ನೆಟ್ವರ್ಕ್ ಸಿಗದೇ ವಿದ್ಯಾರ್ಥಿಗಳ ಪರದಾಟ; ಸರ್ಕಾರದ ವಿರುದ್ಧ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಆಕ್ರೋಶ

ಫೇಲ್ಡ್ ಗವರ್ನನ್ಸ್, ಫೇಲ್ಡ್ ಕೋವಿಡ್ ಮ್ಯಾನೇಜ್‌ಮೆಂಟ್ ಎಂಬ ಟ್ಯಾಗ್‌ಲೈನ್ ಹಾಕಿ ಟ್ವೀಟ್ ಮಾಡಿರುವ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಆನ್‌ಲೈನ್ ಕ್ಲಾಸ್‌ಗಳು ಶುರುವಾಗಿದ್ದು, ಕರ್ನಾಟಕ ಗಡಿ ಗ್ರಾಮಗಳಲ್ಲಿ ನೆಟ್ವರ್ಕ್ ಸಿಗುತ್ತಿಲ್ಲ. ಪುಟ್ಟ ಪುಟ್ಟ ವಿದ್ಯಾರ್ಥಿಗಳು ಗುಡ್ಡ ಹತ್ತಿ ಮಹಾರಾಷ್ಟ್ರ ನೆಟ್ವರ್ಕ್ ಆಸರೆ ಪಡೆದು ಆನ್‌ಲೈನ್ ಕ್ಲಾಸ್ ಕೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ನೆಟ್ವರ್ಕ್ ಸಿಗದೇ ವಿದ್ಯಾರ್ಥಿಗಳ ಪರದಾಟ; ಸರ್ಕಾರದ ವಿರುದ್ಧ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಆಕ್ರೋಶ
ನೆಟ್ವರ್ಕ್ ಸಿಗದೇ ವಿದ್ಯಾರ್ಥಿಗಳ ಪರದಾಟ
Follow us
TV9 Web
| Updated By: preethi shettigar

Updated on:Jul 11, 2021 | 2:40 PM

ಬೆಳಗಾವಿ: ಆನ್‌ಲೈನ್ ಕ್ಲಾಸ್‌ಗಾಗಿ ನೆಟ್‌ವರ್ಕ್‌ ಸಿಗದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಖಾನಾಪುರ ತಾಲೂಕಿನ ಮಾನ್, ಸಡಾ, ಪಾರವಾಡ, ಚಿಗುಲೆ ಗ್ರಾಮದ ಮಕ್ಕಳು ನೆರೆಯ ಮಹಾರಾಷ್ಟ್ರದ ಮೊಬೈಲ್ ನೆಟ್ವರ್ಕ್‌ಗಾಗಿ ಗುಡ್ಡ ಹತ್ತುತ್ತಿದ್ದಾರೆ. ಆದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೇಲ್ಡ್ ಗವರ್ನನ್ಸ್, ಫೇಲ್ಡ್ ಕೋವಿಡ್ ಮ್ಯಾನೇಜ್‌ಮೆಂಟ್ ಎಂಬ ಟ್ಯಾಗ್‌ಲೈನ್ ಹಾಕಿ ಟ್ವೀಟ್ ಮಾಡಿರುವ ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್, ಆನ್‌ಲೈನ್ ಕ್ಲಾಸ್‌ಗಳು ಶುರುವಾಗಿದ್ದು, ಕರ್ನಾಟಕ ಗಡಿ ಗ್ರಾಮಗಳಲ್ಲಿ ನೆಟ್ವರ್ಕ್ ಸಿಗುತ್ತಿಲ್ಲ. ಪುಟ್ಟ ಪುಟ್ಟ ವಿದ್ಯಾರ್ಥಿಗಳು ಗುಡ್ಡ ಹತ್ತಿ ಮಹಾರಾಷ್ಟ್ರ ನೆಟ್ವರ್ಕ್ ಆಸರೆ ಪಡೆದು ಆನ್‌ಲೈನ್ ಕ್ಲಾಸ್ ಕೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆನ್​ಲೈನ್​ ಕ್ಲಾಸ್ ಕೇಳಲು ಮನೆ ಮಹಡಿ ಏರಿದ ವಿದ್ಯಾರ್ಥಿಗಳು ಕೊರೊನಾದಿಂದಾದ ಸಮಸ್ಯೆಗಳು ಒಂದೆರಡಲ್ಲ. ಸೋಂಕನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್​ಡೌನ್​ ಜಾರಿಗೊಳಿಸಿತ್ತು. ಸದ್ಯ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭವಾಗಿದೆ. ಆದರೆ ಬಂದ್ ಮಾಡಲಾಗಿದ್ದ ಶಾಲೆ- ಕಾಲೇಜುಗಳನ್ನು ಇನ್ನು ಪ್ರಾರಂಭಿಸಿಲ್ಲ. ಆನ್​ಲೈನ್​ ಮೂಲಕ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಆದರೆ ಸರಿಯಾಗಿ ನೆಟ್​ವರ್ಕ್​ ಸಿಗದೆ ಪರದಾಡುತ್ತಿದ್ದಾರೆ. ಗಾಳಿ, ಮಳೆ ಲೆಕ್ಕಿಸದೆ ವಿದ್ಯಾರ್ಥಿಗಳು ಆನ್​ಲೈನ್ ಪಾಠ ಕೇಳುತ್ತಿದ್ದಾರೆ.

ಗದಗ ತಾಲೂಕಿನ ಕಬಲಾಯತಕಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಪಾಡು ಅಯೋಮಯವಾಗಿದೆ. ನೆಟ್​ವರ್ಕ್​ ಸಿಗದೆ ಮನೆ ಮಾಳಿಗೆ, ಹೊಲ, ಗದ್ದೆಗಳಿಗೆ ಹೋಗುತ್ತಿದ್ದಾರೆ. ಚಳಿ, ಮಳೆ, ಗಾಳಿಗೆ ಲೆಕ್ಕಿಸದೆ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದಾರೆ. ಹೈಸ್ಕೂಲ್, ಬಿಇ, ಬಿ-ಟೆಕ್, ಬಿಎಸ್​ಸಿ, ಬಿಕಾಂ ವಿದ್ಯಾರ್ಥಿಗಳು ಆನ್​ಲೈನ್​ ಕ್ಲಾಸ್ ಕೇಳಲು ಪರದಾಡುತ್ತಿದ್ದು, ಆನ್​ಲೈನ್​ ಕ್ಲಾಸ್​ಗೆ ಮನೆ ಮಾಳಿಗೆ ಏರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನೆಟ್​ವರ್ಕ್​ ಸಮಸ್ಯೆ ಬಗೆಹರಿಸುವಂತೆ ಪಾಲಕರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಆನ್​ಲೈನ್​ ಕ್ಲಾಸ್ ಕೇಳಲು ಮನೆ ಮಹಡಿ ಏರಿದ ವಿದ್ಯಾರ್ಥಿಗಳು; ಗಾಳಿ, ಮಳೆಯಲ್ಲಿ ಪರದಾಟ

ಬಾಲ್ಡ್​ವಿನ್​ ಶಾಲೆಯಿಂದ ಆನ್​ಲೈನ್​ ಕ್ಲಾಸ್ ಆರಂಭ; ಟಿವಿ9ಗೆ ಧನ್ಯವಾದ ತಿಳಿಸಿದ ಪೋಷಕರು

Published On - 2:38 pm, Sun, 11 July 21

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ