ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸೋಂಕಿತ ವೃದ್ಧ ಸಾವು; ರಸ್ತೆಯಲ್ಲಿ ಬಿದ್ದು ಒದ್ದಾಡಿದರು ಸಹಾಯಕ್ಕೆ ಬಾರದ ಜನ

|

Updated on: May 16, 2021 | 8:17 AM

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನೇಸರಗಿ ಮೂಲದ ನಾಗಭೂಷಣ ಸಂಪಗಾವಿ (73) ಎಂಬ ವೃದ್ಧ ಉಸಿರಾಟ ಸಮಸ್ಯೆಯಿಂದ ರಸ್ತೆಯಲ್ಲೇ ನರಳಾಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಕೊವಿಡ್‌ಗೆ ಹೆದರಿದ ಸ್ಥಳೀಯರು ಸಹಾಯಕ್ಕೆ ಧಾವಿಸಲಿಲ್ಲ.

ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಸೋಂಕಿತ ವೃದ್ಧ ಸಾವು; ರಸ್ತೆಯಲ್ಲಿ ಬಿದ್ದು ಒದ್ದಾಡಿದರು ಸಹಾಯಕ್ಕೆ ಬಾರದ ಜನ
ಸಾಂದರ್ಭಿಕ ಚಿತ್ರ
Follow us on

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ ರೀತಿಯ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದ್ದು, ವೃದ್ಧರೊಬ್ಬರಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನೇಸರಗಿ ಮೂಲದ ನಾಗಭೂಷಣ ಸಂಪಗಾವಿ (73) ಎಂಬ ವೃದ್ಧ ಉಸಿರಾಟ ಸಮಸ್ಯೆಯಿಂದ ರಸ್ತೆಯಲ್ಲೇ ನರಳಾಡಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಕೊವಿಡ್‌ಗೆ ಹೆದರಿದ ಸ್ಥಳೀಯರು ಸಹಾಯಕ್ಕೆ ಧಾವಿಸಲಿಲ್ಲ.

ಆ್ಯಂಬುಲೆನ್ಸ್‌ಗೆ ಕರೆ ಮಾಡಿದರೂ ಸ್ಥಳಕ್ಕೆ ಬಾರದ ಹಿನ್ನೆಲೆ ಕುಟುಂಬಸ್ಥರು ಕೊನೆಗೆ ಕಾರು ಮಾಡಿಕೊಂಡು ವೃದ್ಧನನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದರು ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವನ್ನಪ್ಪಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಕ್ಕಿದ್ದರೆ ವೃದ್ಧ ಬದುಕುತ್ತಿದ್ದರು. ಜಿಲ್ಲಾಡಳಿತ ಈ ಬಗ್ಗೆ ಇನ್ನಾದರೂ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಆಕ್ಸಿಜನ್ ಸಿಗದೆ ಕೊರೊನಾ ಸೋಂಕಿತ ವೃದ್ಧ ಸಾವು; ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯ ವಿರುದ್ಧ ಮೊಮ್ಮಗಳಿಂದ ಗಂಭೀರ ಆರೋಪ

ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ ಸ್ಥಳದಲ್ಲೇ ಕುಸಿದು ಸಾವು