AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಜೈನಮುನಿ ಹತ್ಯೆ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸದನಕ್ಕೆ ತಿಳಿಸಿದ ಸಿದ್ದರಾಮಯ್ಯ

ಬೆಳಗಾವಿ ಜಿಲ್ಲೆ ಜೈನಮುನಿ ಹತ್ಯೆ ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಮಾಹಿತಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಜೈನಮುನಿ ಹತ್ಯೆ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸದನಕ್ಕೆ ತಿಳಿಸಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ|

Updated on:Jul 19, 2023 | 2:29 PM

Share

ಬೆಂಗಳೂರು/ಬೆಳಗಾವಿ, (ಜುಲೈ 19): ಬೆಳಗಾವಿಯಲ್ಲಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ(Acharya Sri Kamakumara Nandi Maharaj) ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಇಂದು (ಜುಲೈ 19) ಸದನಕ್ಕೆ ಮಾಹಿತಿ ನೀಡಿದ ಅವರು, ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿ ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾಗಿರುವುದರಿಂದ ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದು ಸ್ಪಷ್ಟಡಿಸಿದರು.

ಇದನ್ನೂ ಓದಿ: Jain Muni Murder: ಜೈನಮುನಿಗಳ ದೇಹ ತುಂಡು ತುಂಡಾಗಿ ಕತ್ತರಿಸಿ ಡೈರಿ ಸುಟ್ಟು ಹಾಕಿದ್ರು, ಎಫ್​ಐಆರ್​ನಲ್ಲಿ ದಾಖಲಾಗಿದೆ ಭಯಾನಕ ಸಂಗತಿ

ಏನಿದು ಘಟನೆ?:

ಜು.6ರ ಬೆಳಗ್ಗೆಯಿಂದ ಜೈನಮುನಿ ಮಠದಿಂದ ನಾಪತ್ತೆಯಾಗಿದ್ದರು. ಇದರಿಂದ ಭಕ್ತರು ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೇ ಭಕ್ತರು ಎಲ್ಲ ಕಡೆ ಹುಡುಕಿದರೂ ಜೈನಮುನಿ ಸಿಕ್ಕಿರಲಿಲ್ಲ. ಹೀಗಾಗಿ ಶುಕ್ರವಾರ ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.

ಚಿಕ್ಕೋಡಿ ಠಾಣೆಯಲ್ಲಿ ದಾಖಲಾದ ಎಫ್ಐಆರ್​ನಲ್ಲಿ(FIR) ಹಲವು ವಿಷಯಗಳು ಬಯಲಾಗಿವೆ. ಸ್ವಾಮೀಜಿ‌ ಕೊಲೆ ಮಾಡಿದ್ದು ನಾರಾಯಣ ಮಾಳಿ ಒಬ್ಬನೇ ಅಲ್ಲ. ಮತ್ತೋರ್ವ ಆರೋಪಿಯ ಹೆಸರು ಎಫ್​ಐಆರ್​ನಲ್ಲಿ ದಾಖಲಾಗಿದೆ. ಹಾಗೂ ಆರೋಪಿಗಳು ಜೈನಮುನಿಗಳನ್ನು ತುಂಡು ತುಂಡಾಗಿ ಕತ್ತರಿಸಿರುವ ಬಗ್ಗೆ FIR ನಲ್ಲಿ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ನಾಲ್ಕೆ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿತ್ತು. ಸ್ವಾಮೀಜಿಗೆ ಆಪ್ತನಾಗಿದ್ದ ನಾರಾಯಣ ಮಾಳಿ, ಹಸನ್ ಅಲಿಯಾಸ್ ಹುಸೇನ್ ದಲಾಯತ್‌ ಸೇರಿ ಜೈನಮುನಿಗಳ ಹತ್ಯೆ ಮಾಡಿದ್ದು ಬಯಲಾಗಿತ್ತು.

Published On - 2:19 pm, Wed, 19 July 23