ಹೆಚ್​​ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್​ಡಿ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹೆಚ್​.ಡಿ.ರೇವಣ್ಣ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ. ಕಿಡ್ನ್ಯಾಪ್​ ಆದ ಮಹಿಳೆ ಪತ್ತೆ ಬಗ್ಗೆ ಪೊಲೀಸರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

ಬೆಳಗಾವಿ, ಮೇ 04: ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಪುತ್ರ ಹೆಚ್​.ಡಿ.ರೇವಣ್ಣರನ್ನ (HD Revanna) ಅರೆಸ್ಟ್ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪ ಮತ್ತು ಮಹಿಳೆಯ ಕಿಡ್ನ್ಯಾಪ್ ಸುಳಿಯಲ್ಲಿ ಸಿಲುಕಿದ್ದ ರೇವಣ್ಣ ಇದೀಗ ಎಸ್​ಐಟಿ ಬಲೆಗೆ ಬಿದ್ದಿದ್ದಾರೆ. ಸದ್ಯ ಈ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹೆಚ್​.ಡಿ.ರೇವಣ್ಣ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು. ಕಿಡ್ನ್ಯಾಪ್​ ಆದ ಮಹಿಳೆ ಪತ್ತೆ ಬಗ್ಗೆ ಪೊಲೀಸರ ಜೊತೆ ಮಾತನಾಡುತ್ತೇನೆ. ಪ್ರಜ್ವಲ್ ನೇರವಾಗಿ ಕೋರ್ಟ್​​ಗೆ ಹಾಜರಾಗುತ್ತಾರೆ ಎಂಬ ಸಿಎಸ್ ಪುಟ್ಟರಾಜು ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ಸಿ.ಎಸ್​.ಪುಟ್ಟರಾಜು ಅವರೇನು ಲಾಯರಾ? ಪೊಲೀಸರ ಜೊತೆ ಮಾತನಾಡಿ ಮತ್ತೆ ಮಾತನಾಡುತ್ತೇನೆ ಎಂದಿದ್ದಾರೆ.

ನ್ಯಾಯಾಲಯ ಉಂಟು, ಕಾನೂನು ಉಂಟು ಎಂದ ಡಿ.ಕೆ.ಶಿವಕುಮಾರ್

ಬಂಧನ ವಿಚಾರವಾಗಿ ಗದಗ ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ, ನಮಗೆ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಬಂಧನವಾಗಿದ್ದು ಯಾವ ಕೇಸ್​ನಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೋರ್ಟ್, ಕಾನೂನು ಮೂಲಕ ಏನಾದ್ರೂ ರಕ್ಷಣೆ ಪಡೆದುಕೊಳ್ಳಲಿ. ಅವರು ಏನಾದ್ರೂ ಮಾಡಿಕೊಳ್ಳಲಿ. ಕುಮಾರಣ್ಣ ಏನೋ ಹೇಳಿದ್ದಾರೆ, ಹಾಗೇ ಆಗುತ್ತೆ. ಆ ಮೂಲಕ ಉಪ್ಪು ತಿಂದವರು ನೀರು ಕುಡಿಯಲೇಬೇಕು ಹೇಳಿಕೆಯನ್ನು ನೆನಪಿಸಿದರು.

ಪ್ರಜ್ವಲ್ ಬಂಧನಕ್ಕೆ ಕೇಂದ್ರ ಸಹಕರಿಸಬೇಕು: ವಿನಯ್ ಕುಲಕರ್ಣಿ

ಶಾಸಕ ವಿನಯ್ ಕುಲಕರ್ಣಿ ಕೂಡ ಪ್ರತಿಕ್ರಿಯಿಸಿದ್ದು, ಇವಾಗ ಕೆಲವರು ಅವರ ಬಂಧನದ ಬಗ್ಗೆ ನನಗೆ ಹೇಳಿದರು. ಅವರ ಮೇಲಿನ ದೂರಿನ ಆಧಾರದ ಸಹಜವಾಗಿ ಕಾನೂನು ಕ್ರಮ ಕೈಗೊಂಡಿದೆ. ದೇಶದಲ್ಲೇ ಈ ರೀತಿಯ ಮೊದಲ ಆ ಕೃತ್ಯ ಅಂತ ಅನಿಸುತ್ತೆ. ಮಹಿಳೆಯರಿಗೆ ಆದಂತಹ ಅಗೌರವ ಬಹಳ ನೋವಾಗುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದರು.

ಇದನ್ನೂ ಓದಿ: HD Revanna Arrest: ಕೊನೆಗೂ ಹೆಚ್​ಡಿ ರೇವಣ್ಣ ಬಂಧನ; ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಅರೆಸ್ಟ್

ಚುನಾವಣೆ ಲಾಭದ ಪ್ರಶ್ನೆ ಏನೂ ಇಲ್ಲ, ಅವರು ಏನು ಅಂತ ಜನಕ್ಕೆ ಗೊತ್ತಾಗಿದೆ. ರೇವಣ್ಣ ಬಂಧನವಾಗಿದೆ. ಇನ್ನು ಪ್ರಜ್ವಲ್ ರೇವಣ್ಣ ಯಾಕೆ ಬಿಡುತ್ತಾರೆ. ಪ್ರಜ್ವಲ್ ಬಂಧನಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:54 pm, Sat, 4 May 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us