Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ: ದಶಕದ ಬಳಿಕ ದಾಖಲೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ವಿಧಾನಸಭೆ ಅಧಿವೇಶನವು ಸರಿಸುಮಾರು 15 ಗಂಟೆಗಳ ಕಾಲ ನಡೆದು ದಾಖಲೆ ನಿರ್ಮಿಸಿತು. ಸ್ಪೀಕರ್ ಯುಟಿ ಖಾದರ್ ಇದು ದಾಖಲೆಯ ಕಲಾಪ ಎಂದು ಬಣ್ಣಿಸಿದ್ದಾರೆ. ವಿವಿಧ ವಿಷಯಗಳ ಕುರಿತು ಚರ್ಚೆ ನಡೆದು, 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ದಾಖಲೆಯ ಕಲಾಪಕ್ಕೆ ಕಾರಣವೇನು? ಈ ಹಿಂದೆ ಎಷ್ಟು ಗಂಟೆಯ ಸುದೀರ್ಘ ಕಲಾಪ ನಡೆದಿತ್ತು ಎಂಬ ವಿವರ ಇಲ್ಲಿದೆ.

ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ: ದಶಕದ ಬಳಿಕ ದಾಖಲೆ
ವಿಧಾನಸಭೆ ಕಲಾಪ
Follow us
ಪ್ರಸನ್ನ ಗಾಂವ್ಕರ್​
| Updated By: Ganapathi Sharma

Updated on: Dec 17, 2024 | 7:02 AM

ಬೆಳಗಾವಿ, ಡಿಸೆಂಬರ್ 17: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ (ಡಿಸೆಂಬರ್ 16) ವಿಶೇಷ ಸನ್ನಿವೇಶವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ರಾತ್ರಿ 12.55 ರ ವರೆಗೂ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನಾ ಕಲಾಪ ನಡೆದಿದೆ. ಕಳೆದೊಂದು ದಶಕದಲ್ಲೇ ಇದು ವಿಶೇಷ ದಾಖಲೆಯ ಕಲಾಪವಾಗಿದೆ.

ವಿಶ್ವಕಪ್ ಅಂದುಕೊಂಡು ಸಹಕಾರ ಕೊಡಿ ಎಂದ ಖಾದರ್

ನಮಗೆ ಅವಕಾಶ ಕೊಡಿ, ಸಮಯವಾಯಿತು ಎಂದು ಕೆಲ ಶಾಸಕರು ಆಗ್ರಹಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ವಿಶ್ವಕಪ್ ಕ್ರಿಕೆಟ್ ನೋಡುವಾಗ ರಾತ್ರಿ 3 ಗಂಟೆಯವರೆಗೆ ಕಾಯುವುದಿಲ್ಲವೇ? ಅದೇ ರೀತಿ ಈಗ ವಿಶ್ವಕಪ್ ಅಂದುಕೊಂಡು ಸಹಕಾರ ಕೊಡಿ ಎಂದರು. ಮಧ್ಯರಾತ್ರಿ ಆದರೂ ತಮ್ಮ ಗಮನ ಸೆಳೆಯುವ ಸೂಚನೆಗೆ ಸಚಿವರ ಉತ್ತರ ಪಡೆಯಲು ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ನಾಯ್ಕ್ ಹಾಜರಿದ್ದರು.

ತಮ್ಮ ಸರದಿ ಬಂದಾಗ ಇಂಡಿ ಶಾಸಕ ಯಶವಂತರಾಯಗೌಡ, ಕರೆಮ್ಮ ಅವ್ರು ಬಹಳ ಹೊತ್ತಿನಿಂದ ಇದ್ದಾರೆ. ಅವರಿಗೆ ಉತ್ತರ ಕೊಟ್ಟು ಕಳುಹಿಸಿ ಎಂದು ಮನವಿ ಮಾಡಿದರು. ಬೆಳಗ್ಗೆ 10 ಗಂಟೆಗೆ ಕಲಾಪ ಮುಂದೂಡಿದ ವೇಳೆ, ಸದನದಲ್ಲಿ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್ ಮೂವರು ಸಚಿವರು, 7 ಕಾಂಗ್ರೆಸ್ ಶಾಸಕರು, 4 ಜೆಡಿಎಸ್ ಶಾಸಕರು, ಓರ್ವ ಬಿಜೆಪಿ ಶಾಸಕ ಮತ್ತು 1 ಪಕ್ಷೇತರ ಶಾಸಕ ಹಾಜರಿದ್ದರು.

ಇದು ದಾಖಲೆಯ ಕಲಾಪ: ಯುಟಿ ಖಾದರ್

ಮಧ್ಯರಾತ್ರಿವರೆಗೂ ನಡೆದ ವಿಧಾನಸಭೆ ಕಲಾಪದ ಕುರಿತು ‘ಟಿವಿ9’ ಜತೆ ಮಾತನಾಡಿದ ಸಭಾಧ್ಯಕ್ಷ ಯುಟಿ ಖಾದರ್, ಇದು ಕಳೆದ 10 ವರ್ಷಗಳಲ್ಲೇ ದಾಖಲೆಯ ಕಲಾಪ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಕೂಡ, ಇದೊಂದು ವಿಶೇಷ ಘಳಿಗೆ ಎಂದು ಬಣ್ಣಿಸಿದ್ದಾರೆ.

ಶಾಸಕಿ ಕರೆಮ್ಮ ಮಧ್ಯರಾತ್ರಿವರೆಗೂ ಉಪಸ್ಥಿತರಿದ್ದು, ಚರ್ಚೆಯಲ್ಲಿ ಪಾಲ್ಗೊಂಡಿದ್ದು ಶ್ಲಾಘನೀಯ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಡ ರಾತ್ರಿವರೆಗೂ ಅಧಿವೇಶನ: ಇದೇ ಮೊದಲಲ್ಲ!

ಅಂದಹಾಗೆ, ಇಷ್ಟೊಂದು ಸುದೀರ್ಘ ಅವಧಿ ಕಲಾಪ ನಡೆದಿದ್ದು ಇದೇ ಮೊದಲು ಏನಲ್ಲ. ಈ ಹಿಂದೆ ಕೆಜಿ ಬೋಪಯ್ಯ ಸ್ಪೀಕರ್ ಆಗಿದ್ದಾಗ ಮಧ್ಯರಾತ್ರಿ 1.45 ರ ವರೆಗೆ ಕಲಾಪ ನಡೆದಿತ್ತು.

ಸುದೀರ್ಘ ಕಲಾಪಕ್ಕೆ ಕಾರಣವೇನು?

ಬೆಳಗಾವಿಯಲ್ಲಿ 10 ದಿನಗಳ ಕಾಲ ಅಧಿವೇಶನ ನಿಗದಿಯಾಗಿತ್ತು. ಆದರೆ, ಕನ್ನಡಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ 9 ದಿನಕ್ಕೆ ಮೊಟಕುಗೊಳಿಸಲಾಗಿದೆ. ಏತನ್ಮಧ್ಯೆ, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ನಿಧನದಿಂದಾಗಿ ಕಳೆದ ಮಂಗಳವಾರ ಇಡೀ ದಿನ ಸಂತಾಪ ಸೂಚನೆಗೆ ಮಾತ್ರ ಸೀಮಿತವಾಗಿತ್ತು. ಅಲ್ಲದೆ ಬುಧವಾರ ಸರ್ಕಾರಿ ರಜೆ ಘೋಷಣೆಯಿಂದಾಗಿ ಕಲಾಪ ನಡೆಯಲಿಲ್ಲ. ಹೀಗಾಗಿ ಅಧಿವೇಶನ 8 ದಿನಕ್ಕೆ ಇಳಿಕೆಯಾಗಿತ್ತು. ಹೀಗಾಗಿ ವಿಧಾನಸಭೆಯ ಕಾರ್ಯಕಲಾಪವನ್ನು ಪೂರ್ಣಗೊಳಿಸುವ ಉದ್ದೇಶದಿಂದ ನಂತರದ ದಿನಗಳ ಕಲಾಪದ ಅವಧಿಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: 150 ಕೋಟಿ ಆಮಿಷ ವಿಚಾರ: ಮಾಣಿಪ್ಪಾಡಿ ದ್ವಿಪಾತ್ರಭಿನಯ ಮಾಡುತ್ತಿದ್ದಾರೆಯೇ? ಪ್ರಿಯಾಂಕ್ ಖರ್ಗೆ

ವಕ್ಫ್ ವಿವಾದ, ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ವಿಚಾರಗಳು ಸೋಮವಾರ ಸದನದಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಮುನಿರತ್ನ ನಾಯ್ಡು ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಕೂಡ ಭಾರೀ ಕೋಲಾಹಲಕ್ಕೆ ಕಾರಣವಾಯಿತು. ಮುನಿರತ್ನ ರಾಜೀನಾಮೆಗೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು ಧಿಕ್ಕಾರ ಮೊಳಗಿಸಿ ಘೋಷಣೆಗಳನ್ನು ಕೂಗಿದರು. ಒಟ್ಟಾರೆ 8 ವಿಧೇಯಕಗಳಿಗೆ ಅಂಗೀಕಾರ ಪಡೆಯಲಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು