ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್!

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣ ವಿಧಾನಸೌಧದ ಬಳಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ನಡುವೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಕೂಡ ಪ್ರತಿಭಟನೆ ಆರಂಭಿಸಿದ್ದು, ಮದ್ಯ ಪ್ರಿಯರ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್ ಆಗಿದ್ದಾರೆ.

ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್!
ಬೆಳಗಾವಿಯಲ್ಲಿ ಮದ್ಯ ಪ್ರಿಯರ ಪ್ರತಿಭಟನೆ, ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಶಾಕ್
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: Rakesh Nayak Manchi

Updated on:Dec 14, 2023 | 3:46 PM

ಬೆಳಗಾವಿ, ಡಿ.14: ಅಧಿವೇಶನದ (Belagavi Session) ನಡುವೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಹಲವು ಸಂಘಟನೆಗಳು ಸುರ್ವಣ ವಿಧಾನಸೌಧದ ಬಳಿ ಪ್ರತಿಭಟನೆಗಳನ್ನು (Protest) ನಡೆಸುತ್ತಿವೆ. ಈ ನಡುವೆ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ತುಂಬುವ ಮದ್ಯ ಪ್ರಿಯರು ಕೂಡ ಪ್ರತಿಭಟನೆಗೆ ಇಳಿದಿದ್ದಾರೆ. ಇವರ ವಿವಿಧ ಬೇಡಿಕೆಗಳನ್ನು ಕೇಳಿ ಸಚಿವ ಸಂತೋಷ್ ಲಾಡ್ ಅವರು ಅಚ್ಚರಿ ಹಾಗೂ ಶಾಕ್ ಆಗಿದ್ದಾರೆ.

ಸುವರ್ಣಗಾರ್ಡನ್ ಟೆಂಟ್‌ನಲ್ಲಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘ ಪ್ರತಿಭಟನೆ ನಡೆಸುತ್ತಿದ್ದು, “ನಿತ್ಯ ದುಡಿ.. ಸತ್ಯ ನುಡಿ.. ಸ್ವಲ್ಪ ಕುಡಿ.. ಮನೆಗೆ ನಡಿ” ಎಂಬ ಘೋಷವಾಕ್ಯದಡಿ ಹೋರಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಪ್ರತಿಭಟನಾನಿರತ ಮದ್ಯಪ್ರಿಯರ ಜೊತೆ ಕುಳಿತು ಶಾಂತಚಿತ್ತದಿಂದ ಸಮಸ್ಯೆ ಆಲಿಸಿದರು.

ಇದನ್ನೂ ಓದಿ: BBMP ವಾರ್ಡ್ ಮರು ವಿಂಗಡಣೆ ಬಳಿಕ RTE ಶಿಕ್ಷಣದಿಂದ ವಂಚಿತರಾದ ಬಡ ಮಕ್ಕಳು, ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ 

ಈ ವೇಳೆ ಮದ್ಯಪ್ರಿಯರ ಮನವಿ ಕೇಳಿ ಸಚಿವ ಸಂತೋಷ್ ಲಾಡ್‌ ಅವರು ಅಚ್ವರಿಗೊಳಗಾಗಿದ್ದಾರೆ. ಹಾಗಿದ್ದರೆ ಮದ್ಯ ಪ್ರಿಯರು ಮುಂದಿಟ್ಟ ಬೇಡಿಕೆಗಳು ಯಾವುವು? ಈ ಕೆಳಗಿನಂತಿವೆ.

  1. ಮದ್ಯಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು
  2. ಮದ್ಯ ಮಾರಾಟದಿಂದ ಬರುವ ಆದಾಯದ ಶೇಕಡ 10 ರಷ್ಟು ಮೀಸಲಿಡಬೇಕು
  3. ಲೀವರ್ ಸಮಸ್ಯೆಯಿಂದ ಬಳಲುವವರಿಗೆ ಚಿಕಿತ್ಸೆ ಕೊಡಿಸಬೇಕು
  4. ‘ಕುಡುಕ’ ಎಂಬ ಪದ ನಿಷೇಧಿಸಿ ಮದ್ಯ ಪ್ರಿಯರು ಎಂದು ಮಾಡಬೇಕು
  5. ಒಬ್ಬರಿಗೆ ಒಂದು ಕ್ವಾರ್ಟರ್ ನಿಗದಿ ಮಾಡಬೇಕು
  6. ಬಾರ್‌ಗಳಲ್ಲಿ ಸ್ವಚ್ಛತೆ ಕಾಪಾಡಬೇಕು
  7. ಬಾರ್‌ಗಳ ಬಳಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಬೇಕು
  8. ಮದ್ಯಪ್ರಿಯರ ಭವನ ಸ್ಥಾಪಿಸಬೇಕು
  9. ಡಿಸೆಂಬರ್ 31 ಮದ್ಯಾಪನ ಪ್ರಿಯರ ದಿನ ಎಂದು ಘೋಷಣೆ ಮಾಡಬೇಕು
  10. ಮದ್ಯ ಸೇವಿಸಿ ಮೃತಪಟ್ಟರೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು
  11. ಮದ್ಯಪಾನ ಪ್ರಿಯರ ಕುಟುಂಬದಲ್ಲಿ ವಿವಾಹವಾದರೆ ಎರಡು ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು

ಹೀಗೆ ವಿವಿಧ ಬೇಡಿಕೆಗಳನ್ನು ಮದ್ಯ ಪ್ರಿಯರು ಸಚಿವ ಸಂತೋಷ್ ಲಾಡ್ ಮುಂದಿಟ್ಟಿದ್ದಾರೆ. ಮದ್ಯಪ್ರಿಯರ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Thu, 14 December 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ