Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವೇಷ ಭಾಷಣ ನಿಯಂತ್ರಿಸಲು ಬಲಪಂಥೀಯ ಕಾರ್ಯಕರ್ತರ ಮೇಲೆ ನಿಗಾ: ಜಿ ಪರಮೇಶ್ವರ

ದ್ವೇಷದ ಭಾಷಣಗಳನ್ನು ತಡೆಯಲು ಸರ್ಕಾರ ಕೇವಲ ನಿಗಾ ಇರಿಸಿದೆ ಅಷ್ಟೇ. ಭಾಷಣಗಳು ಸಮಾಜದಲ್ಲಿ ಸಂಘರ್ಷ ಉಂಟುಮಾಡುವ ವಿಷಯವನ್ನು ಹೊಂದಿದ್ದರೆ ಮಾತ್ರ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ದ್ವೇಷ ಭಾಷಣ ನಿಯಂತ್ರಿಸಲು ಬಲಪಂಥೀಯ ಕಾರ್ಯಕರ್ತರ ಮೇಲೆ ನಿಗಾ: ಜಿ ಪರಮೇಶ್ವರ
ಜಿ ಪರಮೇಶ್ವರ
Follow us
TV9 Web
| Updated By: Ganapathi Sharma

Updated on: Dec 15, 2023 | 8:44 AM

ಬೆಳಗಾವಿ, ಡಿಸೆಂಬರ್ 15: ದ್ವೇಷದ ಭಾಷಣ ಪ್ರಕರಣಗಳನ್ನು ತಡೆಯಲು ಬಲಪಂಥೀಯ ಕಾರ್ಯಕರ್ತರ ಮೇಲೆ ಸರ್ಕಾರ ನಿಗಾ ಇರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಅವರು ಬೆಳಗಾವಿ ಅಧಿವೇಶನದಲ್ಲಿ (Belagavi Session) ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ. ಇದು ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧಕ್ಕೆ ಕಾರಣವಾಯಿತು. ಚಕ್ರವರ್ತಿ ಸೂಲಿಬೆಲೆ ಅವರಂತಹ ಕಾರ್ಯಕರ್ತರನ್ನು ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದುತ್ವವಾದಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಬಗ್ಗೆ ಬಿಜೆಪಿಯ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಅಂತಹ ಯಾವುದೇ ಘಟನೆ ವರದಿಯಾಗಿಲ್ಲ. ಆದರೂ ಸರ್ಕಾರ ಬಲಪಂಥೀಯ ಕಾರ್ಯಕರ್ತರು ನೀಡುವ ಹೇಳಿಕೆಗಳ ಮೇಲೆ ನಿಗಾ ಇಟ್ಟಿದೆ ಎಂದು ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರು ಯುವಕರಲ್ಲಿ ರಾಷ್ಟ್ರಾಭಿಮಾನ ಮೂಡಿಸಿದ್ದಾರೆ. ಅವರ ವಿರುದ್ಧ ಕೋಮುಗಲಭೆ ಪ್ರಕರಣಗಳನ್ನು ಹಾಕುವ ಮೂಲಕ ಕಾಂಗ್ರೆಸ್ ಅವರನ್ನು ಗುರಿಯಾಗಿಸುತ್ತಿದೆ ಎಂದು ಗೌಡ ದೂರಿದ್ದಾರೆ.

ಗೌಡ ಅವರ ಆರೋಪಗಳನ್ನು ತಳ್ಳಿಹಾಕಿದ ಪರಮೇಶ್ವರ, ದ್ವೇಷದ ಭಾಷಣಗಳನ್ನು ತಡೆಯಲು ಸರ್ಕಾರ ಕೇವಲ ನಿಗಾ ಇರಿಸಿದೆ ಅಷ್ಟೇ ಎಂದು ಹೇಳಿದ್ದಾರೆ.

ಭಾಷಣಗಳು ಸಮಾಜದಲ್ಲಿ ಸಂಘರ್ಷ ಉಂಟುಮಾಡುವ ವಿಷಯವನ್ನು ಹೊಂದಿದ್ದರೆ ಮಾತ್ರ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?

ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದ ಅವರು, ಕಳೆದ ಆರು ತಿಂಗಳಲ್ಲಿ 616 ಕೊಲೆಗಳು ಮತ್ತು 310 ಅತ್ಯಾಚಾರಗಳು ನಡೆದಿವೆ. ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ಗೃಹ ಸಚಿವರಾಗಿದ್ದಾಗ 2 ವರ್ಷಗಳಲ್ಲಿ 4,121 ಕೊಲೆಗಳು ಮತ್ತು 1,039 ಅತ್ಯಾಚಾರ ಪ್ರಕರಣಗಳಿಗೆ ಹೋಲಿಸಿದರೆ ಇದು ಕಡಿಮೆ ಎಂದಿದ್ದಾರೆ. ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ (23 ತಿಂಗಳು) 2,554 ಕೊಲೆಗಳು ಮತ್ತು 915 ಅತ್ಯಾಚಾರಗಳು, ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ (21 ತಿಂಗಳುಗಳು) 2,417 ಕೊಲೆಗಳು ಮತ್ತು 949 ಅತ್ಯಾಚಾರಗಳು ನಡೆದಿದ್ದವು. ಇಂಥ ಘಟನೆಗಳಲ್ಲಿ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗುವುದು ಎಂಬುದರ ಬಗ್ಗೆ ನಾವು ಖಾತರಿ ನೀಡುತ್ತೇವೆ ಎಂದು ಪರಮೇಶ್ವರ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!