ಬೆಳಗಾವಿ ಅಧಿವೇಶನ: ಸದನದ ಒಳಗೆ ವಿಪಕ್ಷಗಳ ಸಮರ, ಹೊರಗೆ ಸಂಘಟನೆಗಳ ಸಾಲು ಸಾಲು ಪ್ರತಿಭಟನೆ

ಬೆಳಗಾವಿಯಲ್ಲಿ ಅಧಿವೇಶನ ಆರಂಭವಾದ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆಗಳೂ ಶುರುವಾಗಿವೆ. ಸುವರ್ಣಸೌಧದದ ಹೊರಗಡೆ 11 ವಿವಿಧ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟನೆ ಮಾಡಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿವೆ. ಈ ಮಧ್ಯೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟಕ್ಕೆ ಮುಂದಾಗಿದ್ದವರಿಗೆ ಸರ್ಕಾರ ಶಾಕ್ ನೀಡಿದೆ.

ಬೆಳಗಾವಿ ಅಧಿವೇಶನ: ಸದನದ ಒಳಗೆ ವಿಪಕ್ಷಗಳ ಸಮರ, ಹೊರಗೆ ಸಂಘಟನೆಗಳ ಸಾಲು ಸಾಲು ಪ್ರತಿಭಟನೆ
ಬೆಳಗಾವಿ ಅಧಿವೇಶನ
Edited By:

Updated on: Dec 09, 2024 | 1:33 PM

ಬೆಳಗಾವಿ, ಡಿಸೆಂಬರ್ 9: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಸುರ್ವಣಸೌಧ ಸಾಲು ಸಾಲು ಪ್ರತಿಭಟನೆಗೆ ಸಾಕ್ಷಿಯಾಗುತ್ತಿದೆ. 11 ವಿವಿಧ ಸಂಘಟನೆಗಳು, ತಮ್ಮ ಬೇಡಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ. ಬೆಳಗಾವಿಯಲ್ಲಿ ಅಧಿವೇಶನದ ಹೊತ್ತಲ್ಲೇ ಮತ್ತೆ ಪಂಚಮಸಾಲಿ ಸಮುದಾಕ್ಕೆ 2A ಮೀಸಲಾತಿಗಾಗಿ ರಣಕಹಳೆ ಮೊಳಗಿಸಲಾಗಿದೆ. ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು. ಅಷ್ಟೇ ಅಲ್ಲ ಟ್ರ್ಯಾಕ್ಟರ್ ಚಲೋಗೆ ಕರೆ ನೀಡಲಾಗಿತ್ತು.

ಆದರೆ, ಸರ್ಕಾರ ಪಂಚಮಸಾಲಿ ಮೀಸಲಾತಿ ಹೋರಾಟಗಾರರಿಗೆ ಶಾಕ್ ಕೊಟ್ಟಿದೆ. ಇಂದು ಮತ್ತು ನಾಳೆ ಹೋರಾಟದ ವಾಹನಗಳಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿದೆ. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಆದೇಶ ಮಾಡಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಅದರಲ್ಲೂ, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವವನ್ನೇ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಆದರೆ, ಬಿಜೆಪಿ ನಾಯಕರ ಆರೋಪವನ್ನು ಸಚಿವರು ತಳ್ಳಿ ಹಾಕಿದ್ದಾರೆ.

ಏತನ್ಮಧ್ಯೆ ‘ಟಿವಿ9’ ಎಕ್ಸ್​ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿರುವ ಯತ್ನಾಳ್, ಪಂಚಮಸಾಲಿ ಸಮುದಾಯಕ್ಕೆ ನೂರಕ್ಕೆ ನೂರರಷ್ಟು ಮೀಸಲಾತಿ ಸಿಗುತ್ತದೆ ಎಂದಿದ್ದಾರೆ. ನಮ್ಮ ಸಮುದಾಯದ ಮೇಲೆ ಗುಂಡು ಹಾಕುವ ತಾಕತ್ತು ಈ ಸರ್ಕಾರಕ್ಕೆ ಇದೆಯಾ ಎಂದು ಯತ್ನಾಳ್ ಗುಡುಗಿದ್ದಾರೆ.

ಈ ಮಧ್ಯೆ ಮಹದಾಯಿ ಯೋಜನೆ ಅನುಷ್ಠಾನ ಮಾಡಬೇಕು, ಕಬ್ಬಿನ ಬಿಲ್ ನಿಗದಿ ಮಾಡಬೇಕು, ವಕ್ಫ್​​ನಿಂದ ರೈತರ ಜಮೀನು ರಕ್ಷಣೆಗೆ ಒತ್ತಾಯಿಸಿ, ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಇದನ್ನೂ ಓದಿ: ಬೆಳಗಾವಿ ಅಧಿವೇಶನದ ವಿರುದ್ಧ ಪ್ರತಿಭಟನೆ: ಎಂಇಎಸ್ ಮುಖಂಡರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಎಸ್​ಆರ್​ಟಿಸಿ ಲೇಬರ್ ನಿಗಮ ಸಂಘ, ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಸಂಘ ಪ್ರತಿಭಟನೆಗೆ ಮುಂದಾಗಿದೆ. ಗದಗ ಹರಪನಹಳ್ಳಿ ರೈಲು ಮಾರ್ಗ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ ಸೇರಿದಂತೆ ಹೀಗೆ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Mon, 9 December 24