ಮಣ್ಣಲ್ಲಿ ಮಣ್ಣಾದ ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ
ಸಕಲ ಸರ್ಕಾರಿ ಗೌರವದೊಂದಿಗೆ ಉಪಸಭಾಪತಿ ಆನಂದ ಮಾಮನಿ ಅವರ ಅಂತ್ಯಕ್ರಿಯೆ ಸವದತ್ತಿ ಪಟ್ಟಣದ ಯಡ್ರಾಂವಿ ರಸ್ತೆಯಲ್ಲಿರುವ ಫಾರ್ಮ್ಹೌಸ್ನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.
ಬೆಳಗಾವಿ: ಸಕಲ ಸರ್ಕಾರಿ ಗೌರವದೊಂದಿಗೆ ವಿಧಾನಸಭೆಯ ಉಪಸಭಾಪತಿ ಆನಂದ ಮಾಮನಿ (Anand Mamani) ಅವರ ಅಂತ್ಯಕ್ರಿಯೆ ಸವದತ್ತಿ ಪಟ್ಟಣದ ಯಡ್ರಾಂವಿ ರಸ್ತೆಯಲ್ಲಿರುವ ಫಾರ್ಮ್ಹೌಸ್ನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ಈ ವೇಳೆ ಸಚಿವರಾದ ಸಿ.ಸಿ.ಪಾಟೀಲ್, ಶಂಕರಪಾಟೀಲ್ ಮುನೇನಕೊಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಹೇಶ ತೆಂಗಿನಕಾಯಿ, ಎನ್.ಹೆಚ್.ಕೋನರೆಡ್ಡಿ ಮತ್ತು ವಿವಿಧ ಮಠಾಧೀಶರು ಇದ್ದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಇತ್ತೀಚೆಗಷ್ಟೇ ಈ ಬಗ್ಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಆನಂದ್ ಮಾಮನಿ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆ ಬರುತ್ತೇನೆ. ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ, ನಾನು ಚೆನ್ನಾಗಿದ್ದೇನೆ ಎಂದಿದ್ದರು.
ಮತ್ತಷ್ಟ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:09 pm, Sun, 23 October 22