ಅನುದಾನ: ರಾಜ್ಯ ಸರ್ಕಾರದ ವಿರುದ್ಧ ಸುವರ್ಣ ವಿಧಾನಸೌಧ ಬಳಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಲಿತರಿಗೆ ಮೀಸಲಿಟ್ಟ ಅನುದಾನ ನಮ್ಮ ಮಕ್ಕಳ ಶಿಕ್ಷಣಕ್ಕೆ, ಅಭಿವೃದ್ಧಿಗೆ ಮೀಸಲಿಡಬೇಕು. ನಮಗೆ ಮೀಸಲಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಸುವರ್ಣ ಸೌಧ ಬಳಿ ದಲಿತ ಸಂಘರ್ಷ ಸಮಿತಿಯ ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

ಗ್ಯಾರಂಟಿಗೆ ಎಸ್​ಸಿ ಎಸ್​ಟಿ ಅನುದಾನ: ರಾಜ್ಯ ಸರ್ಕಾರದ ವಿರುದ್ಧ ಸುವರ್ಣ ವಿಧಾನಸೌಧ ಬಳಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಬೆಳಗಾವಿಯ ಸುವರ್ಣ ಸೌಧ (ಸಾಂದರ್ಭಿಕ ಚಿತ್ರ)
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Ganapathi Sharma

Updated on: Dec 06, 2023 | 5:27 PM

ಬೆಳಗಾವಿ, ಡಿಸೆಂಬರ್ 6: ಎಸ್​ಸಿ ಎಸ್​ಟಿ (SC ST) ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ‘ಗ್ಯಾರಂಟಿ’ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದರ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರವಾಗಿ ಬೆಳಗಾವಿಯ ಸುವರ್ಣ ವಿಧಾನಸೌಧ (Suvarna Vidhana Soudha) ಬಳಿಯ ಸುವರ್ಣ ಗಾರ್ಡನ್ ಟೆಂಟ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.

ದಲಿತರಿಗೆ ಮೀಸಲಿಟ್ಟ ಅನುದಾನ ನಮ್ಮ ಮಕ್ಕಳ ಶಿಕ್ಷಣಕ್ಕೆ, ಅಭಿವೃದ್ಧಿಗೆ ಮೀಸಲಿಡಬೇಕು. ನಮಗೆ ಮೀಸಲಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಪ್ರತಿಭಟನಾ ನಿರತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟೇ ಅಲ್ಲದೆ, ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಪ್ರಭುನಗರ ಜನತಾ ಪ್ಲಾಟ್‌ನ 80 ಕುಟುಂಬಗಳಿಗೆ ಸೇರಿದ ಜಮೀನು ಖಾಸಗಿಯವರಿಗೆ ವರ್ಗಾವಣೆ ಮಾಡಿರುವ ಆರೋಪಕ್ಕೆ ಸಂಬಂಧಿಸಿ 80 ಕುಟುಂಬಗಳಿಗೆ ಇ-ಸ್ವತ್ತು ಒದಗಿಸುವಂತೆ ಆಗ್ರಹಿಸಲಾಗಿದೆ.

ಇದನ್ನೂ ಓದಿ: ಐಸಿಸ್ ನಂಟು ಹೊಂದಿರುವನ ಜತೆ ವೇದಿಕೆ ಹಂಚಿಕೊಂಡ ಸಿಎಂ: ಫೋಟೋ ಬಿಡುಗಡೆ ಮಾಡಿದ ಯತ್ನಾಳ್​

ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರವನ್ನು ಬೆಳಗಾವಿಗೆ ಸೇರಿಸಲು ಆಗ್ರಹ

ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರಗಳನ್ನು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸೇರಿಸಲೂ ಪ್ರತಿಭಟನೆ ವೇಳೆ ಆಗ್ರಹಹಿಸಲಾಗಿದೆ. ಸದ್ಯ ಕಿತ್ತೂರು, ಖಾನಾಪುರ ವಿಧಾನಸಭಾ ಕ್ಷೇತ್ರಗಳು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಇವೆ. ಉತ್ತರ ಕನ್ನಡ ಸಂಸದರು ಕೇವಲ ಮತ ಕೇಳಲು ಬರ್ತಾರೆ, ಆಮೇಲೆ ಬರೋದೇ ಇಲ್ಲ. ಹೀಗಾಗಿ ಬೆಳಗಾವಿ ಜಿಲ್ಲೆಯ ಕಿತ್ತೂರು, ಖಾನಾಪುರ ಎರಡೂ ಕ್ಷೇತ್ರಗಳನ್ನು ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಸೇರಿಸಲು ಒತ್ತಾಯಿಸಿಯೂ ಧರಣಿ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ