Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ

ಬೆಳಗಾವಿ ಅಧಿವೇಶನದ ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಜನವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ಕನ್ನಡದಲ್ಲೇ ಮಾತನಾಡುವಂತೆ ಹೇಳಿದರು.

Belagavi Session: ಕಲಾಪದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡಿದ ಖಾನಾಪುರ ಶಾಸಕ ವಿಠಲ ಹಲಗೇಕರ್; ಲಕ್ಷ್ಮಣ್ ಸವದಿ ಆಕ್ಷೇಪ
ಬಿಜೆಪಿ ಶಾಸಕ ವಿಠಲ ಹಲಗೇಕರ್ ಮತ್ತು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on:Dec 15, 2023 | 2:14 PM

ವಿಧಾನಸಭೆ, ಡಿ.15: ಬೆಳಗಾವಿ ಅಧಿವೇಶನದ (Belagavi Session) ಕೊನೆಯ ದಿನವಾದ ಇಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠಲ ಹಲಗೇಕರ್ (Vitthal Halgekar) ಅವರು ಮರಾಠಿ ಭಾಷೆಯಲ್ಲಿ ಮಾತನಾಡಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ (Laxman Savadi) ಆಕ್ಷೇಪ ವ್ಯಕ್ತಪಡಿಸಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆಯಿತು.

ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಕುರಿತ ಚರ್ಚೆ ವೇಳೆ ಖಾನಾಪುರ ಶಾಸಕ ವಿಠಲ ಹಲಗೇಕರ್ ಅವರು ಮರಾಠಿಯಲ್ಲಿ ಮಾತನಾಡಿದರು. ಖಾನಾಪುರ ಕ್ಷೇತ್ರದ ಅಂಗನವಾಡಿಗೆ ಮರಾಠಿ ಟೀಚರ್ ನೇಮಕ ಮಾಡುವಂತೆ ಒತ್ತಾಯಿಸಿದರು.

ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?

ಕನ್ನಡ ಬಿಟ್ಟು ಮರಾಠಿ ಭಾಷೆಯಲ್ಲಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ಕನ್ನಡ ಭಾಷೆ ಬೆಳೆಯಬೇಕಾದರೆ ಬೇರೆ ಭಾಷೆಯನ್ನು ದ್ವೇಷಿಸಬೇಡಿ ಎಂದು ಸವದಿಗೆ ಹಿತವಚನ ನೀಡಿದರು.

ಈ ವೇಳೆ ಎದ್ದುನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೇಗ ಭಾಷಣ ಮುಗಿಸಲು ಹೇಳಿ ಎಂದು ಸ್ಪೀಕರ್ ಅವರಲ್ಲಿ ಮನವಿ ಮಾಡಿದರು. ಮಾತು ಮುಂದುವರಿಸಿದ ವಿಠಲ ಹಲಗೇಕರ್, ಸವದಿ ಅವರು ಸದನದಲ್ಲಿ ಕನ್ನಡ ಮಾತಾಡಿ ಹೊರಗೆ ಮರಾಠಿ ಮಾತನಾಡುತ್ತಾರೆ ಎಂದು ಹೇಳಿದರು. ಮತ್ತೆ ಮಧ್ಯಪ್ರವೇಶಿಸಿದ ಸ್ಪೀಕರ್, ಜನವರಿ ಅಧಿವೇಶನದಲ್ಲಿ ಕನ್ನಡದಲ್ಲಿ ಮಾತಾಡಿ ಎಂದು ಹಲಗೇಕರ್​ಗೆ ಸೂಚಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:12 pm, Fri, 15 December 23

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ