ಪಂಚಮಸಾಲಿ ಹೋರಾಟಕ್ಕೆ ಅನುಮತಿ ನೀಡದಿರಲು ಬೆಳಗಾವಿ ಡಿಸಿ ಸರ್ವಾಧಿಕಾರ ನಡೆಸುತ್ತಿದ್ದಾರೆಯೇ? ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 16, 2024 | 12:04 PM

ರಾಜ್ಯದ ಗೃಹಸಚಿವರು ತುತ್ತು ನೀಡುವವರನ್ನು ಬಿಟ್ಟು ಮುಸಲ್ಮಾನರಿಗೆ ಮುತ್ತು ಕೊಡುತ್ತಾರಂತೆ ಎಂದ ಯತ್ನಾಳ್ ಸಿದ್ದರಾಮಯ್ಯ ಅವರದ್ದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ, ಕೆಜಿ ಹಳ್ಳಿ, ಡಿಜೆ ಹಳ್ಳಿ ಮತ್ತು ಹುಬ್ಬಳ್ಳಿ ಗಲಾಟೆ ಮೊದಲಾದ ಪ್ರಕರಣಗಳನ್ನು ವಾಪಸ್ಸು ತೆಗೆದುಕೊಳ್ಳಲಾಗುವುದು ಅಂತ ಸಚಿವರು ಹೇಳಿದ್ದಾರೆ ಎಂದರು.

ಬೆಳಗಾವಿ: ಅಧಿವೇಶನದಲ್ಲಿ ಇಂದಿನ ಕಾರ್ಯಕಲಾಪ ಶುರುವಾಗುವ ಮೊದಲು ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅವಕಾಶ ನೀಡಲಾಗದು ಎಂದಿರುವ ಜಿಲ್ಲಾಧಿಕಾರಿಯವರನ್ನು ಭೇಟಿಯಾಗುವುದಾಗಿ ಹೇಳಿದರು. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೀವಾ ಅಥವಾ ಇನ್ಯಾವುದಾದರೂ ಯುಗದಲ್ಲಿ ವಾಸವಾಗಿದ್ದೀವಾ ಅಂತ ಅವರನ್ನು ಕೇಳಬೇಕಿದೆ, ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆ ಎಂದು ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Assembly Session: ಸದನದಲ್ಲಿ ಬಸನಗೌಡ ಯತ್ನಾಳ್ ಮತ್ತು ಜಮೀರ್ ಅಹ್ಮದ್ ನಡುವೆ ಸೇರಿಗೆ ಸವ್ವಾಸೇರು ವಾಗ್ವಾದ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.