Laxmi Hebbalkar Profile: ಆರಂಭಿಕ ಚುನಾವಣೆಗಳಲ್ಲಿ ಸೋಲುಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಎದ್ದು ಬಂದಿದ್ದು ಹೇಗೆ​?​ ಇಲ್ಲಿದೆ ಜೀವನಗಾಥೆ

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈ ಬಾರಿ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಬೆಳಗಾವಿಯ ಧೀರ ರಾಜಕಾರಣಿಯಾಗಿರವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮೊದಲ ಬಾರಿಗೆ ಮಂತ್ರಿಯಾಗಿದ್ದಾರೆ.

Laxmi Hebbalkar Profile: ಆರಂಭಿಕ ಚುನಾವಣೆಗಳಲ್ಲಿ ಸೋಲುಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಎದ್ದು ಬಂದಿದ್ದು ಹೇಗೆ​?​ ಇಲ್ಲಿದೆ ಜೀವನಗಾಥೆ
ಲಕ್ಷ್ಮೀ ಹೆಬ್ಬಾಳ್ಕರ್‌
Follow us
| Updated By: ನಯನಾ ಎಸ್​ಪಿ

Updated on: May 27, 2023 | 12:38 PM

ಬೆಳಗಾವಿ: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈ ಬಾರಿ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಬೆಳಗಾವಿಯ ಧೀರ ರಾಜಕಾರಣಿಯಾಗಿರವ ಲಕ್ಷ್ಮೀ ಹೆಬ್ಬಾಳ್ಕರ್‌ (Laxmi Hebbalkar) ಅವರು ಮೊದಲ ಬಾರಿಗೆ ಮಂತ್ರಿಯಾಗಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪೂರ್ಣ ಹೆಸರು ಲಕ್ಷ್ಮೀ ರವೀಂದ್ರ ಹೆಬ್ಬಾಳ್ಕರ್. ಲಿಂಗಾಯತ ಪಂಚಮಸಾಲಿ (Lingayat Panchamsali) ಸಮುದಾಯ ಪ್ರಬಲ ನಾಯಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಫೆಬ್ರವರಿ 14 1975ರಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರು ವೃತ್ತಿಯಿಂದ ಕೈಗಾರಿಕೋದ್ಯಮಿಯಾಗಿದ್ದಾರೆ. ಪತಿ ರವೀಂದ್ರ ಹೆಬ್ಬಾಳ್ಕರ್, ಮಕ್ಕಳು ಮೃಣಾಲ್ ಹೆಬ್ಬಾಳ್ಕರ್, ಸಹೋದರ ಚನ್ನರಾಜ ಹಟ್ಟಿಹೊಳಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.

ರಾಜಕೀಯ ಜೀವನ

ಲಕ್ಷ್ಮೀ ಹೆಬ್ಬಾಳ್ಕರ್‌ ಅವರು 1998ರಲ್ಲಿ ಬೆಳಗಾವಿ ಜಿಲ್ಲೆ ಖಾನಾಪುರದಲ್ಲಿ ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ರಾಜಕೀಯ ಜೀವನ ಆರಂಭಿಸಿದರು. ಇವರು ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮಾರ್ಗರೇಟ್ ಆಳ್ವ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ವೇಳೆ ಸಕ್ರೀಯ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿದ್ದರು. ನಂತರ 2011ರಿಂದ 2014ರವರೆಗೆ ಬೆಳಗಾವಿ ಗ್ರಾಮಾಂತರ ‌ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.

ಆರಂಭಿಕ ಚುನಾವಣೆಗಳಲ್ಲಿ ಸೋಲು

2013ರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಸೋಲುಂಡರು. ನಂತರ 2014ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡರು. ನಂತರ 2015ರಲ್ಲಿ ಎಐಸಿಸಿ ಸದಸ್ಯೆಯಾಗಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಯ್ಕೆಯಾದರು.

ಅಲ್ಲಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡ ಇವರು 2018ರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನಸಭೆ ಪ್ರವೇಶ ಮಾಡಿದರು. 2018ರ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ಕರ್ನಾಟಕ ಮೈಸೂರು ಮಿನರಲ್ಸ್‌ ನಿಗಮದ ಅಧ್ಯಕ್ಷೆಯಾಗಿ ನೇಮಕಗೊಂಡರು. 2021ರಲ್ಲಿ ಕಾಂಗ್ರೆಸ್‌ ರಾಜ್ಯ ವಕ್ತಾರೆಯಾದರು.

ಇತ್ತೀಚಿಗೆ ನಡೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ 1.8 ಲಕ್ಷ ಮತ ಪಡೆದು, ಬಿಜೆಪಿ ಅಭ್ಯರ್ಥಿಯನ್ನು 56 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸುವ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಹರ್ಷ ಶುಗರ್ಸ್ ಚೇರಮನ್‌ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ನಿಯಮಿತ ಸ್ಥಾಪಿಸುವ ಮೂಲಕ ಸಹಕಾರಿ ರಂಗವನ್ನು ಪ್ರವೇಶ ಮಾಡಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು