AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಜ್ಯೋತಿಷಿ ಹೇಳಿದ್ದು ಕೇಳಿದ್ರೆ… ಸಿಎಂ ಆಗೋ ಸುಳಿವು ನೀಡಿದ್ರಾ ಡಿಕೆ ಶಿವಕುಮಾರ್!

ಬೆಳಗಾವಿ ಅಧಿವೇಶನದಲ್ಲಿ ಗುರುವಾರ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಧ್ಯೆ ಸ್ವಾರಸ್ಯಕರ ಚರ್ಚೆ ನಡೆಯಿತು. ಜ್ಯೋತಿಷಿಯೊಬ್ಬರು ನುಡಿದಿದ್ದ ಭವಿಷ್ಯದ ಬಗ್ಗೆ ಮಾಜಿ ಸಿಎಂ ಎಸ್​​ಎಂ ಕೃಷ್ಣ ಅವರಿಗೆ ನುಡಿನಮನ ಸಲ್ಲಿಸುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಸ್ತಾಪಿಸಿದ್ದು ಕುತೂಹಲ ಸೃಷ್ಟಿಸಿದೆ.

ನನಗೆ ಜ್ಯೋತಿಷಿ ಹೇಳಿದ್ದು ಕೇಳಿದ್ರೆ... ಸಿಎಂ ಆಗೋ ಸುಳಿವು ನೀಡಿದ್ರಾ ಡಿಕೆ ಶಿವಕುಮಾರ್!
ಡಿಕೆ ಶಿವಕುಮಾರ್
ಕಿರಣ್​ ಹನಿಯಡ್ಕ
| Edited By: |

Updated on: Dec 12, 2024 | 2:05 PM

Share

ಬೆಳಗಾವಿ, ಡಿಸೆಂಬರ್ 12: ಬೆಳಗಾವಿ ಅಧಿವೇಶನದ ನಾಲ್ಕನೇ ದಿನವಾದ ಗುರುವಾರ ಕಲಾಪದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮಂಗಳವಾರ ನಿಧನರಾದ ಮಾಜಿ ಸಿಎಂ ಎಸ್​ಎಂ ಕೃಷ್ಣಗೆ ನುಡಿ ನಮನ ಸಲ್ಲಿಸಿದರು. ಇದೇ ವೇಳೆ ಅವರು ಜ್ಯೋತಿಷಿಯೊಬ್ಬರು ಅಂದು ಎಸ್​ಎಂ ಕೃಷ್ಣ ಹಾಗೂ ತಮ್ಮ ಬಗ್ಗೆ ನುಡಿದಿದ್ದ ಭವಿಷ್ಯವಾಣಿಯನ್ನು ನೆನಪಿಸಿಕೊಂಡರು. ಇದು ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಧ್ಯೆ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು.

ಡಿಕೆ ಶಿವಕುಮಾರ್ ಹೇಳಿದ್ದೇನು?

ಎಸ್​​ಎಂ ಕೃಷ್ಣ ಅವರು ರಾಜ್ಯಸಭೆ ಸದಸ್ಯರಾಗುವ ಬಗ್ಗೆ ಜ್ಯೋತಿಷಿ ಹೇಳಿದ್ದರು. ನನಗೂ ಅದೇ ಜ್ಯೋತಿಷಿ, ನೀನು ಇಷ್ಟು ವರ್ಷ ಶಾಸಕ ಆಗುತ್ತೀಯಾ, ಮಂತ್ರಿ ಆಗುತ್ತಿಯಾ, ನಿನಗೆ ಟಿಕೆಟ್ ಸಿಗಲ್ಲ ಎಂಬ ಭವಿಷ್ಯಗಳನ್ನು ನುಡಿದಿದ್ದರು. ಏನೇನು ಸ್ಥಾನ ಸಿಕ್ಕಿದೆ ಎಂದೂ ಹೇಳಿದ್ದರು ಎಂದು ಡಿಕೆ ಶಿವಕುಮಾರ್ ಹೇಳಿದರು.

ಮುಂದುವರಿದು, ಅಶೋಕ್ ಅವರೇ ಜ್ಯೋತಿಷಿ ಏನೇನು ಹೇಳಿದ್ದಾರೆ ಅಂತ ಇಲ್ಲಿ ಹೇಳಿದರೆ ನಿಮ್ಮ (ಬಿಜೆಪಿ) 25 ಶಾಸಕರು, ದಳದವರು ನಮ್ಮ ಕಡೆ ಬರಲಿದ್ದಾರೆ. ಹಾಗಾಗಿ ಅ ಬಗ್ಗೆ ಇಲ್ಲಿ ಚರ್ಚೆ ಬೇಡ, ಕೊಠಡಿಯಲ್ಲಿ ಮಾತನಾಡೋಣ ಎಂದರು. ಇದರಿಂದ, ಜ್ಯೋತಿಷಿ ಡಿಕೆ ಶಿವಕುಮಾರ್​ಗೆ ಸಿಎಂ ಆಗುವ ಭವಿಷ್ಯ ನುಡಿದಿದ್ದರೇ ಎಂಬ ಅನುಮಾನ ವ್ಯಕ್ತವಾಗಿದೆ.

ಅಶೋಕ್ ಹೇಳಿದ್ದೇನು?

ಡಿಕೆ ಶಿವಕುಮಾರ್ ಮಾತಿಗೆ ಪ್ರತಿಕ್ರಿಯಿಸಿದ ಅಶೋಕ್, ನಿಮ್ಮ ಮಾತಿಗೆ ಸಹಮತ ಇದೆ. ಬಹುಶಃ ನೀವೇ ನಮ್ಮ ಕಡೆಗೆ ಬರಬಹುದು. ಆಗ ನಾವೆಲ್ಲಾ ನಿಮ್ಮ ಜೊತೆ ಬರುತ್ತೇವೆ ಎಂದು ಟಾಂಗ್ ಕೊಟ್ಟರು.

ಎಸ್​ಎಂ ಕೃಷ್ಣ ನಿಧನದಿಂದ ಸಂತಸವಾಗಿದೆ! ಡಿಕೆ ಶಿವಕುಮಾರ್

ಎಸ್ಎಂ ಕೃಷ್ಣ ಅವರ ನಿಧನ ನನಗೆ ದುಃಖ ತಂದಿಲ್ಲ, ಬದಲಿಗೆ ಸಂತೋಷ ತಂದಿದೆ. ಹುಟ್ಟಿದ ಮೇಲೆ ಒಬ್ಬ ಮನುಷ್ಯ ಸಾಯಲೇಬೇಕು. ಕೃಷ್ಣ ಅವರು 92 ವರ್ಷಗಳ ತುಂಬು ಜೀವನ ನಡೆಸಿದ್ದಾರೆ. ಕೊನೆಯ ನಾಲ್ಕು ತಿಂಗಳು ಮಾತ್ರ ಅನಾರೋಗ್ಯಕ್ಕೆ ತುತ್ತಾಗಿ ಇದ್ದರು. ನಮ್ಮದು ರಾಜಕೀಯ ನಂಟು, ವೈಯಕ್ತಿಕ ಸಂಬಂಧ. ಅವರ ಬದುಕು ಬಹಳ ಹತ್ತಿರದಿಂದ ನೋಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾನು ಕೃಷ್ಣ ಅವರಿಂದ ರಾಜಕೀಯ ಶುರು ಮಾಡಲಿಲ್ಲ. ನಾನು ಬಂಗಾರಪ್ಪ ಅವರಿಂದ ವಿದ್ಯಾರ್ಥಿ ರಾಜಕೀಯ ಆರಂಭ ಮಾಡಿದ್ದು. ಬಂಗಾರಪ್ಪ ಹೊಸ ಪಕ್ಷ ಕಟ್ಟಿದಾಗ ನಾನು ಕೃಷ್ಣ ಅವರ ಜೊತೆ ಹೋದೆ. ಆಗ ನಾನು ರಾಜಕೀಯದಲ್ಲಿದ್ದೆ, ಶಾಸಕ ಆಗಿದ್ದೆ. ನಮ್ಮಿಬ್ಬರದ್ದು ತಂದೆ ಮಗನ ಸಂಬಂಧ ತರಹ ಇತ್ತು. ಒಂದೆರಡು ಮೂರು ವಿಚಾರಗಳಲ್ಲಿ ನನಗೂ ಕೃಷ್ಣ ಅವರಿಗೂ ಭಿನ್ನಾಭಿಪ್ರಾಯ ಇತ್ತು, ಅದೇನು ಅಂತ ನಾನು ಇಲ್ಲಿ ಹೇಳುವುದಿಲ್ಲ. ಆದರ್ಶ ಇಲ್ಲದ ಬದುಕು ಬದುಕಲ್ಲ ಅಂತ ವಿವೇಕಾನಂದ ಹೇಳಿದ್ದಾರೆ. ಕೃಷ್ಣ ಅವರು ಆದರ್ಶದ ಬದುಕು ಬಿಟ್ಟು ಹೋಗಿದ್ದಾರೆ. ಅವರು 92 ವರ್ಷ ತುಂಬು ಜೀವನ ನಡೆಸಿದ್ದಾರೆ. ಅರ್ಥಪೂರ್ಣವಾದ ಸಂಪೂರ್ಣ ಬದುಕು ಅವರದ್ದು. ಈ ವಿಚಾರದಲ್ಲಿ ಸಂತಸವಿದೆ ಎಂದ ಅವರು ಹೇಳಿದ್ದಾರೆ.

ಇದನ್ನೂ ಓದಿ: ತಾವೊಬ್ಬ ಡಿಸಿಎಂ ಎನ್ನುವುದನ್ನೇ ಮರೆತು ಗುರುವಿನ ಋಣ ತೀರಿಸಿದ ಡಿಕೆ ಶಿವಕುಮಾರ್

ನಂತರ ಮಾತನಾಡಿದ ಅಶೋಕ್, ಎಸ್​ಎಂ ಕೃಷ್ಣಗೆ ನಮನ ಸಲ್ಲಿಸಿದರು. ಅಂತ್ಯಸಂಸ್ಕಾರಕ್ಕೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದಕ್ಕೆ ಡಿಕೆ ಶಿವಕುಮಾರ್ ಹಾಗೂ ಶಾಸಕ ಅಶ್ವತ್ಥನಾರಾಯಣಗೆ ಅಭಿನಂದನೆ ಸಲ್ಲಿಸಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್